ಒತ್ತಡಕ್ಕೆ ಮಣಿದ ಸರ್ಕಾರ: ಅಂಗನವಾಡಿ ಕೇಂದ್ರಲ್ಲೇ ಎಲ್​ಕೆಜಿ, ಯುಕೆಜಿ ಆರಂಭ

ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ತರಗತಿ ಆರಂಭಸಿವ ಚಿಂತನೆಯನ್ನು ಕೈಬಿಟ್ಟು ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿ ತರಗತಿ ಆರಂಭಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಸೋಮವಾರ ಬೆಂಗಳೂರಿನ ಪಟ್ಟ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಚಾಲನೆ ನೀಡಿದರು.

ಒತ್ತಡಕ್ಕೆ ಮಣಿದ ಸರ್ಕಾರ: ಅಂಗನವಾಡಿ ಕೇಂದ್ರಲ್ಲೇ ಎಲ್​ಕೆಜಿ, ಯುಕೆಜಿ ಆರಂಭ
ಅಂಗನವಾಡಿ ಕೇಂದ್ರ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on: Jul 22, 2024 | 1:52 PM

ಬೆಂಗಳೂರು, ಜುಲೈ 22: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ (Karnataka Government) ಅಂಗನವಾಡಿ ಕೇಂದ್ರಗಳಲ್ಲೇ (Anganwadi Centre) ಎಲ್​ಕೆಜಿ ಮತ್ತು ಯುಕೆಜಿ (LKG and UKG) ತರಗತಿ ಪ್ರಾರಂಭಿಸಿದೆ. ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು.

ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ-ಯುಕೆಜಿ ತರಗತಿಗೆ ತೆಗೆದರೆ ಅಂಗನವಾಡಿ ಕೇಂದ್ರಗಳು ಖಾಲಿ ಆಗುತ್ತವೆ. ಕಾರ್ಯಕರ್ತೆಯರು, ಸಹಾಯಕರಿಯರು, ಅಡುಗೆ ಸಹಾಯಕಿರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ಒತ್ತಾಯಿದ್ದರು.ಇದೀಗ, ಸರ್ಕಾರ ಅಂಗನವಾಡಿಯಲ್ಲೇ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಿದೆ.

ಇದನ್ನೂ ಓದಿ: ಟಿವಿ9 ರಿಯಾಲಿಟಿ ಚೆಕ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹುಳುಗಳ ಪಾಲಾದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಗೋಧಿ

ಅಂಗನವಾಡಿ ಶಿಕ್ಷಕಿಯರನ್ನು ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ

ಇಂದಿನಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದರು.

ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ