ಸಂತೋಷ್‌ ಮನೆಗೆ ಸಚಿವ ನಿರಾಣಿ ಭೇಟಿ: ಪತ್ನಿಗೆ ನೌಕರಿ, ಕಾಮಗಾರಿ ಬಾಕಿ ಬಿಲ್ ಬಿಡುಗಡೆಗೆ ಸರ್ಕಾರದಿಂದ ಕ್ರಮದ ಭರವಸೆ

Minister Murugesh Nirani: ಮೃತ ಸಂತೋಷ್​ ಮನೆಗೆ ಆಡಳಿತಾರೂಢ ಬಿಜೆಪಿ ಪಕ್ಷದಿಂದ ಯಾರೂ ಸಂತೋಷ್​ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಲಿಲ್ಲ ಎಂಬ ಟೀಕೆಗೆ ಉತ್ತರ ಕೊಟ್ಟಿದ್ದಾರೆ. ಸಂತೋಷ್​ ಕುಟುಂಬಸ್ಥರಿಗೆ ಸಾಂತ್ವನ ಹೇಳುವುದರ ಜೊತೆಗೆ ಧನ ಸಹಾಯವನ್ನೂ ಘೋಷಿಸಿದ್ದಾರೆ.

ಸಂತೋಷ್‌ ಮನೆಗೆ ಸಚಿವ ನಿರಾಣಿ ಭೇಟಿ: ಪತ್ನಿಗೆ ನೌಕರಿ, ಕಾಮಗಾರಿ ಬಾಕಿ ಬಿಲ್ ಬಿಡುಗಡೆಗೆ ಸರ್ಕಾರದಿಂದ ಕ್ರಮದ ಭರವಸೆ
ಮುರುಗೇಶ್ ನಿರಾಣಿ (ಸಂಗ್ರಹ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 14, 2022 | 9:06 PM

ಬೆಳಗಾವಿ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ (Contractor Santosh Patil) ಪ್ರಥಮ ಆರೋಪಿಯಾಗಿರುವ ಕೆ ಎಸ್​ ಈಶ್ವರಪ್ಪ (KS Eshwarappa) ಅವರು ತಮ್ಮ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿ ಅತ್ತ ಶಿವಮೊಗ್ಗದಲ್ಲಿ ಪ್ರಕಟಿಸುತ್ತಿದ್ದಂತೆ ಇತ್ತ ಗಣಿ ಸಚಿವ ಮುರುಗೇಶ್ ನಿರಾಣಿ (Minister Murugesh Nirani) ಬೆಳಗಾವಿಯ ವಿಜಯನಗರದಲ್ಲಿರುವ ಸಂತೋಷ್ ಮನೆಗೆ ಭೇಟಿ ನೀಡಿದ್ದಾರೆ. ಸಚಿವ ಮುರುಗೇಶ್ ನಿರಾಣಿಗೆ ಮಾಜಿ ಎಂಎಲ್‌ಸಿ ಮಹಾಂತೇಶ್ ಕವಟಗಿಮಠ ಸಾಥ್ ನೀಡಿದ್ದಾರೆ. ಇದರೊಂದಿಗೆ ಮೃತ ಸಂತೋಷ್​ ಮನೆಗೆ ಆಡಳಿತಾರೂಢ ಬಿಜೆಪಿ ಪಕ್ಷದಿಂದ ಯಾರೂ ಸಂತೋಷ್​ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಲಿಲ್ಲ ಎಂಬ ಟೀಕೆಗೆ ಉತ್ತರ ಕೊಟ್ಟಿದ್ದಾರೆ. ಸಂತೋಷ್​ ಕುಟುಂಬಸ್ಥರಿಗೆ ಸಾಂತ್ವನ ಹೇಳುವುದರ ಜೊತೆಗೆ ಧನ ಸಹಾಯವನ್ನೂ ಘೋಷಿಸಿದ್ದಾರೆ. ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ಧನ ಸಹಾಯ ಮಾಡುವುದಾಗಿ ನಿರಾಣಿ ಪ್ರಕಟಿಸಿದ್ದಾರೆ. ಇನ್ನು. ಸಂತೋಷ್​ ಪತ್ನಿಗೆ ನೌಕರಿ ಕೊಡಿಸುವ ಬಗ್ಗೆ ಮನವಿ ಮಾಡಲಾಗಿದೆ. ಅದಕ್ಕೆ ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದಿರುವ ಸಚವ ನಿರಾಣಿ, ಕಾಮಗಾರಿ ಬಾಕಿ ಬಿಲ್ ಬಿಡುಗಡೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಕರಣದ ತನಿಖೆಗಾಗಿ 2 ವಿಶೇಷ ಪೊಲೀಸ್ ತಂಡ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಉನ್ನತ ತನಿಖೆಗಾಗಿ 2 ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ. ಮಲ್ಪೆ ಮತ್ತು ಬ್ರಹ್ಮಾವರ ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

ಡಿಕೆಶಿ ಪಿತೂರಿಯಿಂದ ಈಶ್ವರಪ್ಪ ರಾಜೀನಾಮೆ ನೀಡುವಂತಾಗಿದೆ ಎಂದು ಅಭಿಮಾನಿ ಆತ್ಮಹತ್ಯೆಗೆ ಯತ್ನ: K.S.ಈಶ್ವರಪ್ಪ ರಾಜೀನಾಮೆ ಖಂಡಿಸಿ ಪೆಟ್ರೋಲ್ ಸುರಿದುಕೊಂಡು ಅಭಿಮಾನಿ ಮುರುಗೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದ ಗೋಪಿ ಸರ್ಕಲ್​​ನಲ್ಲಿ ನಡೆದಿದೆ. ಕೂಡಲೇ BJP ಕಾರ್ಯಕರ್ತರು ಅಭಿಮಾನಿಯನ್ನ ತಡೆದಿದ್ದಾರೆ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ಈಶ್ವರಪ್ಫ ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ಡಿಕೆಶಿ ಪಿತೂರಿಯಿಂದ ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತಾಗಿದೆ. 40 ವರ್ಷದಿಂದ ನಾನು ಬಿಜೆಪಿ ಕಾರ್ಯಕರ್ತನಾಗಿದ್ದೇನೆ. ಈಶ್ವರಪ್ಪ ನನಗೆ ಊಟ ಕೊಟ್ಟು ಬೆಳೆಸಿದ್ದಾರೆ. ಯಾವುದೇ ಅಪೇಕ್ಷೆ ಇಲ್ಲದೇ ಈಶ್ವರಪ್ಪ ಸೇವೆ ಸಲ್ಲಿಸಿದ್ದಾರೆ ಎಂದು ಅಭಿಮಾನಿ ಮುರುಗೇಶ್ ಹೇಳಿದ್ದಾನೆ.

Also Read: ಸಚಿವ ಈಶ್ವರಪ್ಪ ರಾಜೀನಾಮೆ ನೀಡೋದು ಅನುಮಾನ​, ಮೊದಲು ಅವರ ಬಂಧನವಾಗಲೀ ಎಂದ ಕಾಂಗ್ರೆಸ್​

Also Read: Bengaluru Rain: ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ವರುಣನ ಆರ್ಭಟ, ಹಲವೆಡೆ ಭಾರಿ ಮಳೆ

Published On - 8:51 pm, Thu, 14 April 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ