N Cheluvarayaswamy: ಬರಪೀಡಿತ 195 ತಾಲೂಕುಗಳ ರೈತರಿಗೆ ಪರಿಹಾರದ ಹಣ ನೀಡುತ್ತೇವೆ: ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ, ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023: ನಮ್ಮ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿದೆ. ಬರಪೀಡಿತ 195 ತಾಲೂಕುಗಳ ರೈತರಿಗೆ ಪರಿಹಾರದ ಹಣ ನೀಡುತ್ತೇವೆ ಎಂದು ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 15: ನಮ್ಮ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿದೆ. ಬರಪೀಡಿತ 195 ತಾಲೂಕುಗಳ ರೈತರಿಗೆ ಪರಿಹಾರದ ಹಣ ನೀಡುತ್ತೇವೆ ಎಂದು ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ನಲ್ಲಿ ಆಯೋಜಿಸಿರುವ ‘ಕನಸಿನ ಕರುನಾಡು’ (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆರವಾಗುತ್ತಿದೆ. ಬಿಜೆಪಿ ಅವಧಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ 50,000 ಜನರಿಗೆ ನೆರವು ಸಿಗುತ್ತಿತ್ತು. ಜುಲೈನಲ್ಲಿ ಸ್ವಲ್ಪ ಮಳೆಯಾಗಿದೆ, ಆಗಸ್ಟ್ನಲ್ಲಿ ಮಳೆಯಾಗಿಲ್ಲ. ಸೆಪ್ಟೆಂಬರ್ ತಿಂಗಳಲ್ಲಿ ಸ್ವಲ್ಪ ಸೋನೆ ಮಳೆಯಾಗಿದೆ. ರೈತರ ಬಿತ್ತನೆ ಮಾಡಿರುವ ಬೆಳೆ ಕೈಸೇರುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Krishna Byre Gowda: ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೂ ಆರ್ಥಿಕ ಶಿಸ್ತು ಕಾಪಾಡಿದ್ದೇವೆ: ಸಚಿವ ಕೃಷ್ಣಭೈರೇಗೌಡ
ನಾವು ಗೃಹಲಕ್ಷ್ಮೀ ಯೋಜನೆ ಅಡಿ 1.14 ಕೋಟಿ ಮಹಿಳೆಯರಿಗೆ ಹಣ ನೀಡಿದ್ದೇವೆ. ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ. ಬಿಜೆಪಿಯವರು ನೀಡುತ್ತಿದ್ದಕ್ಕಿಂತ ಹೆಚ್ಚು ಮೊತ್ತವನ್ನು ಜನರಿಗೆ ನೀಡಿದ್ದೇವೆ. ಗ್ಯಾರಂಟಿ ಜಾರಿಯಿಂದ ದುಡಿಯುವ ವರ್ಗದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ರಾಜ್ಯದ ಬೊಕ್ಕಸ ಖಾಲಿ ಮಾಡದೆ 5 ಗ್ಯಾರಂಟಿ ಜಾರಿ ಮಾಡುತ್ತೇವೆ
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಒಟ್ಟು 135 ಸ್ಥಾನ ಕೊಟ್ಟಿದ್ದಾರೆ. ರಾಜ್ಯದ ಜನರಿಗೆ ನಾವು ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಮೀಸಲಿಟ್ಟು 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ರಾಜ್ಯದ ಬೊಕ್ಕಸವನ್ನು ಖಾಲಿಮಾಡದೆ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ ಎಂದು ಹೇಳುತ್ತಿರುವುದು ನೋವಾಗಿದೆ
‘ನಾನು ಮಂಡ್ಯದ ಮಗ, ಮಂಡ್ಯದ ಮಗ ಅಂದರೆ ಮಣ್ಣಿನ ಮಗ’ ಹೆಚ್.ಡಿ.ದೇವೇಗೌಡರು ಜೀವನಪೂರ್ತಿ ಬಿಜೆಪಿ ವಿರೋಧಿಸಿದ್ದರು. ಜಾತ್ಯತೀತ ತತ್ವಗಳ ಆಧಾರದಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ ಎಂದು ಹೇಳುತ್ತಿರುವುದು ನೋವಾಗಿದೆ. ಯಾರ ಒತ್ತಡದಿಂದ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೋ ಗೊತ್ತಾಗುತ್ತಿಲ್ಲ. ಕಳೆದ ವಾರದ ಅಮಿತ್ ಶಾ, ಪ್ರಧಾನಿ ಮೋದಿ ಭೇಟಿಯಾಗಿದ್ದರು. ಭೇಟಿ ವೇಳೆ ಕಾವೇರಿ ವಿಚಾರದ ಬಗ್ಗೆ ದೇವೇಗೌಡರು ಪ್ರಸ್ತಾಪಿಸಬಹುದಿತ್ತು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.