AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಬೆಳೆ ವಿಮೆ ಪ್ರೀಮಿಯಂ ಹಣ ಬಿಡುಗಡೆ ಬಗ್ಗೆ ಸಿಎಂಗೆ ಪ್ರಹ್ಲಾದ್ ಜೋಶಿ ಮಹತ್ವದ ಪತ್ರ

ಕರ್ನಾಟಕದಲ್ಲಿ ತೀವ್ರ ಬರಗಾಲ ಮತ್ತು ಪ್ರಕೃತಿ ವಿಕೋಪದಿಂದಾಗಿ ತತ್ತರಿಸಿ ಹೋಗಿರುವ ಲಕ್ಷಾಂತರ ರೈತರ ನೆರವಿಗೆ ಧಾವಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ತಮ್ಮ ಪಾಲಿನ ಬೆಳೆ ವಿಮೆ ಪ್ರೀಮಿಯಂ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ರೈತರ ಬೆಳೆ ವಿಮೆ ಪ್ರೀಮಿಯಂ ಹಣ ಬಿಡುಗಡೆ ಬಗ್ಗೆ ಸಿಎಂಗೆ ಪ್ರಹ್ಲಾದ್ ಜೋಶಿ ಮಹತ್ವದ ಪತ್ರ
Prhaladh Joshi Letter
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 23, 2026 | 8:34 PM

Share

ಹುಬ್ಬಳ್ಳಿ, (ಅಕ್ಟೋಬರ್ 23): ಕರ್ನಾಟಕದಲ್ಲಿ ತೀವ್ರ ಬರಗಾಲ ಮತ್ತು ಪ್ರಕೃತಿ ವಿಕೋಪದಿಂದಾಗಿ ತತ್ತರಿಸಿ ಹೋಗಿರುವ ಲಕ್ಷಾಂತರ ರೈತರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ, ತನ್ನ ಪಾಲಿನ ಬೆಳೆ ವಿಮೆ ಪ್ರೀಮಿಯಂ ಹಣವನ್ನು ಬಿಡುಗಡೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕೃತ ಪತ್ರ ಬರೆದಿರುವ ಅವರು, ಹಣಕಾಸು ಇಲಾಖೆಯಲ್ಲಿ ನನೆಗುದಿಗೆ ಬಿದ್ದಿರುವ ಕಡತವನ್ನು ತಕ್ಷಣವೇ ವಿಲೇವಾರಿ ಮಾಡಿ, ರಾಜ್ಯ ಸರ್ಕಾರದ ಪಾಲಿನ ಪ್ರೀಮಿಯಂ ಮೊತ್ತವನ್ನು ಬಿಡುಗಡೆಗೊಳಿಸುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕರ್ನಾಟಕದ 2026ರ ಮುಂಗಾರು ಹಂಗಾಮಿಗಾಗಿ ಕೇಂದ್ರದ ಪಾಲಿನ ಪ್ರೀಮಿಯಂ ಸಹಾಯಧನವಾಗಿ ಜುಲೈ ಮತ್ತು ಆಗಸ್ಟ್ 2026ರಲ್ಲಿ ಒಟ್ಟು 1,342 ಕೋಟಿ ರೂ.ಪಾವತಿಸಲಾಗಿದೆ. ಕೊನೆಯ ಪಾವತಿಯನ್ನು 27 ಆಗಸ್ಟ್ 2026ರಂದು ಮಾಡಲಾಗಿದೆ. ಈ ಮೊತ್ತವು ಕೇಂದ್ರ ಸರ್ಕಾರ ಪಾವತಿಸಬೇಕಾದ ಒಟ್ಟು ಪಾಲಿನ ಸುಮಾರು ಶೇ.80ರಷ್ಟಾಗಿದೆ. ರೈತರ ನೋಂದಣಿ ದತ್ತಾಂಶ ಅಂತಿಮಗೊಂಡು, ವಿಮಾ ಕಂಪನಿಗಳಿಂದ ಬೇಡಿಕೆಗಳು ಸ್ವೀಕೃತವಾದ ನಂತರ ಉಳಿದ ಮೊತ್ತವನ್ನು ಪಾವತಿಸಲಾಗುವುದು ಎಂದು ಕೇಂದ್ರ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್​​ ಪತ್ರ

ಈಗಾಗಲೇ ರಾಜ್ಯ ಸರ್ಕಾರದಲ್ಲಿ ವ್ಯಾಪಿಸಿರುವ ಆಡಳಿತಾತ್ಮಕ ಮಿಸ್‌ಮ್ಯಾನೇಜ್‌ಮೆಂಟ್‌ನಿಂದಾಗಿ ರೈತ ಸಮುದಾಯ ಕಂಗೆಟ್ಟಿದೆ. ಕೇಂದ್ರ ಸರ್ಕಾರವು ರೈತರ ಹಿತದೃಷ್ಟಿಯಿಂದ ಸಕಾಲಕ್ಕೆ ಹಣ ಬಿಡುಗಡೆ ಮಾಡಿದರೂ, ರಾಜ್ಯ ಸರ್ಕಾರವು ತನ್ನ ಪಾಲಿನ ಹಣವನ್ನು ಇಟ್ಟುಕೊಂಡು ಕುಳಿತಿರುವುದು ಖಂಡನೀಯ. ಬರಗಾಲದಿಂದ ಬೆಳೆ ಕಳೆದುಕೊಂಡು ಕಣ್ಣೀರು ಸುರಿಸುತ್ತಿರುವ ರೈತರ ಹಿತದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಇನ್ನು ಮುಂದಾದರೂ ವಿಳಂಬ ಮಾಡದೆ, ಕೂಡಲೇ ವೈಯಕ್ತಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಣಕಾಸು ಇಲಾಖೆಯಲ್ಲಿ ಬಾಕಿಯಿರುವ ಕಡತಕ್ಕೆ ತಕ್ಷಣ ಅನುಮೋದನೆ ನೀಡಿ, ರಾಜ್ಯ ಸರ್ಕಾರದ ಪಾಲಿನ 1,680 ಕೋಟಿ ರೂ. ಪ್ರೀಮಿಯಂ ಮೊತ್ತವನ್ನು ತಕ್ಷಣವೇ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಪ್ರಹ್ಲಾದ್ ಜೋಶಿ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More