AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್​ ಖರ್ಗೆ, ನಲಪಾಡ್​​ಗೆ ಬಿಗ್ ರಿಲೀಫ್

ಆರ್​ಎಸ್​ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್​ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆದ್ರೆ, ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಕೋರ್ಟ್​ ಷರತ್ತು ವಿಧಿಸಿದೆ. ಹಾಗಾದ್ರೆ, ಏನಿದು ಪ್ರಕರಣ ಎನ್ನುವ ಡಿಟೇಲ್ಸ್ ಇಲ್ಲಿದೆ.

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್​ ಖರ್ಗೆ, ನಲಪಾಡ್​​ಗೆ ಬಿಗ್ ರಿಲೀಫ್
Priyank Kharge And Nalapad
ರಮೇಶ್​ ಎಮ್​.
| Edited By: |

Updated on: Aug 29, 2026 | 3:36 PM

Share

ಬೆಂಗಳೂರು, (ಆಗಸ್ಟ್ 29): ಆರ್​ಎಸ್​ಎಸ್  (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್​ಗೆ ಜಾಮೀನು ಸಿಕ್ಕಿದೆ. RSS ಕಾರ್ಯಕರ್ತ ಎ.ತೇಜಸ್ ಅವರು ನೀಡಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಜನಪತ್ರಿನಿಧಿಗಳ ವಿಶೇಷ ನ್ಯಾಯಾಲವು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದೆ. ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿದೆ. ಇದರೊಂದಿಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಕಾರ್ಯಕರ್ತರ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕರ್ನಾಟಕ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಈ ಹಿಂದೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಜುಲೈ 21ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು.

ಇದನ್ನೂ ಓದಿ: RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್

RSS ಕಾರ್ಯಕರ್ತ ತೇಜಸ್ ಎಂಬುವರಿಂದ ದೂರು

RSS ಕಾರ್ಯಕರ್ತ ಎ. ತೇಜಸ್ ಖಾಸಗಿ ದೂರು ದಾಖಲಿಸಿದ್ದರು. 2025 ಅಕ್ಟೋಬರ್​ 14 ರಂದು ಆರ್​ಎಸ್​ಎಸ್ ಸದಸ್ಯರ ವಿರುದ್ದ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದರು. ಮತ್ತೊಂದೆಡೆ ಯೂಟ್ಯೂಬ್ ಚಾನಲ್​ನಲ್ಲಿ RSS ಬಗ್ಗೆ ನಲಪಾಡ್​ ಅವಹೇಳನಕಾರಿ ಹೇಳಿಕೆ ನೀಡಿದ್ರು. ಈ ಅವಹೇಳನಕಾರಿ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ಬೆಂಗಳೂರಿನ ಸಿದ್ದಾಪುರದ ಎ.ತೇಜಸ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.

‘RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’

ಇತ್ತೀಚಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕಿ ವಿಪಕ್ಷ ಬಿಜೆಪಿಗೆ ಟಾಂಗ್ ನೀಡಿದ್ರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಭಾರತೀಯ ಜನತಾ ಪಾರ್ಟಿ ನಡುವಿನ ಸಂಬಂಧವನ್ನು ಬಗ್ಗೆಯೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ರು. ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ ಎಂದು ಲೇವಡಿ ಮಾಡಿರುವ ಗೃಹ ಸಚಿವ, ಬಿಜೆಪಿಯು ಕೇವಲ ಆರ್‌ಎಸ್‌ಎಸ್‌ನ ರಾಜಕೀಯ ಸಾಧನವಾಗಿ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್