
ಬೆಂಗಳೂರು, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆರ್‌ಎಸ್‌ಎಸ್ (Rashtriya Swayamsevak Sangh) ನೋಂದಣಿ ವಿಚಾರವನ್ನು ಎತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಇದೀಗ ಪ್ರಿಯಾಂಕ್ ಖರ್ಗೆ, ಇದೇ ವಿಚಾರವಾಗಿ ಆರ್ಎಸ್ಎಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ. ಏಕೆ ನೋಂದಾಯಿತ ಕಾನೂನು ಬದ್ಧ ಸಂಸ್ಥೆಯಾಗಿ ಕಾರ್ಯ ನಿರ್ವಹಿಸ್ತಿಲ್ಲ. ಈ ಬಗ್ಗೆ ವಿವರಣೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಮುಖ್ಯಾಂಶಗಳು
ಕಳೆದ ವರ್ಷವೂ ಸಹ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಮೋಹನ್ ಭಾಗವತ್ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ಕೆಲವೊಂದಿಷ್ಟು ವಿವರಣೆ ಕೇಳಿದ್ದರು. ಇದೀಗ ಪತ್ರದ ಮೂಲಕ ಮತ್ತೆ ಸಂಘದ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ವಿವರಣೆ ನೀಡುವಂತೆ ಆಗ್ರಹಿಸಿದ್ದಾರೆ. ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.
ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು. ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದಿದ್ದಾರೆ.
Dear Shri Mohan Bhagwat ji,
My letter will reach you shortly. However, I thought it was important to draw your attention to this matter early.
——————————-Firstly, congratulations to the RSS on completing 100 years.
An organisation that claims over 60,000 shakhas and crores of… pic.twitter.com/IZy4oeKdMp
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 15, 2026
ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್‌ಎಸ್‌ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು , ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸುವುದು. ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸಿ ಮೇಲಿನ ವಿಷಯಗಳ ಕುರಿತು ಚರ್ಚೆ ನಡೆಸಲು ನಾವು ಔಪಚಾರಿಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ಆರ್‌ಎಸ್‌ಎಸ್ ನ ಕೆಲ ವಿವರಗಳನ್ನು ತಿಳಿಸುವಂತೆ ಆಗ್ರಹಿಸಿದ್ದಾರೆ. ಕೊನೆಗೆ ಕೆಲವೊಂದಿಷ್ಟು ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಅವುಗಳೆಂದರೆ, ಅಧಿಕೃತವಾಗಿ ನೋಂದಾಯಿಸಿಕೊಳ್ಳಬೇಕು, ಚಟುವಟಿಕೆಗಳು ಮತ್ತು ಹಣಕಾಸಿನ ಮಾಹಿತಿಯನ್ನು ಬಹಿರಂಗಪಡಿಸಬೇಕು, ಅನ್ವಯವಾಗುವ ಎಲ್ಲಾ ತೆರಿಗೆಗಳನ್ನು ಪಾವತಿಸಬೇಕು, ಭಾರತೀಯ ಕಾನೂನುಗಳ ಚೌಕಟ್ಟಿನೊಳಗೆ ಪಾರದರ್ಶಕ ಮತ್ತು ಉತ್ತರದಾಯಿ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಹೀಗೆ ಒಟ್ಟು 8 ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಿ ಇವುಗಳಿಗೆ ವಿವರಣೆ ನೀಡುವಂತೆ ಆಗ್ರಹಿಸಿದ್ದಾರೆ.
Published On - 4:38 pm, Mon, 15 June 26