ದೇವನಹಳ್ಳಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸಿದ್ಧ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಚಿವ ಆರ್.ಅಶೋಕ್ ಹೇಳಿದರು. 3ನೇ ಅಲೆಯಲ್ಲಿ ಮಕ್ಕಳ ತಜ್ಞರು ಕೊರತೆ ಆಗಬಾರದು. ಮಕ್ಕಳಿಗೆ ಚಿಕಿತ್ಸೆ ನೀಡಲು ಪರಿಣಿತ ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ದೃಢ ಸಂಕಲ್ಪ ಮಾಡಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ದೇಶದ ಮೊಟ್ಟ ಮೊದಲ ಆಸ್ಪತ್ರೆ ನಿರ್ಮಾಣ ಆಗಿದೆ ಎಂದು ತಿಳಿಸಿದರು.
ಎರಡು ತಿಂಗಳಲ್ಲಿ ಮೂರನೇ ಅಲೆ ಬರಬಹುದೆಂದು ತಜ್ಞರು ತಿಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧ ಪಕ್ಷದವರು ಸದಾ ಟೀಕೆ ಟಿಪ್ಪಣಿ ಮಾಡುತ್ತಾರೆ ಎಂದು ಮಾತನಾಡಿದ ಸಚಿವ ಆರ್.ಅಶೋಕ್, ಕೊರೊನಾ ನಿಯಂತ್ರಣದಲ್ಲಿ ಕೇರಳ ಮಾದರಿ ಅಂತಿದ್ರು. ಈಗ ಸೋಂಕು ನಿಯಂತ್ರಣದಲ್ಲಿ ರಾಜ್ಯ ಮಾದರಿ ಆಗಿದೆ ಎಂದು ಅಭಿಪ್ರಾಯಪಟ್ಟರು.
ಎಷ್ಟೇ ಟೀಕೆ ಟಿಪ್ಪಣಿ ಮಾಡಿದ್ದರೂ ಸರ್ಕಾರದ ಕೆಲಸ ನಿರಂತರವಾಗಿ ಮಾಡಿದ್ದೇವೆ. ಮೂರನೇ ಅಲೆಯಲ್ಲಿ ಇನ್ನಷ್ಟು ಸಮರ್ಥವಾಗಿ ಕೊರೊನಾ ಸೋಂಕು ನಿಯಂತ್ರಿಸುವ ಕೆಲಸ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ
ವಿಧಾನ ಪರಿಷತ್ ರಚನೆಯ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ; ಮಮತಾ ದೀದಿ ಹಾದಿ ಸುಗಮ?
(Minister R Ashok says Karnataka is now a model)