AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಿಬ್ಬಂದಿಗೆ ಬಂಪರ್ ಭಾಗ್ಯ ಘೋಷಿಸಿದ ಸಚಿವ ರಾಮಲಿಂಗಾ ರೆಡ್ಡಿ!​

ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಕೇಳಿದ್ದಾರೆ. ಅದನ್ನು ನೀಡಲು 4370.28 ಕೋಟಿ ರೂ. ಬೇಕಾಗುತ್ತೆ‌ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಸಾರಿಗೆ ಸಿಬ್ಬಂದಿಗೆ ಬಂಪರ್ ಭಾಗ್ಯ ಘೋಷಿಸಿದ ಸಚಿವ ರಾಮಲಿಂಗಾ ರೆಡ್ಡಿ!​
ಸಚಿವ ರಾಮಲಿಂಗಾ ರೆಡ್ಡಿ
Kiran Surya
| Updated By: ವಿವೇಕ ಬಿರಾದಾರ|

Updated on:Sep 06, 2023 | 1:45 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸಹಿ ಸುದ್ದಿ ನೀಡಿದ್ದಾರೆ. ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ. ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ಕೊಡಲಾಗಿತ್ತು. ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು. ಶಾಂತಿನಗರದ ಬಿಎಂಟಿಸಿ (BMTC) ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನೂ ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಕೇಳಿದ್ದಾರೆ. ಅದನ್ನು ನೀಡಲು 4370.28 ಕೋಟಿ ಬೇಕಾಗುತ್ತೆ‌ ಎಂದು ತಿಳಿಸಿದರು.

ಇನ್ನು ಸಾರಿಗೆ ಅಭಿವೃದ್ದಿ ನಿಗಮ ಸ್ಥಾಪನೆಗೆ ಕೋರಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲಾಗುತ್ತೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಜೊತೆ ಮಾತನಾಡಲಾಗಿದೆ. ಇ-ಆಟೋಗಳಿಗೆ ರಹದಾರಿ ಕುರಿತು ಪತ್ರ ಬರೆಯಲಾಗಿದೆ. ಜೀವಾವಧಿ ಟ್ಯಾಕ್ಸ್ ಅನ್ನು ಲೈಫ್ ಟ್ಯಾಕ್ಸ್ ಬೇಡ, ಮೊದಲಿನಂತೆ ಮಾಡುವಂತೆ ಕೋರಿದ್ದಾರೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದಿದಿದೇನೆ ಎಂದು ಹೇಳಿದರು.

ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಕೋರಿಕೆ ಇಟ್ಟಿದ್ದಾರೆ‌. ಹಣಕಾಸಿನ ವಿಚಾರ ಆಗಿರುವುದರಿಂದ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ. ತೆರಿಗೆ ವಿನಾಯಿತಿ ಕೇಳಿದ್ದಾರೆ. ನಾವು ಕೊಟ್ಟರೆ ಬೇರೆ ರಾಜ್ಯದಲ್ಲೂ ನೀಡಬೇಕು. ಮುಂದೆ ನೋಡೋಣ. ಶಕ್ತಿ ಯೋಜನೆಗೆ ಖಾಸಗಿ ವಾಹನಗಳ ಬಳಕೆ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಕ್ತಿ ಸ್ಮಾರ್ಟ್​​ ಕಾರ್ಡ್​​ಗೆ ಆನ್​ಲೈನ್ ಅರ್ಜಿ ಸಲ್ಲಿಸಲು ಶೀಘ್ರ ಹೊಸ ಪೋರ್ಟಲ್; ಸಚಿವ ರಾಮಲಿಂಗಾ ರೆಡ್ಡಿ

ಖಾಸಗಿ ವಾಹನಗಳನ್ನು ಕಿಮೀ ಆದಾರದ ಮೇಲೆ ಸರ್ಕಾರವೇ ಬಾಡಿಗೆಗೆ ಪಡೆಯಬೇಕು ಎಂದು ಕೇಳಿದರು. ಅವಶ್ಯಕತೆಗೆ ತಕ್ಕಂತೆ ಪಡೆಯುತ್ತೇವೆ, ಅದರೆ ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಬೇಕಿದೆ. ಟೂರಿಸ್ಟ್ ಮತ್ತು ಕಂಟ್ರಾಕ್ಟ್ ಕ್ಯಾರೇಜು ಬಸ್ಸುಗಳಿಗೆ ರಸ್ತೆ ತೆರಿಗೆ ಕಡಿತಗೊಳಿಸಲು ಸಿಎಂ ತಿರ್ಮಾನ ತೆಗೆದುಕೊಳ್ಳಬೇಕು. ಟ್ಯಾಕ್ಸಿ, ಮ್ಯಾಕ್ಸಿ ಹಾಗೂ ಒಪ್ಪಂದ ವಾಹನಗಳಿಗೆ ವಿಶೇಷ ರಹದಾರಿ ನೀಡುವ ಬಗ್ಗೆ ವ್ಯವಸ್ಥೆ ಮಾಡಲಾಗುತ್ತೆ ಎಂದು ಭರವಸೆ ನೀಡಿದರು.

ಸೆ.11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಕರೆದಿರುವ ವಿಚಾರವಾಗಿ ಮಾತನಾಡಿದ ಅವರು ಬಂದ್ ಮಾಡುವವರು ಬೇಕಿದ್ದರೇ ಬಂದು ಮಾತನಾಡಲಿ. ಸಾರಿಗೆ ಕಚೇರಿ ಬಾಗಿಲು ಯಾವಾಗಲೂ ತೆರೆದಿರುತ್ತೆ. ಸಭೆ ಕರೆದಾಗ ಬಂದು‌ ಸಿಎಂ ಜೊತೆಗೆ ಮಾತನಾಡದೆ ಬಂದ್ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಜರುಗಿಸಲಾಗುತ್ತೆ. ಶಾಲಾ ಮಕ್ಕಳಿಗೆ, ಕೆಲಸಗಳಿಗೆ ಹೋಗುವವರಿಗೆ ತೊಂದರೆಯಾಗದಂತೆ ಸಾರಿಗೆ ಇಲಾಖೆ ಕ್ರಮ ಜರುಗಿಸುತ್ತೆ. ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಆಟೋ ರಹದಾರಿ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:44 pm, Wed, 6 September 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!