AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ರೈತರಿಗೆ ಮೋಸ: ರಾಜ್ಯದ ಹಲವು ಎಪಿಎಂಸಿಗಳಲ್ಲಿ ಕಾರ್ಯಚರಣೆ, 275 ಕೇಸ್ ಬುಕ್

ಎಪಿಎಂಸಿ ಮಾರುಕಟ್ಟೆಗಳಲ್ಲಿ ತೂಕದಲ್ಲಿ ರೈತರಿಗೆ ಮೋಸ ಮಾಡುವ ಪ್ರಕರಣಗಳು ನಡೆಯುತ್ತಲೇ ಇವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಆಹಾರ, ನಾಗರೀಕ ಪೂರೈಕೆ ಗ್ರಾಹಕ ವ್ಯವಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಕರ್ನಾಟಕದಾದ್ಯಂತ ಕಾರ್ಯಚರಣೆ ನಡೆಸಿ 275 ಪ್ರಕರಣ ದಾಖಲಿಸಿದೆ. ಇದರೊಂದಿಗೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ತೂಕದಲ್ಲಿ ಮೋಸಕ್ಕೆ ಇನ್ನು ಅವಕಾಶವಿಲ್ಲ ಎಂಬ ಸಂದೇಶ ರವಾನಿಸಿದೆ.

ತೂಕದಲ್ಲಿ ರೈತರಿಗೆ ಮೋಸ: ರಾಜ್ಯದ ಹಲವು ಎಪಿಎಂಸಿಗಳಲ್ಲಿ ಕಾರ್ಯಚರಣೆ, 275 ಕೇಸ್ ಬುಕ್
Rizwan Arshad
ರಮೇಶ್ ಬಿ. ಜವಳಗೇರಾ
|

Updated on: Nov 16, 2026 | 9:12 PM

Share

ಬೆಂಗಳೂರು, (ನವೆಂಬರ್ 16): ಆಹಾರ, ನಾಗರೀಕ ಪೂರೈಕೆ, ಗ್ರಾಹಕ ವ್ಯವಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮಹತ್ವಾಕಾಂಕ್ಷಿ ‘ಮಿಷನ್ ನಿಖರ’ ನ ಮುಂದುವರೆದ ಭಾಗವಾಗಿ ಇಲಾಖೆಯ ಅಧಿಕಾರಿಗಳು ಸೋಮವಾರ ಮುಂಜಾನೆ ರಾಜ್ಯಾದ್ಯಂತ ಒಂಬತ್ತು (9) ಪ್ರಮುಖ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಏಕಕಾಲಕ್ಕೆ ತಪಾಸಣೆ ನಡೆಸಿದೆ. ಈ ವೇಳೆ ತೂಕದಲ್ಲಿ ಮೋಸ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಗದಿಪಡಿಸಿದ ಮಾನದಂಡಗಳ ಉಲ್ಲಂಘನೆ ಮಾಡುತ್ತಿದ್ದ 275 ವರ್ತಕರ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು 9.8 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಸ್ವತಃ ಸಚಿವ ರಿಜ್ವಾನ್ ಅರ್ಷದ್ ಅವರು ಖುದ್ದಾಗಿ ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆಸಿದ ತಪಾಸಣೆಯ ನೇತೃತ್ವ ವಹಿಸಿಕೊಂಡಿದ್ದು ಕಾರ್ಯಾಚರಣೆಯ ವಿಶೇಷ.

ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ತಪಾಸಣೆ

ಕೃಷಿ ಉತ್ಪನ್ನಗಳ ತೂಕದಲ್ಲಿ ರೈತರಿಗೆ ಮೊಸ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಚಿವ ರಿಜ್ವಾನ್ ಅರ್ಷದ್ ಅವರ ಸೂಚನೆ ಮೇರೆಗೆ, ಕಾನೂನು ಮಾಪನ ಶಾಸ್ತ್ರ ಇಲಾಖೆಯ 100 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಗಳೂರು, ಮೈಸೂರು, ಗಂಗಾವತಿ, ರಾಯಚೂರು, ತುಮಕೂರು, ಹುಬ್ಬಳ್ಳಿ ಮತ್ತು ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಏಕಕಾಲಕ್ಕೆ ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮದಲ್ಲಿ ಕೆಪಿಎಸ್​​ಸಿಯೇ ಕಿಂಗ್​​!: ಇಲ್ಲಿವೆ ಕರ್ನಾಟಕದಲ್ಲಿ ಇತ್ತೀಚೆಗೆ ನಡೆದಿರುವ ಹಗರಣಗಳ ಡಿಟೇಲ್ಸ್​​

275 ವರ್ತಕರ ವಿರುದ್ಧ ಮೊಕದ್ದಮೆ

ಒಂಬತ್ತು ಮಾರುಕಟ್ಟೆಗಳಲ್ಲಿ ಒಟ್ಟು 711 ಅಂಗಡಿಗಳನ್ನು ತಪಾಸಣೆ ನಡೆಸಿದ ಅಧಿಕಾರಿಗಳು, ತೂಕದಲ್ಲಿ ಮೋಸ, ದೋಷಪೂರಿತ ಯಂತ್ರಗಳ ಬಳಕೆ, ನಿಗದಿತ ಅವಧಿಯೊಳಗೆ ಇಲಾಖೆಯಿಂದ ತೂಕದ ಯಂತ್ರಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳದಿರುವುದು, ಸತ್ಯಾಪನೆ ಪ್ರಮಾಣಪತ್ರವನ್ನು ತಮ್ಮ ಅಂಗಡಿಗಳಲ್ಲಿ ಪ್ರದರ್ಶನ ಮಾಡದಿರುವ 275 ವರ್ತಕರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಈ ಉಲ್ಲಂಘನೆಗಳಿಗಾಗಿ 9,80,000 ರೂಪಾಯಿಗಳ ದಂಡವನ್ನು ಈ ವರ್ತಕರಿಗೆ ವಿಧಿಸುವುದರ ಜೊತೆಗೆ ಇಲಾಖೆ ಅಧಿಕಾರಿಗಳು ದೋಷಪೂರಿತ ತೂಕದ ಯಂತ್ರಗಳು ಹಾಗು ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳದ ತೂಕದ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ತೂಕದ ಯಂತ್ರಗಳನ್ನು ಸೀಜ್ ಮಾಡಿಸಿದ ಸಚಿವರು

ಮೈಸೂರಿನ ಬಂಡಿಪಾಳ್ಯ ಮಾರುಕಟ್ಟೆಯಲ್ಲಿ ನಡೆದ ತಪಾಸಣೆಯ ನೇತೃತ್ವ ವಹಿಸಿದ್ದ ಸಚಿವ ರಿಜ್ವಾನ್ ಅರ್ಷದ್ ಅವರು ಹಲವು ಮಳಿಗೆಗಳಲ್ಲಿ ರೈತರ ಉತ್ಪನ್ನಗಳನ್ನು ಖುದ್ದಾಗಿ ತೂಕ ಮಾಡಿಸಿ ದೋಷಪೂರಿತ ಎಂದು ಕಂಡು ಬಂದ ಯಂತ್ರಗಳನ್ನು ಜಪ್ತಿ ಮಾಡಿಸಿದರು. ಮೈಸೂರಿನ ಈಪಿಎಂಸಿ ಮಾರುಕಟ್ಟೆಯೊಂದರಲ್ಲೇ ಇಂದು 180 ತಪಾಸಣೆ ನಡೆಸಿ 60 ಮೊಕದ್ದಮೆಗಳನ್ನು ದಾಖಲಿಸಲಾಯಿತು.

ವರ್ತಕರಿಗೆ ಎಚ್ಚರಿಕೆ

ತೂಕದಲ್ಲಿ ಮೋಸ ಮಾಡುವ ಹಾಗು ದೋಷಪೂರಿತ ಯಂತ್ರಗಳನ್ನು ಬಳಸುತ್ತಿರುವ ವರ್ತಕರಿಗೆ ಎಚ್ಚರಿಕೆ ನೀಡಿದ ಸಚಿವರು, ಇನ್ನು ಮುಂದೆ ಇಂತವುಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

“ರೈತರು ಮಾರುಕಟ್ಟೆಗೆ ತರುವ ಪ್ರತಿ ಉತ್ಪನ್ನಗಳ ತೂಕವನ್ನು ಪ್ರಾಮಾಣಿಕವಾಗಿ ಮಾಡಬೇಕು. ರಾಜ್ಯದ ಎಪಿಎಂಸಿಗಳಲ್ಲಿ ನಡೆಯುವ ಕೃಷಿ ಉತ್ಪನ್ನಗಳ ಪ್ರತಿಯೊಂದು ವ್ಯವಹಾರವೂ ನಿಖರತೆ ಮತ್ತು ಪಾರದರ್ಶಕತೆಯಿಂದ ಕೂಡಿರಬೇಂಕೆಂಬುದು ನಮ್ಮ ಸರಕಾರದ ಸಂಕಲ್ಪ. ಇವತ್ತು ರಾಜ್ಯಾದ್ಯಂತ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ನಡೆದಿರುವ ತಪಾಸಣೆಗಳು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದ್ದು. ಇಂತಹ ತಪಾಸಣೆಗಳು ಇನ್ನು ಮುಂದೆ ನಿರಂತರವಾಗಿರುತ್ತವೆ,’ ಎಂದು ಸಚಿವರು ಹೇಳಿದರು.

ಅಲ್ಲದೇ ರಾಜ್ಯದ ಎಲ್ಲ ಮಾರುಕಟ್ಟೆಗಳಲ್ಲಿ ಒಂದು ಮಾದರಿ ತೂಕದ ಯಂತ್ರವನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದಲೇ ಇಟ್ಟು, ರೈತರು ತಮ್ಮ ಉತ್ಪನ್ನಗಳ ತೂಕದಲ್ಲಿ ಸಂಶಯ ಕಂಡು ಬಂದರೆ ಈ ಮಾದರಿ ಯಂತ್ರಗಳಲ್ಲಿ ದೃಢೀಕರಿಸಿಕೊಳ್ಳುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಎಲ್ಲ ಮಾರುಕಟ್ಟೆಗಳಲ್ಲಿ ಪ್ರಮಾಣಿತ ತೂಕದ ಆಚರಣೆಗಳ ಕುರಿತು ಡಿಸ್ಪ್ಲೇ ಬೋರ್ಡ್ ಗಳನ್ನೂ ಅಳವಡಿಸುವಂತೆಯೂ ನಿರ್ದೇಶನ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ