ಕೊರೊನಾ ಸಂಕಷ್ಟ; ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವ ಸಲುವಾಗಿ ಪರ್ಯಾಯ ಕ್ರಮಕ್ಕೆ ಸಿದ್ಧತೆ: ಸಚಿವ ಸುರೇಶ್ ಕುಮಾರ್
ಮುಂದಿನ ಶೈಕ್ಷಣಿಕ ವರ್ಷದ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಪಿಯು ನಿರ್ದೇಶಕಿ ಆರ್. ಸ್ನೇಹಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಶಾಲೆಗಳು ಬಂದ್ ಆಗಿ, ಮಕ್ಕಳು ಹೊರಗುಳಿದಿದ್ದಾರೆ. ಆದರೆ, ಈಗ ಮಕ್ಕಳು ಕಲಿಕೆಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಲಾಗಿದೆ. ತಜ್ಞರ ಸಮಿತಿ ರಚಿಸಿ ಮಾಹಿತಿ ಪಡೆಯಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಭೆ ನಡೆಸಿದ್ದಾರೆ.
2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಕೊರೊನಾ ಹಿನ್ನೆಲೆ ನಿಗದಿಯಂತೆ ಶಾಲೆಗಳು ಆರಂಭವಾಗಿಲ್ಲ. ಅದರಿಂದಾಗಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಶಿಕ್ಷಣ ಸಚಿವರು ಸಭೆ ನಡೆಸಿ ಚರ್ಚಿಸಿದ್ದಾರೆ.
ಕೊವಿಡ್ 3ನೇ ಅಲೆಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದೆ. ಸಕಾಲಕ್ಕೆ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆಗೆ ಸೂಚನೆ ನೀಡಲಾಗಿದೆ. ಮುಂದಿನ 2 ತಿಂಗಳ ಅವಧಿಯಲ್ಲಿ ಪುಸ್ತಕ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಪುಸ್ತಕ ತಲುಪಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್‌ಕುಮಾರ್ ಸೂಚಿಸಿದ್ದಾರೆ. ಗ್ರಾಮೀಣ ಹಾಗೂ ಸರ್ಕಾರಿ ಶಾಲಾ ಮಕ್ಕಳನ್ನು ಕಲಿಕೆಯಿಂದ ವಿಮುಖರಾಗದಂತೆ ಕ್ರಮ ಕೈಗೊಳ್ಳಲು ಮತ್ತು ಮಕ್ಕಳ ಶಿಕ್ಷಣದ ಹಕ್ಕು ರಕ್ಷಿಸುವ ಸಲುವಾಗಿ ಪರ್ಯಾಯ ಕ್ರಮಕ್ಕೆ ಸಮಿತಿ ರೂಪು ರೇಷೆ ಸಿದ್ದಪಡಿಸಲಿದೆ.
ಮುಂದಿನ ಶೈಕ್ಷಣಿಕ ವರ್ಷದ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಪಿಯು ನಿರ್ದೇಶಕಿ ಆರ್. ಸ್ನೇಹಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಇದನ್ನೂ ಓದಿ: Karnataka Covid Update: ಕರ್ನಾಟಕದಲ್ಲಿ ಇಂದು 34,281 ಜನರಿಗೆ ಸೋಂಕು ದೃಢ; ಕೊರೊನಾ ಪ್ರಕರಣಗಳ ಸಂಪೂರ್ಣ ವಿವರ ಇಲ್ಲಿದೆ
ಕೊರೊನಾ ಸೋಂಕಿತರಿಗೆ ಬೇಕಿರುವ ಕೊಲಿಸ್ಟಿನ್ ಮಾತ್ರೆ ಪೂರೈಕೆಗೆ ಕೇಂದ್ರದ ಒಪ್ಪಿಗೆ: ರಾಜ್ಯ ಆರೋಗ್ಯ ಇಲಾಖೆ ಮಾಹಿತಿ
Published On - 8:47 pm, Wed, 19 May 21