ಚಾಮರಾಜನಗರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ
ಚಾಮರಾಜನಗರ ಜಿಲ್ಲೆಗೆ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಡಿ ನೀಡಲಿದ್ದು, ಮೂರು ದಿನಗಳ ಕಾಲ ಜಿಲ್ಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಚಾಮರಾಜನಗರ: ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಗೆ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಡಿ ನೀಡಿದ್ದಾರೆ. ಇನ್ನು ಮೂರು ದಿನಗಳ ಕಾಲ ಜಿಲ್ಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ಐದು ಗಂಟೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಿದ್ದು, ಆಸ್ಪತ್ರೆಯ ಸುವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಯಲಿದೆ. ರಾತ್ರಿ ಚಾಮರಾಜನಗರದಲ್ಲಿಯೇ ವಾಸವಿದ್ದು, ನಾಳೆ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಹಾಗೂ ಕೊವಿಡ್ ಸೆಂಟರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಇನ್ನುಳಿದ ವಿವಿಧ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಚಾಮರಾಜನಗರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರತಿ ತಾಲೂಕಿನಲ್ಲಿ ಕೊವಿಡ್ ಕೇರ್ ಸೆಂಟ್ ತೆರಯಬೇಕು. ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಸಂಪರ್ಕಿತರ ಕ್ವಾರಂಟೈನ್ ಮಾಡಬೇಕು. ಆಕ್ಸಿಜನ್ ಪೂರೈಕೆಗೆ ನೋಡಲ್ ಅಧಿಕಾರಿ ನೇಮಿಸುವಂತೆ ಸೂಚನೆ ಬಗ್ಗೆ ಸಭೆ ನಡೆಯಲಿದೆ. ಸಭೆಯಲ್ಲಿ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಜಿಲ್ಲಾಧಿಕಾರಿ ಎಂ.ಆರ್.ರವಿ, ಎಸ್ಪಿ ದಿವ್ಯ ಸಾರಾ ಥಾಮಸ್ ಸೇರಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಣ್ಣೀರು ಚಾಮರಾಜನಗರದಲ್ಲಾದ ಸರಣಿ ಸಾವಿನಿಂದಾಗಿ ನೋವಾಗಿದೆ. ಈ ವಿಚಾರದಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ನನ್ನ 10 ವರ್ಷದ ಸರ್ವಿಸ್‌ನಲ್ಲಿ ಇಂತಹ ಕೆಲಸ ಮಾಡಿಲ್ಲ. ಸತ್ತವರ ಸಮ್ಮುಖದಲ್ಲಿ ಯಾರೂ ಆರೋಪಗಳನ್ನು ಮಾಡಬಾರದು. ಆರೋಪ ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತೆ. ಚಾಮರಾಜನಗರ ಜಿಲ್ಲಾಧಿಕಾರಿಎಂ ಆರ್ ರವಿ ಸುಳ್ಳು ಹೇಳಿದ್ದಾರೆ. ಕಷ್ಟ ಕಾಲದಲ್ಲೂ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳಿಸಿದ್ದೇನೆ ಎಂದು ಹೇಳುತ್ತಾ ಭಾವುಕರಾದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕಣ್ಣೀರಿಟ್ಟಿದ್ದಾರೆ.
ಆಸ್ಪತ್ರೆಯಲ್ಲಿದ್ದ 40 ಆಕ್ಸಿಜನ್ ಸಿಲಿಂಡರ್ ಕಳುಹಿಸಿದ್ದೇವೆ. ಯಾರೂ ಆಸ್ಪತ್ರೆಯಿಂದ ಆಕ್ಸಿಜನ್ ಕಳಿಸಿ ರಿಸ್ಕ್ ತೆಗೆದುಕೊಳ್ಳಲ್ಲ. ಆದರೆ ನಿಮಗಾಗಿ ನಾನು ಅಂತಹ ರಿಸ್ಕ್ ತೆಗೆದುಕೊಂಡಿದ್ದೇನೆ. ಇದು ಮಾನವೀಯತೆ ಅಲ್ವಾ ಎಂದು ಡಿಸಿ M.R.ರವಿಗೆ ಡಿಸಿ ರೋಹಿಣಿ ಸಿಂಧೂರಿ ಪ್ರಶ್ನೆ ಹಾಕಿದ್ದಾರೆ. ಮೊದಲೇ ಆಕ್ಸಿಜನ್ ಬೇಕೆಂದು ನಮಗೆ ಕೇಳಿದ್ರೆ ಕಳಿಸುತ್ತಿದ್ದೆ. ಚಾಮರಾಜನಗರ ಜಿಲ್ಲಾಧಿಕಾರಿ ಸರಿಯಾಗಿ ನಿರ್ವಹಣೆ ಮಾಡದೆ, ರಾಜ್ಯಮಟ್ಟದ ಉನ್ನತಾಧಿಕಾರಿಗಳ ಗಮನಕ್ಕೆ ತಾರದೆ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದೂ ರೋಹಿಣಿ ಝಾಡಿಸಿದ್ದಾರೆ.
ಇದನ್ನೂ ಓದಿ: ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ಸರಣಿ ಸಾವು : ನಾನು ತಪ್ಪು ಮಾಡಿಲ್ಲ – ಭಾವುಕರಾದ DC ರೋಹಿಣಿ ಸಿಂಧೂರಿ
Published On - 4:46 pm, Wed, 5 May 21