AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಿರ್ಬಂಧದ ನಡುವೆ ಕುಟುಂಬ ಸಹಿತ ದೇವಾಲಯಕ್ಕೆ ಭೇಟಿ ಕೊಟ್ಟ ಈಶ್ವರಪ್ಪ

ಬಿ.ವೈ. ವಿಜಯೇಂದ್ರ ನಂಜನಗೂಡು ದೇವಾಲಯಕ್ಕೆ ಭೇಟಿ ಕೊಟ್ಟಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಕರ್ನಾಟಕ ಹೈಕೋರ್ಟ್ ಮೇ 20ರಂದು ರಾಜ್ಯ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿತ್ತು. ವಿಜಯೇಂದ್ರಗೆ ವಿಐಪಿ ಟ್ರೀಟ್​ಮೆಂಟ್ ಕೊಟ್ಟಿರುವ ಬಗ್ಗೆ ಕೇಳಿತ್ತು.

ಲಾಕ್​ಡೌನ್ ನಿರ್ಬಂಧದ ನಡುವೆ ಕುಟುಂಬ ಸಹಿತ ದೇವಾಲಯಕ್ಕೆ ಭೇಟಿ ಕೊಟ್ಟ ಈಶ್ವರಪ್ಪ
ಕೆ.ಎಸ್​.ಈಶ್ವರಪ್ಪ
TV9 Web
| Updated By: ganapathi bhat|

Updated on: Jun 11, 2021 | 6:06 PM

Share

ಶಿವಮೊಗ್ಗ: ಕೊರೊನಾ ಲಾಕ್​ಡೌನ್ ಜಾರಿಯಲ್ಲಿ ಇರುವಾಗ ಕರ್ನಾಟಕದ ಸಚಿವ, ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಲಾಕ್​ಡೌನ್ ನಿಯಮಾವಳಿಗಳನ್ನು ಮುರಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದ ವಿನೋಭಾ ನಗರದಲ್ಲಿನ ಗಣಪತಿ ದೇವಾಲಯಕ್ಕೆ ಅವರು ಗುರುವಾರ (ಜೂನ್ 10) ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಕೊರೊನಾ ತಡೆಗೆ ಹೇರಿರುವ ನಿರ್ಬಂಧಗಳನ್ನು ಸ್ವತಃ ರಾಜ್ಯದ ಮಂತ್ರಿಗಳು ಮುರಿದಂತಾಗಿದೆ. ಈ ಬಗ್ಗೆ ನ್ಯೂಸ್ ಮಿನಿಟ್ ಸಂಸ್ಥೆ ವರದಿ ಮಾಡಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಈ ವೇಳೆ, ಈಶ್ವರಪ್ಪ ಕುಟುಂಬದ ಸುಮಾರು 14 ಸದಸ್ಯರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈಶ್ವರಪ್ಪ ಹೆಂಡತಿ, ಮಕ್ಕಳು, ಮೊಮ್ಮಕ್ಕಳು ದೇವಾಲಯಕ್ಕೆ ತೆರಳಿದ್ದಾರೆ. ಕೊರೊನಾ ಮಾರ್ಗಸೂಚಿಗಳ ಪ್ರಕಾರ ಕೇವಲ ಪೂಜೆ ಮಾಡುವವರು ಮಾತ್ರ ದೇವಾಲಯಕ್ಕೆ ಪ್ರವೇಶಿಸಬಹುದಾಗಿದೆ. ಇತರರು ದೇವಾಲಯಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.

ಈ ಗಣಪತಿ ದೇವಾಲಯವು ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದ ಒಳಾಂಗಣದಲ್ಲಿದೆ. ಎರಡು ವಾರಗಳ ಹಿಂದೆಯಷ್ಟೇ ಈ ಸಮುದಾಯ ಭವನವನ್ನು ಕೊವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿತ್ತು. ಕಡಿಮೆ ರೋಗ ಲಕ್ಷಣಗಳಿರುವ ಕೊರೊನಾ ಸೋಂಕಿತರು ಸಮುದಾಯ ಭವನದಲ್ಲಿ ಇದ್ದಾರೆ. ಕೆಲವು ಸಾಕ್ಷ್ಯಗಳ ಮಾಹಿತಿಯಂತೆ, ಈಶ್ವರಪ್ಪ ಸುಮಾರು ಬೆಳಗ್ಗೆ 8.15ರ ವೇಳೆಗೆ ದೇವಾಲಯಕ್ಕೆ ಬಂದಿದ್ದಾರೆ. ಹಾಗೂ ದೇವಸ್ಥಾನದಲ್ಲಿ ಸುಮಾರು 30 ನಿಮಿಷಗಳ ಕಾಲ ಇದ್ದರು ಎಂದು ತಿಳಿದುಬಂದಿದೆ.

ಸದ್ಯ ಕೆ.ಸ್. ಈಶ್ವರಪ್ಪ ಶಿವಮೊಗ್ಗದ ಉಸ್ತುವಾರಿ ಸಚಿವರಾಗಿದ್ದಾರೆ. ಮಂತ್ರಿಗಳ ದೇವಾಲಯ ಭೇಟಿಯ ಬಗ್ಗೆ ಜಿಲ್ಲಾಡಳಿತದ ಬಳಿ ಕೇಳಿದಾಗ ಈ ಘಟನೆಯ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿವೆ. ಈ ಮೊದಲು, ಮೇ 18ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಮೈಸೂರಿನ ನಂಜನಗೂಡು ದೇವಾಲಯಕ್ಕೆ ಭೇಟಿ ಕೊಟ್ಟಿದ್ದರು. ಆ ಘಟನೆ ಕೂಡ ವಿವಾದಕ್ಕೆ ಕಾರಣವಾಗಿತ್ತು.

ಬಿ.ವೈ. ವಿಜಯೇಂದ್ರ ನಂಜನಗೂಡು ದೇವಾಲಯಕ್ಕೆ ಭೇಟಿ ಕೊಟ್ಟಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಕರ್ನಾಟಕ ಹೈಕೋರ್ಟ್ ಮೇ 20ರಂದು ರಾಜ್ಯ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿತ್ತು. ವಿಜಯೇಂದ್ರಗೆ ವಿಐಪಿ ಟ್ರೀಟ್​ಮೆಂಟ್ ಕೊಟ್ಟಿರುವ ಬಗ್ಗೆ ಕೇಳಿತ್ತು.

ಇದನ್ನೂ ಓದಿ: ಸರ್ಕಾರದ ನಿಯಮ ಉಲ್ಲಂಘಿಸಿ ದೇಗುಲದಲ್ಲಿ ಪೂಜೆ; ಬಿ.ವೈ.ವಿಜಯೇಂದ್ರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ದೂರು

ಕೊರೊನಾ ಕಾಲದಲ್ಲಿ ಮಾರ್ಗಸೂಚಿ ಉಲ್ಲಂಘನೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ FIR ಸಾಧ್ಯತೆ- ಹೈಕೋರ್ಟ್ ಅಭಿಪ್ರಾಯ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು