ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಕ್ಷೇತ್ರದಿಂದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಎದೆ ನೋವು ಕಾಣಿಸಿಕೊಂಡಿದೆ. ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ತುಮಕೂರಿನಲ್ಲಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ವೆಂಕಟ್ ಭೇಟಿ ನೀಡಿದ್ದಾರೆ.

ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು
Shivaraj Tangadagi
Edited By:

Updated on: Mar 22, 2026 | 11:06 PM

ತುಮಕೂರು, (ಮಾರ್ಚ್ 22): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 22) ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಶಿರಾ ದಾಟಿ ಕೋರ ಬಳಿ ಬರುವಾಗ ಎದೆನೋವು ಶುರುವಾಗಿದೆ. ಹೀಗಾಗಿ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ದಾಖಲಿಸಲಾಗಿದೆ.

ಕನಕಗಿರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿ ಇಂದು (ಮಾರ್ಚ್ 22) ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಇಕೋ ಟೆಸ್ಟ್ ಸೇರಿದಂತೆ ಹೃದಯ ಸಂಬಂಧಿತ ತಪಾಸಣೆ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ತುಮಕೂರು ಎಸ್ಪಿ ಅಶೋಕ್, ಡಿವೈಎಸ್ಪಿ ಚಂದ್ರಶೇಖರ್ ದೌಡಾಯಿಸಿದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದ ವೈದ್ಯರು ತಿಳಿಸಿದ್ದಾರೆ.

ಶಿವರಾಜ್ ತಂಗಡಗಿ ಹೊಸಪೇಟೆಯಿಂದ ಬೆಂಗಳೂರಿಗೆ ತಮ್ಮ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ತುಮಕೂರಿನ ಬಳಿ ಮಾರ್ಗ ಮಧ್ಯೆ ಅವರು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ತಕ್ಷಣವೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಯ್ತು. ಈ ವೇಳೆ ತಪಾಸಣೆ ಮಾಡಿದ ವೈದ್ಯರು, ಇದು ಗ್ಯಾಸ್ಟ್ರಿಕ್ ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲಾ ಪರೀಕ್ಷೆ ಮುಗಿಸಿಕೊಂಡು ಬೆಂಗಳೂರಿನತ್ತ ಹೊರಟರು.

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us