ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ನಿನ್ನೆ ರಾತ್ರಿಯೇ ಮುಖ್ಯ ಕಾರ್ಯದರ್ಶಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬೇಕಾಗಿದೆ. ಹೀಗಾಗಿ 14 ದಿನ ಬಿಗಿ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸರ್ವಪಕ್ಷಗಳ ಸಭೆಯ ಬಳಿಕ ರಾಜ್ಯದಲ್ಲಿ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ, ಮತ್ತು ವೀಕೆಂಡ್ನಲ್ಲಿ ಕರ್ಫ್ಯೂ (ಶುಕ್ರವಾರ ಸಂಜೆ 9ಗಂಟೆಯಿಂದ ಶನಿವಾರ ಬೆಳಗ್ಗೆ 6ರವರೆಗೆ) ಜಾರಿಗೆ ತರಲಾಗಿದೆ. ಏಪ್ರಿಲ್ 21ರಿಂದ ಮೇ 14ರವರೆಗೆ ರಾಜ್ಯದಲ್ಲಿ ಈ ಹೊಸ ನಿಯಮಗಳು ಜಾರಿಯಲ್ಲಿರಲಿದೆ. ಎಂದು 14ದಿನ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮ ತರಲಾಗಿದೆ. ಹೀಗಾಗಿ ಈ ಬಗ್ಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬೇಕಾಗಿದೆ. ಹೀಗಾಗಿ 14 ದಿನ ಬಿಗಿ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಜನರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು. ಆಕ್ಸಿಜನ್, ವೆಂಟಿಲೇಟರ್, ICU ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತೆ. ಔಷದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಅಗತ್ಯವಿರುವ ಕಡೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಧೋನಿ ತಂದೆ, ತಾಯಿ ಇಬ್ಬರಿಗೂ ಕೊರೊನಾ ಪಾಸಿಟಿವ್; ರಾಂಚಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು