ನಮ್ಮದೇನೂ ವೈಯಕ್ತಿಕ ಪ್ರತಿಷ್ಠೆ ಅಲ್ಲ.. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ -ಸುರೇಶ್​ ಕುಮಾರ್​

ಶಾಲೆ ಆರಂಭಿಸುವುದಕ್ಕೆ ನಾನು ಯಾವುದೇ ಹಠ ಹಿಡಿದಿಲ್ಲ. ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಹೇಳಿದ್ದಾರೆ.

ನಮ್ಮದೇನೂ ವೈಯಕ್ತಿಕ ಪ್ರತಿಷ್ಠೆ ಅಲ್ಲ.. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ -ಸುರೇಶ್​ ಕುಮಾರ್​
ಶಿಕ್ಷಣ ಸಚಿವ ಸುರೇಶ್ ಕುಮಾರ್‌
Edited By:

Updated on: Dec 24, 2020 | 12:50 PM

ಬೆಂಗಳೂರು: ಶಾಲೆ ಆರಂಭಿಸುವುದಕ್ಕೆ ನಾನು ಯಾವುದೇ ಹಠ ಹಿಡಿದಿಲ್ಲ. ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಹೇಳಿದ್ದಾರೆ.

ನಾವ್ಯಾರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲಸವನ್ನು ಮಾಡುತ್ತಿಲ್ಲ. ಆರೋಗ್ಯ, ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ. ನಾವು ಅತ್ಯಂತ ಸಮನ್ವಯತೆಯಿಂದ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ, ಆರೋಗ್ಯ ಇಲಾಖೆಯ ನಡುವೆ ಹೊಂದಾಣಿಕೆ ಇದೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದರು.

ಸಂಕ್ರಾಂತಿ ಬಳಿಕ ಶಾಲೆ ಆರಂಭಿಸಲು ಎಂಬ H.ವಿಶ್ವನಾಥ್ ಸಲಹೆಗೆ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು MLC ಹೆಚ್.ವಿಶ್ವನಾಥ್ ಶಿಕ್ಷಣ ಸಚಿವರಾಗಿದ್ದರು. ಅವರಿಗೆ ಅಭಿಪ್ರಾಯ ತಿಳಿಸುವುದಕ್ಕೆ ಸ್ವಾತಂತ್ರ್ಯ ಇದೆ. ಅವರ ಸಲಹೆಗಳನ್ನು ಸ್ವೀಕರಿಸುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದರು.

‘ಸುರೇಶ್ ಕುಮಾರ್ ಹೇಳಿದ್ದು ಯಾವುದಾದ್ರೂ ಆಗಿದೆಯಾ’
ಸುರೇಶ್ ಕುಮಾರ್ ಹೇಳಿದ್ದು ಯಾವುದಾದ್ರೂ ಆಗಿದೆಯಾ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ H.ವಿಶ್ವನಾಥ್ ಟಾಂಗ್ ಕೊಟ್ಟಿದ್ದಾರೆ. ಸುರೇಶ್ ಕುಮಾರ್ ಆದೇಶ ಮಾಡ್ತಾರೆ, ವಾಪಸ್ ಪಡೀತಾರೆ ಎಂದು ಮೈಸೂರಿನಲ್ಲಿ ಹೇಳಿದರು.

ಅವರಿಗೆ ಮಾತು ವಾಪಸ್ ಪಡೆಯುವ ಕಾಯಿಲೆ ಇದ್ದಂತಿದೆ ಎಂದು BJP MLC ಹೆಚ್.ವಿಶ್ವನಾಥ್ ಆಕ್ರೋಶ ಹೊರಹಾಕಿದರು. ಜೊತೆಗೆ, ಜನವರಿ 1ರಿಂದ ಶಾಲಾ-ಕಾಲೇಜು ಆರಂಭಿಸುವುದು ಬೇಡ. ಸಂಕ್ರಾಂತಿ ನಂತರ ಶಾಲೆ ಆರಂಭ ಮಾಡುವಂತೆ ಸಲಹೆ ನೀಡಿದರು.

ಬೆಂಗಳೂರಿನ ಸಚಿವರ ಮಾತನ್ನೇ CM ಕೇಳಿದಾಗ ಹೀಗಾಗಿ ಬಿಡುತ್ತೆ -ನೈಟ್ ಕರ್ಫ್ಯೂ ಬಗ್ಗೆ ಭುಗಿಲೆದ್ದ ಉತ್ತರ ಕರ್ನಾಟಕ ಸಚಿವರ ಅಸಮಾಧಾನ