ವೀರಪ್ಪನ್ ಹುಟ್ಟೂರಿನಲ್ಲಿ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯ

|

Updated on: Nov 18, 2019 | 9:45 AM

ಚಾಮರಾಜನಗರ: ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಸುರೇಶ್ ಕುಮಾರ್ ಇಂದು ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಗೋಪಿನಾಥಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಕಾಡುಗಳ್ಳ ವೀರಪ್ಪನ್ ಹುಟ್ಟೂರು. ಕರ್ನಾಟಕ ಗಡಿಯಂಚಿನಲ್ಲಿ ಇರುವ ಈ ಗ್ರಾಮದಲ್ಲಿ ಇಂದು ಸಚಿವರು ವಾಸ್ತವ್ಯ ಹೂಡಲಿದ್ದಾರೆ. ಪ್ರಚಲಿತ ಶಿಕ್ಷಣದ ಸಮಸ್ಯೆ ಮತ್ತು ಪರಿಹಾರ ಕುರಿತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ. ಸೆ.19 ರಂದು ಮೊದಲ ಬಾರಿಗೆ ತುಮಕೂರು […]

ವೀರಪ್ಪನ್ ಹುಟ್ಟೂರಿನಲ್ಲಿ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯ
Follow us on

ಚಾಮರಾಜನಗರ: ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಸುರೇಶ್ ಕುಮಾರ್ ಇಂದು ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಗೋಪಿನಾಥಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಕಾಡುಗಳ್ಳ ವೀರಪ್ಪನ್ ಹುಟ್ಟೂರು. ಕರ್ನಾಟಕ ಗಡಿಯಂಚಿನಲ್ಲಿ ಇರುವ ಈ ಗ್ರಾಮದಲ್ಲಿ ಇಂದು ಸಚಿವರು ವಾಸ್ತವ್ಯ ಹೂಡಲಿದ್ದಾರೆ. ಪ್ರಚಲಿತ ಶಿಕ್ಷಣದ ಸಮಸ್ಯೆ ಮತ್ತು ಪರಿಹಾರ ಕುರಿತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ.

ಸೆ.19 ರಂದು ಮೊದಲ ಬಾರಿಗೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಎನ್ ಅಚ್ಚಮ್ಮಹಳ್ಳಿ ಸ.ಪ್ರಾ.ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ಸಚಿವರು. ಎರಡನೇ ಬಾರಿಗೆ ಚಾಮರಾಜನಗರ ಜಿಲ್ಲೆಯ ಗೋಪುನಾಥಂ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಚಿವರ ಆಗಮನಕ್ಕೆ ಶಾಲೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.