AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜು ಪುನರಾರಂಭ: ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ

ಜನವರಿ 1ರಿಂದ 10-12ರವರೆಗಿನ ತರಗತಿಗಳು ಪ್ರಾರಂಭವಾಗುತ್ತವೆ. ಪಾಲಕರ ಜತೆ ಸಮೀಕ್ಷೆಯೂ ಆಗಿದೆ. ಇಷ್ಟುದಿನ ಮಕ್ಕಳನ್ನು ಮನೆಯಲ್ಲಿ ಪಾಲಕರು ಎಷ್ಟು ಜೋಪಾನ ಮಾಡಿದ್ದರೋ, ಅಷ್ಟೇ ಜೋಪಾನವಾಗಿ ನೋಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಭರವಸೆ ನೀಡಿದರು.

ಶಾಲಾ-ಕಾಲೇಜು ಪುನರಾರಂಭ: ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ
ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಸಿದ್ಧತೆ ಪರಿಶೀಲನೆ ಮಾಡಿದ ಸಚಿವ ಸುರೇಶ್ ಕುಮಾರ್
Lakshmi Hegde
|

Updated on:Dec 30, 2020 | 2:43 PM

Share

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು. ಕೊವಿಡ್​ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್​ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.

ಹಾಗೇ ವಿದ್ಯಾರ್ಥಿಗಳು, ಶಿಕ್ಷಕರು ಮೊದಲ ದಿನದ ತರಗತಿ ಅವಧಿಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳನ್ನು ವಿವರಿಸಿದರು. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಪ್ರತಿಯೊಬ್ಬರ ವಿದ್ಯಾರ್ಥಿಯಲ್ಲೂ ಹೆಚ್ಚಿನ ಅಂಕಗಳನ್ನು ಪಡೆಯಬೇಕು ಎಂಬ ಹುಮ್ಮಸ್ಸು, ಆಸಕ್ತಿಯನ್ನು ಮೂಡಿಸಬೇಕು. ಅವರನ್ನು ಪ್ರೇರೇಪಿಸಬೇಕು ಎಂದು ಶಿಕ್ಷಕರಿಗೂ ಸಲಹೆ ನೀಡಿದರು.

ಪ್ರತಿಯೊಬ್ಬರೂ ಮಾಸ್ಕ್​ ಧರಿಸಬೇಕು, ಕೈ ತೊಳೆಯಲು ಸ್ಯಾನಿಟೈಸರ್​ ಅಥವಾ ಸಾಬೂನು ಬಳಸಬೇಕು, ಉಪಾಧ್ಯಾಯರು ಕೊವಿಡ್​ -19 ಪರೀಕಾ ಫಲಿತಾಂಶದೊಂದಿಗೇ ಆಗಮಿಸಬೇಕು..ವಯಸ್ಸಾದವು ಫೇಸ್​ಶೀಲ್ಡ್​ ಬಳಕೆ ಮಾಡಿದರೆ ಉತ್ತಮ. ಮಕ್ಕಳಲ್ಲಿ ದೈಹಿಕ ಅಂತರ ಕಾಪಾಡುವತ್ತ ಗಮನಹರಿಸಬೇಕು, ಹಾಗೇ ಅವರ ಆರೋಗ್ಯ, ರೋಗಲಕ್ಷಣದ ಬಗ್ಗೆಯೂ ಲಕ್ಷ್ಯ ಇರಬೇಕು. ಒಂದು ಕೊಠಡಿಯಲ್ಲಿ 15 ಮಕ್ಕಳು ಮಾತ್ರ ಇರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಸ್ಯಾನಿಟೈಸ್​​  ಮಾಡೋದನ್ನು ಮರೀಬಾರ್ದು ಹಾಗೇ ಸಂಜೆ ಶಾಲೆ ಮುಗಿದ ನಂತರ ಶಾಲೆಯ ಆವರಣ, ತರಗತಿ ಕೊಠಡಿ ಮತ್ತು ಶೌಚಗೃಹಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯಬಾರದು. ಇಲಾಖೆ ನಿಗದಿಪಡಿಸಿದ ಪಠ್ಯಕ್ರಮಗಳನ್ನು ಪೂರ್ಣಗೊಳಿಸುವತ್ತ ಉಪನ್ಯಾಸಕರು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪಠ್ಯಕ್ರಮವನ್ನು ಮುಗಿಸಬೇಕು ಎಂದು ತಿಳಿಸಿದರು.

ಸಂಜೆ ಶಾಲೆ ಮುಗಿದ ನಂತರ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯದೇ ಪಾಲಿಸಬೇಕಿದೆ. ಈಗಾಗಲೇ ಹೆಚ್ಚಿನ ದಿನಗಳು  ಮುಗಿದಿರುವುದರಿಂದ ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.

ಜನವರಿ 1ರಿಂದ 10-12ರವರೆಗಿನ ತರಗತಿಗಳು ಪ್ರಾರಂಭವಾಗುತ್ತವೆ. ಪಾಲಕರ ಜತೆ ಸಮೀಕ್ಷೆಯೂ ಆಗಿದೆ. ಇಷ್ಟುದಿನ ಮಕ್ಕಳನ್ನು ಮನೆಯಲ್ಲಿ ಪಾಲಕರು ಎಷ್ಟು ಜೋಪಾನ ಮಾಡಿದ್ದರೋ, ಅಷ್ಟೇ ಜೋಪಾನವಾಗಿ ನೋಡಿಕೊಳ್ಳುತ್ತೇವೆ. ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಎಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ, ಹಾಗೇ ಈಗಲೂ ಎಚ್ಚರಿಕೆ ವಹಿಸಲಾಗುತ್ತದೆ ಎಂದು ತಿಳಿಸಿದರು.

ಯಾವ್ಯಾವ ಕಾಲೇಜಿಗೆ ಭೇಟಿ? ಇಂದು ಶಿಕ್ಷಣ ಸಚಿವರು ಮಲ್ಲೇಶ್ವರಂನ 18ನೇ ಕ್ರಾಸ್​, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು, ಹೆಬ್ಬಾಳ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ರಾಜ್ಯದ ವಿವಿಧೆಡೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಡಿಡಿಪಿಐ, ಡಿಡಿಪಿಯು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು  ನೀಡಿದರು.

ಶಾಲೆ ಆರಂಭದ ಬಗ್ಗೆ ಗೊಂದಲವಿದೆ.. ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸ್ತೇವೆ: ಆರ್.ಅಶೋಕ್​

Published On - 2:42 pm, Wed, 30 December 20

ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ