ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರೆದರೆ ಮತ್ತೆ ಧ್ವನಿ ಎತ್ತುವೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಉಮೇಶ್ ಕತ್ತಿ ತಿಳಿಸಿದರು.

ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ
ಉಮೇಶ್ ಕತ್ತಿ
Follow us
TV9 Web
| Updated By: sandhya thejappa

Updated on: Jul 12, 2021 | 12:54 PM

ಧಾರವಾಡ: ನಾನು 8 ಸಲ ಶಾಸಕ, 6 ಇಲಾಖೆ ನಿರ್ವಹಿಸಿದವನು. ನನಗೆ ಅನುಭವ ಇದೆ. ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಧಾರವಾಡದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಯೋಗ್ಯತೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಕಳಂಕರಹಿತ ಶಾಸಕ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಆಸೆ ಇದೆ. ಸಿಎಂ ಆದ ಮೇಲೆ ಪ್ರಧಾನಿಯಾಗುವ ಆಸೆಯೂ ಇರುತ್ತೆ. ಈಗ ಸದ್ಯಕ್ಕೆ ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರೆದರೆ ಮತ್ತೆ ಧ್ವನಿ ಎತ್ತುವೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಉಮೇಶ್ ಕತ್ತಿ ತಿಳಿಸಿದರು. ಜೊತೆಗೆ ಉತ್ತರ ಕರ್ನಾಟಕವನ್ನು ಒಡೆಯುವ ಉದ್ದೇಶ ನನಗಿಲ್ಲ. ಅಖಂಡ ಕರ್ನಾಟಕದಲ್ಲಿದ್ದು ಅದನ್ನು ಆಳಬೇಕೆಂಬ ಉದ್ದೇಶ ನನಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಸಲ ಉತ್ತರ ಕರ್ನಾಟಕದವರಿಗೆ ಸ್ಥಾನ ಸಿಗಬಹುದು. ನನಗೆ ಮುಖ್ಯಮಂತ್ರಿಯಾಗಲು ಇನ್ನೂ 15 ವರ್ಷ ಸಮಯ ಇದೆ. ಈಗ 60 ವರ್ಷ, ಇನ್ನು 15 ವರ್ಷದಲ್ಲಿ ಸಿಎಂ ಆಗಬಹುದು. ಅರವಿಂದ ಬೆಲ್ಲದ್ ಯಾಕೆ ಮುಖ್ಯಮಂತ್ರಿ ಆಗಬಾರದು ಅವರ ತಂದೆ ಶಾಸಕರಾಗಿದ್ರು, ಅವರೂ ಶಾಸಕರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ನಾನು, ನಿರಾಣಿ ಅರವಿಂದ ಬೆಲ್ಲದ್ ಎಲ್ಲರೂ ಮುಖ್ಯಮಂತ್ರಿ ಆಗಬಹುದು ಎಂದು ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

Mekedatu Project: ಮೇಕೆದಾಟು ಯೋಜನೆಗೆ ವಿರೋಧ; ಸರ್ವ ಪಕ್ಷ ನಾಯಕರ ಮಹತ್ವದ ಸಭೆ ಕರೆದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

(Minister Umesh Katti says i am perfect suit for Chief Minister position)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ