ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್ ಸಿಗಲ್ಲ; ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಟಿಕೆಟ್ ಮಾತು ಜೋರಾಗಿದೆ. ಈ ವೇಳೆ ಕ್ಷೇತ್ರದಲ್ಲಿ ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್ ಸಿಗಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಹೇಳಿದ್ದಾರೆ.
ಕಲಬುರಗಿ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಈ ಬಾರಿ ಹೇಗಾದರೋ ಗೆಲ್ಲಬೇಕೇಂಬ ಉದ್ದೇಶದಿಂದ ಶತಾಯ ಗಥಾಯ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಈ ಬಾರಿ ಯಾವ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್ ಸಿಗಲ್ಲ, ಯಾರು ಕೆಲಸ ಮಾಡುವುದಿಲ್ಲವೋ, ಜನರಿಗೆ ಸಿಗುವುದಿಲ್ಲವೋ ಅಂತಹವರಿಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲ, ಗುಜರಾತ್, ಉತ್ತರ ಪ್ರದೇಶ ಮಾದರಿಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆ ಮಾಡಲಾಗುವುದು ಮತ್ತು ಯಾರು ಆಚಾರ ವಿಚಾರದಲ್ಲಿ ಸರಿ ಇರುತ್ತಾರೋ ಅಂತಹವರಿಗೆ ಪಕ್ಷ ರಕ್ಷಣೆ ನೀಡುತ್ತೆ. ಜನವಿರೋಧಿ ಕೆಲಸ ಮಾಡುವವರಿಗೆ ಟಿಕೆಟ್ ಕಟ್ ಮಾಡ್ತಾರೆ, ಯಾರಿಗೆ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಕಲಬುರಗಿ ನಗರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.
ಈ ಬಾರಿ ಹಾಲಿ ಶಾಸಕರು, ಸಚಿವರಿಗೊ ಕೂಡಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಗುಜರಾತ್, ಉತ್ತರಪ್ರದೇಶದ ಮಾದರಿಯಂತೆ ಟಿಕೆಟ್ ಹಂಚಿಕೆ ಮಾಡುತ್ತಿದ್ದು, ಜನರಿಗೆ ಯಾರು ವಿರುದ್ದವಾಗಿದ್ದಾರೋ ಅಂತಹ ಶಾಸಕರು, ಸಚಿವರಿಗೆ ಟಿಕೆಟ್ ನೀಡದೇ, ಬೇರೆಯವರಿಗೆ ಟಿಕೆಟ್ ನೀಡಲಾಗುತ್ತದೆ. ಆದರೆ ಯಾರಿಗೆ ಟಿಕೆಟ್ ನೀಡಬೇಕು ಅನ್ನೋದನ್ನು ಪಾರ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದಿದ್ದಾರೆ. ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಈ ಕುರಿತು ಹಲವು ವಿಚಾರಗಳು ಕೇಳಿಬರುತ್ತಿದ್ದು, ಹಾಲಿ ಶಾಸಕರು, ಸಚಿವರುಗಳಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ