ಮೈಸೂರು ಜೆಎಸ್ಎಸ್ ಆಸ್ಪತ್ರೆಯಲ್ಲಿ ಹೆಚ್ಚುವರಿ ಬೆಡ್ ನೀಡುವಂತೆ ಸುತ್ತೂರು ಮಠದ ಶ್ರೀಗಳಿಗೆ ಮನವಿ ಸಲ್ಲಿಸಿದ ಸಚಿವರು
ಸುತ್ತೂರು ಶಾಖಾ ಮಠದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಬಿಜೆಪಿ ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಅಪರ ಜಿಲ್ಲಾಧಿಕಾರಿ ಸೇರಿದಂತೆ ಕೆಲ ಅಧಿಕಾರಿಗಳು ಶ್ರೀಗಳ ಜತೆ ಸಭೆ ನಡೆಸಿದ್ದಾರೆ.
ಮೈಸೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ರೋಗಿಗಳ ಚಿಕಿತ್ಸೆಗೆ ಹಾಸಿಗೆ, ವೈದ್ಯಕೀಯ ಪರಿಕರಗಳ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಇಂದು ಮೈಸೂರಿನಲ್ಲಿ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡುವಂತೆ ಸಚಿವರು ಸುತ್ತೂರು ಮಠದ ಶ್ರೀಗಳಿಗೆ ಮನವಿ ಸಲ್ಲಿಸಿದ್ದಾರೆ. ಜೆಎಸ್ಎಸ್ ಆಸ್ಪತ್ರೆಯಲ್ಲಿ ಬೆಡ್ ನೀಡುವಂತೆ ಮನವಿ ಮಾಡಿದ್ದಾರೆ.
ಸುತ್ತೂರು ಶಾಖಾ ಮಠದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಬಿಜೆಪಿ ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಅಪರ ಜಿಲ್ಲಾಧಿಕಾರಿ ಸೇರಿದಂತೆ ಕೆಲ ಅಧಿಕಾರಿಗಳು ಶ್ರೀಗಳ ಜತೆ ಸಭೆ ನಡೆಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ಹೊರ ಜಿಲ್ಲೆಯ ಸೋಂಕಿತರಿಗೆ ಮೈಸೂರಿಗೆ ಪ್ರವೇಶವಿಲ್ಲ ಹೊರ ಜಿಲ್ಲೆಯ ಸೋಂಕಿತರಿಗೆ ಮೈಸೂರಿಗೆ ಪ್ರವೇಶವಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಕೊನೇ ಕ್ಷಣದಲ್ಲಿ ಸೋಂಕಿತರು ಆಸ್ಪತ್ರೆಗಳಿಗೆ ಬರ್ತಿದ್ದಾರೆ. ಇದರಿಂದ ಹೆಚ್ಚಿನ ಸಾವು ನೋವುಗಳಾಗುತ್ತಿವೆ. ಹೀಗಾಗಿ ಮೈಸೂರು ಜಿಲ್ಲೆಗೆ ಎಲ್ಲ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿಗೆ ಇನ್ನು ಹೆಚ್ಚುವರಿ ಆಕ್ಸಿಜನ್ ಅವಶ್ಯಕತೆ ಇದೆ. ನಮ್ಮ ಖೋಟಾ ಹೆಚ್ಚಿಸಲು ಸರ್ಕಾರವನ್ನು ಕೇಳಿದ್ದೇನೆ. ನಮ್ಮ ಜಿಲ್ಲೆಗೆ ಆಕ್ಸಿಜನ್ ಖೋಟಾ ಹೆಚ್ಚಾಗಬಹುದು ಎಂದು ಎಸ್.ಟಿ.ಸೋಮಶೇಖರ್ ಹೇಳಿಕೆ ವೈದ್ಯಕೀಯ ಆಮ್ಲಜನಕ ಪೂರೈಕೆ ಬಗ್ಗೆ ತಿಳಿಸಿದ್ದಾರೆ.
ಮೈಸೂರು ಮೃಗಾಲಯಕ್ಕೂ ಎದುರಾಯ್ತು ಲಾಕ್ಡೌನ್ ಸಂಕಷ್ಟ; ಪ್ರಾಣಿಗಳ ನೆರವಿಗೆ ಬರುವಂತೆ ಪ್ರಾಧಿಕಾರದಿಂದ ಮನವಿ
Published On - 5:10 pm, Mon, 10 May 21