ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹಾರಿರುವ​​ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ

ಅಶ್ಲೀಲ ವಿಡಿಯೋ ವೈರಲ್​ ಬೆನ್ನಲ್ಲೇ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಿ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ. ಏಪ್ರಿಲ್ 26ರಂದು ಲೋಕಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ರಾತ್ರೋರಾತ್ರಿ ಪ್ರಜ್ವಲ್ ಜರ್ಮಿನಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್​​ನನ್ನು ವಿದೇಶಕ್ಕೆ ಕಳುಹಿಸಿದ್ಯಾರು? ಹೇಗೆ ಹೋದ್ರು? ಎನ್ನುವ ಚರ್ಚೆಗಳು ಶುರುವಾಗಿವೆ. ಇದರ ಬೆನ್ನಲ್ಲೇ ಇದಕ್ಕೆ ವಿದೇಶಾಂಗ ಸಚಿವಾಲಯ ಮಹತ್ವದ ಮಾಹಿತಿಯನ್ನು ನೀಡಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹಾರಿರುವ​​ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ
ಪ್ರಜ್ವಲ್ ರೇವಣ್ಣ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on: May 02, 2024 | 6:02 PM

ನವದೆಹಲಿ/ಬೆಂಗಳೂರು, (ಮೇ 02): ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣ ದಾಖಲಾಗುತ್ತಿದ್ದಂತೆಯೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಗೆ ತೆರಳಿದ್ದು, ಇದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಜ್ವಲ್ ಅವರನ್ನ ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ ದಿಢೀರ್​ ವಿದೇಶಕ್ಕೆ ಹೋಗಿದ್ದೇಗೆ? ಹೀಗೆ ಪ್ರಜ್ವಲ್ ವಿದೇಶಕ್ಕೆ ಹಾರಿರುವ ಹಿಂದಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕಾಂಗ್ರೆಸ್, ದೇವೇಗೌಡ ಮತ್ತು ಕೇಂದ್ರ ಸರ್ಕಾರದ ಮೇ ಆರೋಪ ಮಾಡಿದೆ. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿರಲಿಲ್ಲ. ವಿದೇಶಾಂಗ ಇಲಾಖೆಯಿಂದ ಯಾವುದೇ ವೀಸಾ ನೋಟ್ ಕೂಡ ನೀಡಿಲ್ಲ. ಬದಲಾಗಿ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌(diplomatic passport) ಮೂಲಕ ವಿದೇಶಕ್ಕೆ ಹೋಗಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಸಾಕಷ್ಟು ಹಲವು ರೀತಿಯ ಚರ್ಚೆಗಳು ನಡೆಯುತ್ತಿರವ ಬೆನ್ನಲ್ಲೇ ದೆಹಲಿಯಲ್ಲಿಂದು ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಲು ನಾವು ಕೂಡ ಅನುಮತಿ ನೀಡಿಲ್ಲ. ವಿದೇಶಾಂಗ ಇಲಾಖೆಯಿಂದ ಯಾವುದೇ ವೀಸಾ ನೋಟ್ ಸಹ ಕೊಟ್ಟಿಲ್ಲ. ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವವರಿಗೆ ಯಾವುದೇ ವೀಸಾ ಅಗತ್ಯವಿಲ್ಲ. ಜರ್ಮನಿಗೆ ಪ್ರಯಾಣಿಸಲು ಸಚಿವಾಲಯವು ವೀಸಾ ಟಿಪ್ಪಣಿಯನ್ನೂ ನೀಡಿಲ್ಲ. ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ಪ್ರಯಾಣಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic Passport) ಮೂಲಕ ಜರ್ಮನಿಗೆ ಹಾರಿರುವುದು ಖಚಿತವಾಗಿದೆ.

ಇದನ್ನೂ ಓದಿ: ವೀಸಾ ಇಲ್ಲದೆ ಪ್ರಜ್ವಲ್‌ ರೇವಣ್ಣ ದಿಢೀರ್ ಜರ್ಮನಿಗೆ ಹಾರಿದ್ದೇಗೆ? ಇಲ್ಲಿದೆ ಸಂಪೂರ್ಣ ವಿವರ

ಇದರೊಂದಿಗೆ ಪ್ರಜ್ವಲ್ ಅದು ಹೇಗೆ ಏಕಾಏಕಿ ಜರ್ಮನಿಗೆ ಹೋದರು? ಅದು ಹೇಗೆ ಸಾಧ್ಯವಾಯ್ತು? ವಿದೇಶಕ್ಕೆ ಹಾರಲು ಈ ಮೊದಲೇ ಪ್ಲ್ಯಾನ್ ಮಾಡಿದ್ರಾ? ಎನ್ನುವ ಅಂತೆಕಂತೆಗಳಿಗೆ ತೆರೆಬಿದ್ದಿದ್ದು, ಎಲ್ಲಾ ಗೊಂದಲಗಳಿಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ.

ಇದೇ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಪತ್ರ

ಇನ್ನು ಪ್ರಜ್ವಲ್ ರೇವಣ್ಣ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್  ಮೂಲಕ ವಿದೇಶಕ್ಕೆ ಹೋಗಿರುವುದು ಗೊತ್ತಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.

ಮೋದಿಗೆ ಸಿಎಂ ಬರೆದ ಪತ್ರದಲ್ಲೇನಿದೆ?

ಮಹಿಳಾ ದೌರ್ಜನ್ಯದಂತಹ ಗುರುತರ ಆರೋಪ ಹೊತ್ತಿರುವ ಹಾಲಿ‌ ಸಂಸದ ಹಾಗೂ ಎನ್‌ಡಿಎ ಮೈತ್ರಿಕೂಟದ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿದೆ. ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್‌ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ. ಹಾಗಾಗಿ ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಗಳು ತಕ್ಷಣ ಕಾರ್ಯಪ್ರವೃತ್ತವಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯುವ ಜೊತೆಗೆ ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳನ್ನು ಬಳಸಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರನ್ನು ಮರಳಿ ಭಾರತಕ್ಕೆ ಕರೆತರಲು ನೆರವಾಗಬೇಕು ಎಂದು ಪ್ರಧಾನಿಗೆ ಪತ್ರ ಬರೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.