AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ಡೌನ್ ವಿಸ್ತರಣೆ ಬಗ್ಗೆ ಸಚಿವರ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡ್ತಾರೆ -ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದರು. ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಲಾಕ್ಡೌನ್ ವಿಸ್ತರಣೆ ಬಗ್ಗೆ ಸಚಿವರ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡ್ತಾರೆ -ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on: May 30, 2021 | 3:52 PM

Share

ಬೆಂಗಳೂರು: ಸದ್ಯಕ್ಕೆ ಜೂನ್ 7 ರ ವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಅವರು ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದರು. ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂನ್ 30ರವರೆಗೆ ಬಿಗಿ ಕ್ರಮಗಳು ಇರಬೇಕು ಅಂತ ಹೇಳಿದೆ. ಇದನ್ನು ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳು ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ ವಿವರಿಸಿದರು.

ರಾಜ್ಯದಲ್ಲಿ ಕೊವಿಡ್ ಪಾಸಿಟಿವ್ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಅದು ಶೇಕಡ 10 ಕ್ಕಿಂತ ಕಡಿಮೆ ಆಗಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕೊವಿಡ್ ಪ್ರಮಾಣ ಮತ್ತು ಸಾವುಗಳ ಸಂಖ್ಯೆ ನಿಯಂತ್ರಣಕ್ಕೆ ಬರಬೇಕು. ಆಗ ಮಾತ್ರ ಕೊವಿಡ್ ಹತೋಟಿಗೆ ಬರಲು ಸಾಧ್ಯ. ಆಗ ನಮ್ಮ ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಲಾಕ್ಡೌನ್ ನಷ್ಟಕ್ಕೆ ಪರಿಹಾರ ನೀಡಿ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾಗಿರುವ 11 ಸಾವಿರ ಕೋಟಿ ಜಿಎಸ್ಟಿ ಪರಿಹಾರವನ್ನು ನೀಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಾಗಿದೆ. ಈ ವರ್ಷ ಮತ್ತೆ ಕೊವಿಡ್ ಬಂದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಚೇತರಿಸಿಕೊಂಡಿತ್ತು. ಆದರೆ ಈಗ ಮತ್ತೆ ಲಾಕ್ ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ 2 – 3 ತಿಂಗಳು ಜಿಎಸ್ಟಿ ಸಂಗ್ರಹ ಕಡಿಮೆಯಾಗುತ್ತದೆ. ಹೀಗೆ ಲಾಕ್ಡೌನ್ ನಲ್ಲಿ ಕಡಿಮೆಯಾಗುವ ಜಿಎಸ್ಟಿ ಪರಿಹಾರವನ್ನು ತುಂಬಿಕೊಡುವಂತೆ ಎಲ್ಲ ರಾಜ್ಯಗಳು ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯ ಮಾಡಿದವು‌. ಕರ್ನಾಟಕದಿಂದ ನಾನು ಕೂಡ ಇದೇ ಒತ್ತಾಯ ಮಾಡಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ಜಿಎಸ್ಟಿ ಇಂದ ಎಷ್ಟು ಪರಿಹಾರ ಕೊಡಬೇಕು? ಸಾಲ ಪಡೆಯಲು ಅನುಮತಿ ನೀಡಬೇಕಾ? ಇದನ್ನು ಹೊರತುಪಡಿಸಿ ಉಳಿದ ಪರಿಹಾರ ಹಣವನ್ನು ಯಾವ ರೂಪದಲ್ಲಿ ನೀಡಲು ಸಾಧ್ಯ ಎಂಬುದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ