AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ ಅಮಾನುಷ ಕೃತ್ಯ: ಅಪ್ರಾಪ್ತೆ ಮೇಲೆ ದೊಡ್ಡಪ್ಪನ ಮಗನಿಂದಲೇ ಅತ್ಯಾಚಾರ

ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ದೊಡ್ಡಪ್ಪನ ಮಗನಿಂದಲೇ ಅತ್ಯಾಚಾರ ನಡೆದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ವರದಿಯಾಗಿದೆ. ಅಪ್ರಾಪ್ತೆಯ ದೊಡ್ಡಪ್ಪನ ಮಗ ಸಂತೋಷ್​(30) ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. 

ಬೆಣ್ಣೆನಗರಿಯಲ್ಲಿ ಅಮಾನುಷ ಕೃತ್ಯ: ಅಪ್ರಾಪ್ತೆ ಮೇಲೆ ದೊಡ್ಡಪ್ಪನ ಮಗನಿಂದಲೇ ಅತ್ಯಾಚಾರ
ಸಾಂದರ್ಭಿಕ ಚಿತ್ರ
KUSHAL V
|

Updated on:Mar 21, 2021 | 11:15 PM

Share

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ದೊಡ್ಡಪ್ಪನ ಮಗನಿಂದಲೇ ಅತ್ಯಾಚಾರ ನಡೆದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ವರದಿಯಾಗಿದೆ. ಅಪ್ರಾಪ್ತೆಯ ದೊಡ್ಡಪ್ಪನ ಮಗ ಸಂತೋಷ್​(30) ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ.  ಲಕಿಯನ್ನ ಆಕೆಯ ತಾಯಿ ವೈದ್ಯರ ಬಳಿ ಕರೆದೊಯ್ದು ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಸದ್ಯ, ಆರೋಪಿ ಸಂತೋಷ್​ನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಭರಣ ಮಾಡಿಕೊಡುವುದಾಗ ನಂಬಿಸಿ ಚಿನ್ನದ ಅಂಗಡಿ ಮಾಲೀಕನಿಗೆ ವಂಚನೆ ಆಭರಣ ಮಾಡಿಕೊಡುವುದಾಗ ನಂಬಿಸಿ ಚಿನ್ನದ ಅಂಗಡಿ ಮಾಲೀಕನನ್ನು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಗೌರ್ ಅದರ್ (37) ಬಂಧಿತ ಆರೋಪಿ. ಬಂಧಿತನಿಂದ 12 ಲಕ್ಷ ರೂಪಾಯಿ ಮೌಲ್ಯದ 345 ಗ್ರಾಂ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ನಗರದ ಗಡಿಯಾರ ಕಂಬದ ಬಳಿ ಇರುವ ಭರತ್ ಜ್ಯೂವೆಲರ್ಸ್​ ಅಂಗಡಿಯ ಮಾಲೀಕ ವಿಜಯಕುಮಾರ್ಗೆ ಆರೋಪಿ ಗೌರ್​  ಚಿನ್ನದ ಆಭರಣ ಮಾಡಿಕೊಡುವುದಾಗಿ ನಂಬಿಸಿ ಅವರಿಂದ ಬಂಗಾರ ಪಡೆದು ನಾಪತ್ತೆ ಆಗಿದ್ದ. ಸದ್ಯ, ಅಂಗಡಿ ಮಾಲೀಕ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಬಸವನಗರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಚಿಂದಿ ಆಯುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಂದಿ ಆಯುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ ನಡೆದಿದೆ. ವಿವಾಹಿತ ಮಹಿಳೆ ಮೇಲೆ ಮೂವರು ಯುವಕರಿಂದ ಅತ್ಯಾಚಾರಕ್ಕೆ ಯತ್ನ ನಡೆದಿದೆ.

ಕಿರಾತಕರು ಮಹಿಳೆಯ ಬಟ್ಟೆಹರಿದು ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅಕ್ಬರ್ ಮಕಾನದಾರ, ಸಲೀಂ ನದಾಫ್​, ಸೊಹೇಲ್ ಹಡಗಲಿ ಎಂಬುವವರು ದುಷ್ಕೃತ್ಯ ಎಸಗಲು ಮುಂದಾಗಿದ್ದರು. ನಸುಕಿನ ಜಾವದಲ್ಲಿ ಚಿಂದಿ ಆಯಲು ಹೊರಟಿದ್ದ ವೇಳೆ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋದ ಆರೋಪಿಗಳು ಮಾನಭಂಗಕ್ಕೆ ಯತ್ನ ನಡೆಸಿದರು ಮಹಿಳೆ ದೂರು ನೀಡಿದ್ದಾರೆ. ಸದ್ಯ, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು‌‌ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಮಾಲೂರು: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಅಂದರ್​

Published On - 10:56 pm, Sun, 21 March 21

ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ