ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ
2016ರ ಜನವರಿ 14ರಂದು ಜ್ಯೂಸ್ ಕೊಡಿಸುವುದಾಗಿ ಡಾಬಾಗೆ ಕರೆದುಕೊಂಡು ಹೋಗಿ ಜ್ಯೂಸ್ ಕುಡಿಸಿ ಗೋಬಿ ತಿನ್ನಿಸಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಮಾಡಿದ್ದರು. ಬಳಿಕ ಈ ಕೃತ್ಯದ ಬಗ್ಗೆ ಎಲ್ಲೂ ಕೂಡ ಬಾಯಿ ಬಿಡದಂತೆ ಅಪ್ರಾಪ್ತೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು.
ಮೈಸೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿದಂತೆ ಮೂವರು ಅತ್ಯಾಚಾರಿಗಳಿಗೆ 20 ವರ್ಷ ಕಾರಾಗೃಹ ಶಿಕ್ಷೆಯಾಗಿದೆ. ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಒಂದನೇ ಶೀಘ್ರಗತಿ ಕೋರ್ಟ್‌ನಿಂದ ತೀರ್ಪು ಪ್ರಕಟವಾಗಿದ್ದು, ನದೀಂ ಪಾಷಾ, ತನ್ವೀರ್ ಪಾಷಾ, ಸದ್ದಾಂ ಹುಸೇನ್ ಸದ್ಯ ಜೈಲು ಪಾಲಾಗಿದ್ದಾರೆ.
2016ರ ಜನವರಿ 14ರಂದು ಜ್ಯೂಸ್ ಕೊಡಿಸುವುದಾಗಿ ಡಾಬಾಗೆ ಕರೆದುಕೊಂಡು ಹೋಗಿ ಜ್ಯೂಸ್ ಕುಡಿಸಿ, ಗೋಬಿ ತಿನ್ನಿಸಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಮಾಡಿದ್ದರು. ಬಳಿಕ ಈ ಕೃತ್ಯದ ಬಗ್ಗೆ ಎಲ್ಲೂ ಕೂಡ ಬಾಯಿ ಬಿಡದಂತೆ ಅಪ್ರಾಪ್ತೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು. ಸದ್ಯ 5 ವರ್ಷದ ನಂತರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಗೆ ನ್ಯಾಯ ಸಿಕ್ಕಿದ್ದು, ದೋಷಿಗಳಿಗೆ ತಲಾ 20 ವರ್ಷ ಜೈಲು ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ.
ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ 2016ರಲ್ಲಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಕೊಲೆ ಬೆದರಿಕೆಯಡಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಪರ ಸರ್ಕಾರಿ ಅಭಿಯೋಜಕರಾದ ಮಂಜುಳಾ ವಾದ ಮಂಡಿಸಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಿದ್ದರು. ಅಂತಿಮವಾಗಿ ಬಾಲಕಿಗೆ ನ್ಯಾಯ ಸಿಕ್ಕಿದ್ದು, ಇನ್ನು ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ:
ಮೈಸೂರಿನಲ್ಲಿ ಗೃಹಿಣಿ ಮೇಲೆ ಅತ್ಯಾಚಾರವೆಸಗಿ ಕೊಲೆ? ಬಾಗಲಕೋಟೆಯಲ್ಲಿ ತಹಶೀಲ್ದಾರ್ ಮೇಲೆ ಸೀಮೆ ಎಣ್ಣೆ ಸುರಿದ ತಂದೆ-ಮಗ