ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು; ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು.

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು; ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಶಿಕ್ಷಣ ಸಚಿವ ಬಿ.ಸಿ ನಾಗೇಶ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 20, 2022 | 9:28 AM

ಗೋಕರ್ಣ: ಅಲ್ಪಸಂಖ್ಯಾತ ಮಕ್ಕಳು ಇವತ್ತಿನ ಶಿಕ್ಷಣ ಪದ್ದತಿ (Education System) ಯಿಂದ ದೂರ ಉಳಿಯಬಾರದು. ಒಂದಷ್ಟುಕಡೆ ಮದರಸಗಳನ್ನು ಶಿಕ್ಷಣ ಪದ್ದತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಗೋಕರ್ಣದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಅವರು ಸಹ ನಮ್ಮ ಎಲ್ಲಾ ಮಕ್ಕಳಂತೆ ಈ ಶಿಕ್ಷಣ ಪದ್ದತಿಗೆ ಬರಬೇಕು. ಅವರು ಸಹಿತ ಮುಂದುವರಿಯಬೇಕು ಎನ್ನುವಂತ ಕಾರಣದಿಂದ ಮುಂದಿನ ದಿನದಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ. ಅಲ್ಪಸಂಖ್ಯಾತ ನಾಯಕರ ಗಮನಕ್ಕೂ ಬಂದಿದೆ. ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟು ಅವಕಾಶ ಮಾಡಿಕೊಟ್ಟಿದ್ದೀವಿ ಆ ಪ್ರಕಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಶಾಲೆಗೆ ಬರಲೇಬೇಕು ಎಂದು ಅವರ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ. 99.9 ಆ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. %ಮಾತ್ರ ಬರುತ್ತಿಲ್ಲ. ಅವರನ್ನು ತರುವಂತ ಪ್ರಯತ್ನ ಮಾಡುತ್ತೇವೆ. ಆದರೆ ಎಳೆದುಕೊಂಡು ಬರುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಧಿಕಾರಿಗಳು:

ಹಾಸನ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ತಹಸಿಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪಾರಾಗಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹರಿಹಳ್ಳಿ ಗ್ರಾಮದಲ್ಲಿ ನೆನ್ನೆ ಸಂಜೆ ಘಟನೆ ನಡೆದಿದೆ. ಅಧಿಕಾರಿಗಳು ಭೂಮಿ ಸರ್ವೆ ಮಾಡೋವೇಳೆ ಕಾಡಾನೆ ಘೀಳಿಟ್ಟಿದೆ. ಕಾಡಾನೆಗಳಿಂದ ತಪ್ಪಿಸಿಕೊಳ್ಳಲು ಓಡಿಬರುವಾಗ ಬಿದ್ದು, ತಹಸಿಲ್ದಾರ್ ಶಿರೀನ್ ತಾಜ್ ಮತ್ತು ತಾಲ್ಲೂಕು ಸರ್ವೆಯರ್ ಕುಮಾರ್​ಗೆ ಗಾಯವಾಗಿದೆ. ಹರಿಹಳ್ಳಿಯ ಕೆಂಚಾಂಬ ದೇಗುಲದ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ವೇಳೆ ಘಟನೆ ಸಂಭವಿದ್ದು, ಸರ್ವೆ ಮಾಡುವಾಗ ಘೀಳಿಟ್ಟು, 5 ಕಾಡಾನೆಗಳು ಬಂದಿದೆ. ಘೀಳಿಡುತ್ತಲೇ ಸ್ಥಳದಿಂದ ಓಡಿಬಂದು ಅಧಿಕಾರಿಗಳು ಪ್ರಾಣ ಉಳಿಸಿಕೊಂಡಿದ್ದಾರೆ. ಡೆಪ್ಯುಟಿ ತಹಸಿಲ್ದಾರ್ ಮಧುಸೂದನ್, ರೆವಿನ್ಯೂ ಇನ್ಸ್‌ಪೆಕ್ಟರ್ ವಸಂತ್​ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಗಳು ಘೀಳಿಡುತ್ತಾ ಮುಂದೆ ಬರುವುದನ್ನು ಕಣ್ಣಾರೆ ಕಂಡು ಅಧಿಕಾರಿಗಳು ಗಾಬರಿಯಾಗಿದ್ದಾರೆ. ರಾಯರಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಧಿಕಾರಿಗಳು ಮನೆಗೆ ವಾಪಸ್ದಾಗಿದ್ದಾರೆ.

ಇದನ್ನೂ ಓದಿ:

ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ನೋಡಿ ವಾಪಸ್​ ಬರುತ್ತಿದ್ದ ಬಿಜೆಪಿ ಸಂಸದನ ಕಾರು ಗುರಿಯಾಗಿಸಿ ಬಾಂಬ್ ದಾಳಿ; ಪಶ್ಚಿಮ ಬಂಗಾಳದಲ್ಲಿ ತಪ್ಪಿದ ದುರಂತ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು