ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ಉದ್ಯಮಿ ಮನೆಯಲ್ಲಿದ್ದ 700 ಗ್ರಾಂ ಚಿನ್ನಾಭರಣ, 60 ಲಕ್ಷ ನಗದು ದರೋಡೆ ಮಾಡಿದ ಖದೀಮರು

| Updated By: ಆಯೇಷಾ ಬಾನು

Updated on: Dec 05, 2023 | 8:29 AM

ಪೊಲೀಸರ ಸೋಗಿನಲ್ಲಿ ಬಂದು ಪೀಣ್ಯ ಪೊಲೀಸ್ ಠಾಣೆಯ ಹೆಚ್​ಎಂಟಿ ಲೇಔಟ್​ನಲ್ಲಿ ಇರುವ ಎಸ್.ಎನ್.ಆರ್ ಪಾಲಿಫಿಲಮ್ಸ್ ಪ್ಯಾಕೇಜಿಂಗ್ ಕಂಪನಿ ಮಾಲೀಕ ಮನೋಹರ್ ಎಂಬುವವರ ಮನೆಗೆ ನುಗ್ಗಿ ಬರೋಬ್ಬರಿ 700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ನಗದು ದರೋಡೆ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ.

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ಉದ್ಯಮಿ ಮನೆಯಲ್ಲಿದ್ದ 700 ಗ್ರಾಂ ಚಿನ್ನಾಭರಣ, 60 ಲಕ್ಷ ನಗದು ದರೋಡೆ ಮಾಡಿದ ಖದೀಮರು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಡಿ.05: ಪೊಲೀಸರ ಸೋಗಿನಲ್ಲಿ ಬಂದ ಖದೀಮರು ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಬರೋಬ್ಬರಿ 700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ನಗದು ದರೋಡೆ (Robbery) ಮಾಡಿ ಎಸ್ಕೇಪ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಪೊಲೀಸ್ ಠಾಣೆಯ ಹೆಚ್​ಎಂಟಿ ಲೇಔಟ್​ನಲ್ಲಿ ಇರುವ ಎಸ್.ಎನ್.ಆರ್ ಪಾಲಿಫಿಲಮ್ಸ್ ಪ್ಯಾಕೇಜಿಂಗ್ ಕಂಪನಿ ಮಾಲೀಕ ಮನೋಹರ್ ಎಂಬುವವರ ಮನೆಗೆ ನುಗ್ಗಿದ ಖದೀಮರು ಕೃತ್ಯ ಎಸಗಿದ್ದಾರೆ. ಘಟನೆ ವೇಳೆ ಉದ್ಯಮಿ ಪುತ್ರ ರೂಪೇಶ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ (Peenya Police Station) ಪ್ರಕರಣ ದಾಖಲಾಗಿದೆ.

ರಾತ್ರಿ 7.30ರ ಸುಮಾರಿಗೆ, ಮನೆಯಲ್ಲಿ ಉದ್ಯಮಿ ಮನೋಹರ್ ಅವರು ಇಲ್ಲದ ಸಮಯದಲ್ಲಿ 5 ರಿಂದ 6 ಮಂದಿ ದುಷ್ಕರ್ಮಿಗಳು ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿ ಕೇವಲ ಮನೋಹರ್ ಪತ್ನಿ ಸುಜಾತ ಹಾಗೂ ಮಗ ರೂಪೇಶ್ ಮಾತ್ರ ಇದ್ದರು. ಉದ್ಯಮಿ ಮನೋಹರ್ ರವರ ಅಣ್ಣ ತಮ್ಮಂದಿರ ನಡುವೆ ಹಲವು ವಿಚಾರಗಳಲ್ಲಿ ಕಲಹವಿದೆ. ಹೀಗಾಗಿ ಅದೇ ವಿಚಾರಕ್ಕೆ ಪೊಲೀಸರು ಬಂದಿರುವುದಾಗಿ ರೂಪೇಶ್ ಅಂದುಕೊಂಡಿದ್ದಾರೆ. ಆದರೆ ಮನೆಯೊಳಗೆ ಬರುತ್ತಿದ್ದಂತೆ ಪೊಲೀಸರ ವೇಶದಲ್ಲಿ ಬಂದಿದ್ದ ಖದೀಮರು ಏಕಾಏಕಿ ಡ್ರಾಗರ್ ಹಾಗೂ ಮಚ್ಚುಗಳನ್ನು ತೋರಿಸಿ ಹೆದರಿಸಿದ್ದಾರೆ. ನಂತರ ರೂಪೇಶ್ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ನಗದು ಲೂಟಿ ಮಾಡಿದ್ದಾರೆ.

700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ನಗದು ದರೋಡೆ ಮಾಡಿ ಕೃತ್ಯದ ಬಳಿಕ ಮನೆಯಲ್ಲಿನ ಸಿಸಿಟಿವಿ ಡಿವಿಆರ್ ಸಮೇತ ಎಸ್ಕೇಪ್ ಆಗಿದ್ದಾರೆ. ಉದ್ಯಮಿ ಪುತ್ರ ರೂಪೇಶ್​ಗೆ ಘಟನೆ ವೇಳೆ ಸಣ್ಣ ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೊಲೆಯಾದ ಮಹದೇವಯ್ಯ ಮನೆಯಲ್ಲಿ ದರೋಡೆ ನಡೆದಿಲ್ಲ: ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ

27 ಮೀನುಗಾರರಿದ್ದ ಬೋಟ್​ ನಾಪತ್ತೆ

ಹವಾಮಾನ ವೈಪರೀತ್ಯದಿಂದ 27 ಮೀನುಗಾರರಿದ್ದ ಬೋಟ್ ನಾಪತ್ತೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಗೋವಾ ಮೂಲದ ಬೋಟ್ ಕಾಣೆಯಾಗಿದೆ. ಕಳೆದ ನವೆಂಬರ್ 29ರಿಂದ ನಾಪತ್ತೆಯಾಗಿದ್ದು, ಗೋವಾದ ಪಣಜಿಯಿಂದ ಮೀನುಗಾರಿಕಾ ಬೋಟ್ ಹೊರಟಿತ್ತು. ಇನ್ನೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಇಂಜಿನ್‌ನಲ್ಲಿ ಸಮಸ್ಯೆಯಾಗಿ ಸಮುದ್ರದಲ್ಲಿ ಬೋಟ್‌ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬೋಟ್‌ ಪತ್ತೆ ಹಚ್ಚಲು ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:03 am, Tue, 5 December 23