ಸಿಪಿಐ ಕಚೇರಿ ಆವರಣದಲ್ಲಿ 6 ಬೈಕ್‌ಗಳಿಗೆ ಬೆಂಕಿ

ಬೆಂಗಳೂರು: ಸಿಪಿಐ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ 6 ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆ ಕೇರಳದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರ ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು. ಅದೇ ವಿಚಾರಕ್ಕೆ ಸಂಬಂಧಿಸಿ ರಾತ್ರಿ ಸಿಪಿಐ ಕಛೇರಿ ವಾಹನಗಳಿಗೆ ಬೆಂಕೆ ಇಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಚೇತನ್ […]

ಸಿಪಿಐ ಕಚೇರಿ ಆವರಣದಲ್ಲಿ 6 ಬೈಕ್‌ಗಳಿಗೆ ಬೆಂಕಿ

Updated on: Dec 25, 2019 | 10:20 AM

ಬೆಂಗಳೂರು: ಸಿಪಿಐ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ 6 ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ವೈಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

ನಿನ್ನೆ ಕೇರಳದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರ ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು. ಅದೇ ವಿಚಾರಕ್ಕೆ ಸಂಬಂಧಿಸಿ ರಾತ್ರಿ ಸಿಪಿಐ ಕಛೇರಿ ವಾಹನಗಳಿಗೆ ಬೆಂಕೆ ಇಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಬೇಟಿ ನೀಡಿದ್ದಾರೆ.

Published On - 10:20 am, Wed, 25 December 19