ಇಂದು 6 ವಿದ್ಯಾರ್ಥಿಗಳಿಗೆ ವಕ್ಕರಿಸಿದ ವೈರಸ್​: MIT ಕ್ಯಾಂಪಸ್​ ಆಯ್ತು ಕೊರೊನಾ ಹಾಟ್‌ಸ್ಪಾಟ್‌

ಜಿಲ್ಲೆಯ ಪ್ರತಿಷ್ಠಿತ ಎಂಐಟಿ ಕ್ಯಾಂಪಸ್‌ನಲ್ಲಿ ಇಂದು 6 ಜನರಿಗೆ ಸೋಂಕು ದೃಢವಾಗಿದೆ. ಹೀಗಾಗಿ, ಇಡೀ ಕಾಲೇಜು ಕೊರೊನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಕಳೆದ ಐದು ದಿನದಲ್ಲಿ ಎಂಐಟಿ ಕ್ಯಾಂಪಸ್​ನಲ್ಲಿ 112 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

ಇಂದು 6 ವಿದ್ಯಾರ್ಥಿಗಳಿಗೆ ವಕ್ಕರಿಸಿದ ವೈರಸ್​: MIT ಕ್ಯಾಂಪಸ್​ ಆಯ್ತು ಕೊರೊನಾ ಹಾಟ್‌ಸ್ಪಾಟ್‌
ಮಣಿಪಾಲ್​ ಇನ್​ಸ್ಟಿಟ್ಯೂಟ್ ಆಫ್​ ಟೆಕ್ನಾಲಜಿ
Follow us
KUSHAL V
|

Updated on: Mar 19, 2021 | 10:39 PM

ಉಡುಪಿ: ಜಿಲ್ಲೆಯ ಪ್ರತಿಷ್ಠಿತ ಎಂಐಟಿ ಕ್ಯಾಂಪಸ್‌ನಲ್ಲಿ ಇಂದು 6 ಜನರಿಗೆ ಸೋಂಕು ದೃಢವಾಗಿದೆ. ಹೀಗಾಗಿ, ಇಡೀ ಕಾಲೇಜು ಕೊರೊನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಕಳೆದ ಐದು ದಿನದಲ್ಲಿ ಎಂಐಟಿ ಕ್ಯಾಂಪಸ್​ನಲ್ಲಿ 112 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ದುಬೈನಿಂದ ಮರಳಿದ್ದ ಮೂರು ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಇದೀಗ, ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 23,971ಕ್ಕೆ ಏರಿದೆ ಎಂದು ಡಿಹೆಚ್‌ಒ ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.

ಕೊವಿಡ್ ನಿರ್ವಹಣೆಗೆ ನೋಡಲ್‌ ಅಧಿಕಾರಿಗಳ ನೇಮಕ ರಾಜ್ಯಕ್ಕೆ ಕೊರೊನಾ 2ನೇ ಅಲೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ನೋಡಲ್‌ ಅಧಿಕಾರಿಗಳನ್ನು ನೇಮಕಮಾಡಿದೆ. ಕೊವಿಡ್ ಆಪ್ತಮಿತ್ರ ಸಹಾಯವಾಣಿಯಲ್ಲಿನ ತಂತ್ರಾಂಶವನ್ನು ರಾಜ್ಯ ದತ್ತಾಂಶ ಕೇಂದ್ರದಲ್ಲಿ ಅಳವಡಿಸಲು ನೋಡಲ್ ಅಧಿಕಾರಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ತುಷಾರ್ ಗಿರಿನಾಥ್​ರನ್ನು ನೇಮಕ ಮಾಡಲಾಗಿದೆ. ಜೊತೆಗೆ, ತಂಡದ ಸದಸ್ಯರಾಗಿ ಮೀನಾಕ್ಷಿ ನೇಗಿಯವರನ್ನು ಸರ್ಕಾರ ನೇಮಿಸಿದೆ. ಮೀನಾಕ್ಷಿ ನೇಗಿ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜೊತೆಗೆ, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಮನ್ವಯಕ್ಕೆ ರಾಜ್ಯ ನೋಡಲ್ ಅಧಿಕಾರಿಯಾಗಿ ಬಿಎಂಟಿಸಿ ಎಂಡಿ ಸಿ.ಶಿಖಾ ಅವರನ್ನು ನೇಮಿಸಲಾಗಿದೆ. ಇತ್ತ, ಕಣ್ಗಾವಲು, ಮೇಲುಸ್ತುವಾರಿ ಮತ್ತು ನಿರ್ವಹಣಾ ಅಧಿಕಾರಿಯಾಗಿ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಡಾ‌.ಹರೀಶ್ ಕುಮಾರ್ ನೇಮಕಗೊಂಡಿದ್ದಾರೆ.

ಆಪ್ತಮಿತ್ರ ತಂಡದ ಸದಸ್ಯರಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಬಿಸ್ವಜಿತ್ ಮಿಶ್ರಾ ನೇಮಕಗೊಂಡಿದ್ದಾರೆ. ILI ಹಾಗೂ SARI ಕೇಸ್‌ಗಳನ್ನು 108 ಌಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆಗೆ ನೋಡಲ್ ಅಧಿಕಾರಿಯಾಗಿ ಬೆಸ್ಕಾಂ ಎಂಡಿ ಎಂ.ಬಿ.ರಾಜೇಶ್ ಅವರನ್ನು ನೇಮಿಸಲಾಗಿದೆ.

ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಮೇಲೆ ಕೊರೊನಾ ಕರಿಛಾಯೆ ಇತ್ತ, ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಈ ಕುರಿತು, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾರಿಂದ ಮಾಹಿತಿ ಸಿಕ್ಕಿದೆ. ನಾಳೆ ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿಂದು ಹೊಸದಾಗಿ 1,587 ಜನರಿಗೆ ಕೊರೊನಾ ದೃಢ ರಾಜ್ಯದಲ್ಲಿಂದು ಹೊಸದಾಗಿ 1,587 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ, ಕೊರೊನಾ ಸೋಂಕಿತರ ಸಂಖ್ಯೆ 9,66,689ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾದಿಂದ 12,425 ಜನರು ಅಸುನೀಗಿದ್ದಾರೆ. ಸೋಂಕಿತರ ಪೈಕಿ 9,42,178 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 12,067 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1,037 ಜನರಿಗೆ ಸೋಂಕು ಪತ್ತೆಯಾಗಿದೆ. ಇದೀಗ, ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,15,447ಕ್ಕೇರಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 6 ಜನರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಕೊರೊನಾಗೆ 4,543 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ನೀನೇನಾ ಲ್ಯಾಪ್‌ಟಾಪ್ ಕಳ್ಳ ಎಂದು ಕೇಳಿದ್ದಕ್ಕೆ.. 2ನೇ ಮಹಡಿಯಿಂದ ಹಾರಿ ಕಾಲು ಮುರಿದುಕೊಂಡ ಆರೋಪಿ!