ವೀಕೆಂಡ್ ಕರ್ಫ್ಯೂಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ; ಬೇಕಾಬಿಟ್ಟಿ ಓಡಾಡುವವರಿಗೆ ಲಾಠಿ ಏಟು

ವೀಕೆಂಡ್ ಕರ್ಫ್ಯೂಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ; ಬೇಕಾಬಿಟ್ಟಿ ಓಡಾಡುವವರಿಗೆ ಲಾಠಿ ಏಟು
ಚಿತ್ರದುರ್ಗದಲ್ಲಿ ವೀಕೆಂಡ್ ಕರ್ಫ್ಯೂ

ಬಳ್ಳಾರಿಯ ಕೌಲ್ ಬಜಾರ್ ಮಟನ್ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ವೀಕೆಂಡ್ ಕರ್ಪ್ಯೂಗೆ ಡೋಂಟ್ ಕೇರ್ ಎಂದ ಜನ, ಸಾಮಾಜಿಕ ಅಂತರ ಕಾಪಾಡದೆ ನಿರ್ಲಕ್ಷ್ಯ ಮೆರೆದಿದ್ದಾರೆ. ಬಾಗಲಕೋಟೆಯಲ್ಲಿ ಕರ್ಪ್ಯೂಗೆ ಉತ್ತಮ ಪ್ರತಿಕ್ರಿಯೆ ದೊರಕಿದೆ.

TV9kannada Web Team

| Edited By: sandhya thejappa

Jan 09, 2022 | 9:37 AM

ಕೊರೊನಾ (Coronavirus) ಮೂರನೇ ಅಲೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ರಾಜ್ಯದ ಹಲವೆಡೆ ಎರಡನೇ ದಿನ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಬೇಕಾಬಿಟ್ಟಿ ಓಡಾಡುವ ಜನರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಹುಬ್ಬಳ್ಳಿಯ ಪ್ರಸಿದ್ಧ ಮೀನು ಮಾರುಕಟ್ಟೆ ಖಾಲಿ ಖಾಲಿಯಾಗಿದೆ. ಪ್ರತಿ ರವಿವಾರ ಗ್ರಾಹಕರಿಂದ ಗಿಜುಗುಡುತ್ತಿದ್ದ ಮಾರುಕಟ್ಟೆ, ಕರ್ಫ್ಯೂ ಹಿನ್ನೆಲೆ ಮಾಂಸ ಪ್ರಿಯರು ಮಾರುಕಟ್ಟೆಯತ್ತ ಆಗಮಿಸದಿದ್ದರಿಂದ ಸ್ತಬ್ಧವಾಗಿದೆ.

ವಿಜಯಪುರದಲ್ಲಿ ಮಾಸ್ಕ್ ಇಲ್ಲದೇ ರಸ್ತೆಗಿಳಿದ ವಾಹನ ಸವಾರರಿಗೆ ದಂಡ ಹಾಕುವ ಮೂಲಕ ಜಿಲ್ಲಾ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ತಪಾಸಣೆ ಮಾಡುತ್ತಿರುವ ಪೊಲೀಸರು, ಮಾಸ್ಕ್ ಇಲ್ಲದೇ ಪ್ರಯಾಣಿಸುವ ಬೈಕ್ ಹಾಗೂ ಇತರೆ ಸವಾರರಿಗೆ 250 ರೂಪಾಯಿ ದಂಡ ಹಾಕುತ್ತಿದ್ದಾರೆ. ದಂಡ ಭರಿಸದಿದ್ದರೆ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಇನ್ನು ಬಳ್ಳಾರಿಯ ಕೌಲ್ ಬಜಾರ್ ಮಟನ್ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ವೀಕೆಂಡ್ ಕರ್ಪ್ಯೂಗೆ ಡೋಂಟ್ ಕೇರ್ ಎಂದ ಜನ, ಸಾಮಾಜಿಕ ಅಂತರ ಕಾಪಾಡದೆ ನಿರ್ಲಕ್ಷ್ಯ ಮೆರೆದಿದ್ದಾರೆ. ಬಾಗಲಕೋಟೆಯಲ್ಲಿ ಕರ್ಪ್ಯೂಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ನಗರದ ಹಳೆ ಮಾರುಕಟ್ಟೆ ಪ್ರದೇಶದಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದೆ. ಸ್ವಯಂ ಪ್ರೇರಿತರಾಗಿ ವ್ಯಾಪಾರಸ್ಥರು ಅಂಗಡಿ ಮುಗ್ಗಟ್ಟುಗಳನ್ನ ಬಂದ್ ಮಾಡಿದ್ದಾರೆ. ಅಲ್ಲಲ್ಲಿ ಬೆರಳೆಣಿಕೆಯಷ್ಟು ಜನರು ಓಡಾಡುತ್ತಿದ್ದಾರೆ. ಇನ್ನು ಧಾರವಾಡದಲ್ಲೂ ಇದೇ ವಾತಾವರಣ ಸೃಷ್ಟಿಯಾಗಿದೆ.

ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂಗೆ ಮಿಶ್ರ ಪ್ರತಿಕ್ರಿಯೆ ದೊರಕಿದೆ. ಮುಂಜಾನೆ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಖರೀದಿಸಲು ಜನರು ಪಟ್ಟಣದತ್ತ ಮುಖ ಮಾಡಿದ್ದರು. ಸದ್ಯ ವಾಹನಗಳ ಓಡಾಟ ವಿರಳವಾಗಿದೆ. ಇನ್ನು ರಾಯಚೂರು ಸ್ತಬ್ಧವಾಗಿದೆ. ಬೇಕಾಬಿಟ್ಟಿ ಓಡಾಡುವವರಿಗೆ ಪೊಲೀಸರು ಲಾಠಿ ತೋರಿಸಿ ಎಚ್ಚರಿಕೆ ನೀಡುತ್ತಿದ್ದಾರೆ. ಮಾತು ಕೇಳದಿದ್ದವರಿಗೆ ಲಾಠಿ ಏಟು ನೀಡುತ್ತಿದ್ದಾರೆ.

ಕೋಟೆನಾಡು ಚಿತ್ರದುರ್ಗ‌ ನಗರದಲ್ಲಿ ಬಹುತೇಕ ಅಂಗಡಿಗಳು ಬಂದ್ ಆಗಿವೆ. ಗಾಂಧಿವೃತ್ತದ ಬಳಿಯ ಅಂಗಡಿಗಳು ಸಂಪೂರ್ಣ ಬಂದ್ ಆಗಿವೆ. ನಗರದ ಮುಖ್ಯ ರಸ್ತೆಗಳು ಬಹುತೇಕ ಖಾಲಿ ಖಾಲಿಯಾಗಿವೆ.

ಇದನ್ನೂ ಓದಿ

Mayank Agarwal: ಐಸಿಸಿ ತಿಂಗಳ ಆಟಗಾರರ ರೇಸ್​ನಲ್ಲಿ ಸ್ಥಾನ ಪಡೆದ ಕನ್ನಡಿಗ ಮಯಾಂಕ್ ಅಗರ್ವಾಲ್

ಬೆಂಗಳೂರು: ನಗರದ ಈ ಪ್ರದೇಶಗಳಲ್ಲಿ ಇಂದಿನಿಂದ ಜ.12ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ಸಂಪೂರ್ಣ ಮಾಹಿತಿ ಇಲ್ಲಿದೆ

Follow us on

Related Stories

Most Read Stories

Click on your DTH Provider to Add TV9 Kannada