AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ ನನಗೆ ಏನಾದ್ರೂ ತೊಂದರೆಯಾದ್ರೆ BSY ಹೊಣೆ -ಪೊಲೀಸ್​ ಭದ್ರತೆ ವಾಪಸ್​ ಪಡೆದಿದ್ದಕ್ಕೆ ಯತ್ನಾಳ್​ ಕಿಡಿಕಿಡಿ

ನಾನು ಪ್ರಖರ ಹಿಂದೂ ಪರ ಮತ್ತು ಜನಪರವಾದ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನ್ನ ಮೇಲೆ ಈ ಹಿಂದೆ ಅನೇಕ ಬಾರಿ ಕೆಲವು ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ನೀಡಿದ್ದವು. ಹಾಗಾಗಿ, ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ಈವರೆಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿತ್ತು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ನನಗೆ ಏನಾದ್ರೂ ತೊಂದರೆಯಾದ್ರೆ BSY ಹೊಣೆ -ಪೊಲೀಸ್​ ಭದ್ರತೆ ವಾಪಸ್​ ಪಡೆದಿದ್ದಕ್ಕೆ ಯತ್ನಾಳ್​ ಕಿಡಿಕಿಡಿ
ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (ಎಡ); ಸಿಎಂ B.S. ಯಡಿಯೂರಪ್ಪ
KUSHAL V
| Updated By: ಸಾಧು ಶ್ರೀನಾಥ್​|

Updated on: Jan 15, 2021 | 5:26 PM

Share

ವಿಜಯಪುರ: ಪೊಲೀಸ್ ಭದ್ರತೆ‌ ಹಿಂಪಡೆದಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು, ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ.

ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಯಾದರೆ, ಅನಾಹುತವಾದರೆ ಆಡಳಿತ ನಡೆಸುತ್ತಿರುವ ತಾವೇ ಹೊಣೆ ಎಂದು ಶಾಸಕ ಯತ್ನಾಳ್​ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡದೆ ಹಿನ್ನೆಲೆಯಲ್ಲಿ ಯತ್ನಾಳ್ ಪತ್ರ ಬರೆದಿದ್ದಾರೆ.

‘ಪ್ರಖರ ಹಿಂದೂವಾದಿ; ಗುಪ್ತಚರ ಸೂಚನೆ ಮೇರೆಗೆ ಪೊಲೀಸ್ ಭದ್ರತೆ ನೀಡಲಾಗಿತ್ತು’ ನಾನು ಪ್ರಖರ ಹಿಂದೂ ಪರ ಮತ್ತು ಜನಪರವಾದ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಹಿನ್ನೆಲೆಯಲ್ಲಿ ನನ್ನ ಮೇಲೆ ಈ ಹಿಂದೆ ಅನೇಕ ಬಾರಿ ಕೆಲವು ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ ಮಾಡುವ ಮುನ್ಸೂಚನೆ ನೀಡಿದ್ದೆವು. ಹಾಗಾಗಿ, ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ಈವರೆಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗಿತ್ತು ಎಂದು ಹೇಳಿದರು.

ಆದರೆ, ನಾನು ಸಿಎಂ ವಿರುದ್ಧ ಹೇಳಿಕೆ ನೀಡಿರುವ ಕಾರಣಕ್ಕೆ ಯಡಿಯೂರಪ್ಪ ಎಂದಿನಂತೆ ದ್ವೇಷದ ರಾಜಕಾರಣ ಮಾಡಿದ್ದಾರೆ. ಪೊಲೀಸ್ ಭದ್ರತೆಯನ್ನು ದಿಢೀರ್​ ಎಂದು ಹಿಂಪಡೆದಿದ್ದಾರೆ. ಇದರ ಹಿಂದಿರುವ ದುರುದ್ದೇಶ ಗೊತ್ತು. ತಮ್ಮ ಹಳೆಯ ಚಾಳಿ, ವಿಕೃತ ಮನಸ್ಸನ್ನು ಇದು ಬಿಂಬಿಸುತ್ತದೆ ಎಂದು ಶಾಸಕ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಆದರೆ, ಇದರಿಂದ ಹಿಂದೂಪರ, ಜನಪರ ಹಾಗೂ ಅನ್ಯಾಯ ವಿರುದ್ಧದ ನನ್ನ ಹೋರಾಟವನ್ನ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರವನ್ನು ನಂಬಿ ನಾನು ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ ಎಂದು ಯತ್ನಾಳ್​ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು