ಶಾಸಕ ಡಾ.ಅಜಯ್ ಸಿಂಗ್, ಸಹೋದರ ವಿಜಯ್ ಸಿಂಗ್ಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ ಚಿಕಿತ್ಸೆ
ಅಜಯ್ಸಿಂಗ್ ಹಾಗೂ ವಿಜಯ್ಸಿಂಗ್ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಕೊರೊನಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಲಬುರಗಿ: ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ಸಿಂಗ್ ಮತ್ತು ಎಮ್ಎಲ್ಸಿ ವಿಜಯ್ ಸಿಂಗ್ಗೆ ಕೊರೊನಾ ಸೋಂಕು ತಗುಲಿರುವುದ ದೃಢಪಟ್ಟಿದೆ. ಜೊತೆಗೆ ಇಬ್ಬರು ಅಡುಗೆ ಸಿಬ್ಬಂದಿಗೆ ಕೊವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಮನೆಯಲ್ಲಿ ಪ್ರತ್ಯೇಕವಾಗಿ ಐಸೋಲೇಷನ್ಗೆ ಒಳಗಾಗಿದ್ದಾರೆ. ಅಜಯ್ಸಿಂಗ್ ಹಾಗೂ ವಿಜಯ್ಸಿಂಗ್ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಕೊರೊನಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅಜಯ್ ಸಿಂಗ್ ಮತ್ತು ವಿಜಯ್ ಸಿಂಗ್ ಬಸವಕಲ್ಯಾಣ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಸದ್ಯ ಈಗ ಬೆಂಗಳೂರಿನ ತಮ್ಮ ನಿವಾಸದಲ್ಲಿ ಐಸೋಲೇಟ್ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೂಡಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
Have tested positive for #COVID19.Request people who were in close contact with me to please get tested for their own safety and of their near ones .
— Vijay Singh (@MLCvijaysingh) April 17, 2021
ಇದನ್ನೂ ಓದಿ: Coronavirus India Update: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣ ಪತ್ತೆ, 1,761 ಸಾವು