AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwath Narayan: ಜೆಡಿಎಸ್, ಬಿಜೆಪಿ ಮೈತ್ರಿ ಆಶಾದಾಯಕ, ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಆಪರೇಷನ್: ಶಾಸಕ ಡಾ ಅಶ್ವತ್ಥ್ ನಾರಾಯಣ

ಶಾಸಕ ಡಾ.ಅಶ್ವತ್ಥ್ ನಾರಾಯಣ, ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಆಶಾದಾಯಕವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾವು ದೊಡ್ಡ ಆಪರೇಷನ್ ಮಾಡುತ್ತೇವೆ. ಕಾಂಗ್ರೆಸ್​ ಪಕ್ಷ ಒಂದು ಸಮುದಾಯದ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

Ashwath Narayan: ಜೆಡಿಎಸ್, ಬಿಜೆಪಿ ಮೈತ್ರಿ ಆಶಾದಾಯಕ, ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಆಪರೇಷನ್: ಶಾಸಕ ಡಾ ಅಶ್ವತ್ಥ್ ನಾರಾಯಣ
ಶಾಸಕ ಡಾ.ಅಶ್ವತ್ಥ್ ನಾರಾಯಣ
ಗಂಗಾಧರ​ ಬ. ಸಾಬೋಜಿ
|

Updated on:Sep 15, 2023 | 9:23 PM

Share

ಬೆಂಗಳೂರು, ಸೆಪ್ಟೆಂಬರ್​ 15: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಆಶಾದಾಯಕವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾವು ದೊಡ್ಡ ಆಪರೇಷನ್ ಮಾಡುತ್ತೇವೆ ಎಂದು ಶಾಸಕ ಡಾ.ಅಶ್ವತ್ಥ್ ನಾರಾಯಣ (dr cn ashwath narayan) ಹೇಳಿದ್ದಾರೆ. ಕಾಂಗ್ರೆಸ್​ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್​ ಅಶೋಕ್​​​ ಹೋಟೆಲ್​ನಲ್ಲಿ ಆಯೋಜಿಸಿರುವ ‘ಕನಸಿನ ಕರುನಾಡು’ (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಪೇ ಸಿಎಂ, 40 ಪರ್ಸೆಂಟ್ ಕಮಿಷನ್ ಆರೋಪ ಪರಿಣಾಮ ಬೀರಿತು. ವಿಪಕ್ಷಗಳ ಆರೋಪವನ್ನು ಗಂಭೀರವಾಗಿ ಪರಿಗಣಿಸದಿದ್ದರಿಂದ ಸೋತೆವು ಎಂದು ಹೇಳಿದ್ದಾರೆ.

ಇದನ್ನೂ ಓದಿ: G. Parameshwar: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಎನ್​ಇಪಿ ವಿಚಾರವಾಗಿ ಮಾತನಾಡಿದ ಅವರು, ದೇಶಾದ್ಯಂತ ಸಂಚರಿಸಿ ತಜ್ಞರ ಜೊತೆ ಚರ್ಚೆ ನಡೆಸಿ ಎನ್​ಇಪಿ ತಂದಿದ್ದೆವು. ಹೊಸದಾಗಿ ಬಂದ ಸರ್ಕಾರ ಯಾವುದನ್ನೂ ಪರಿಶೀಲಿಸದೆ NEP ಹಿಂಪಡೆದಿದೆ. ಆ ಮೂಲಕ ಕಾಂಗ್ರೆಸ್​ ಪಕ್ಷ ಒಂದು ಸಮುದಾಯದ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; TV9 Karnataka Summit 2023; ಕೆಎಸ್​ಆರ್​ಟಿಸಿ ನೌಕರರಿಗೆ ಪಿಂಚಣಿ ನೀಡುವ ವ್ಯವಸ್ಥೆ ಜಾರಿಗೆ ತರುತ್ತೇವೆ: ರಾಮಲಿಂಗಾರೆಡ್ಡಿ

50 ವರ್ಷ ಕಾಲ ತೆಗೆದುಕೊಂಡಿದ್ದರು ಡಿಜಿಟಲ್​ ಇಂಡಿಯಾ ನಿರ್ಮಾಣ ಮಾಡಲು ಆಗುತ್ತಿರಲಿಲ್ಲ. ಆದರೆ 6 ವರ್ಷದಲ್ಲಿ ನಾವು ಅದನ್ನು ಸಾಧನೆ ಮಾಡಿದ್ದೇವೆ ಎಂದು ಯುನೈಟೆಡ್​ ನೇಷನ್​​ ಹೇಳಿದೆ. ಡಿಜಿಟಲ್​ ಇಂಡಿಯಾ ಮೂಲಕ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿರುವುದು ಒಂದು ಸಂಚಲನ, ಸಬಲೀಕರಣದ ಮೂಲಕ ಪ್ರತಿಯೊಬ್ಬರ ಬೆರಳಿನ ತುದಿಗೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Fri, 15 September 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?