AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಸುಗಮ ಸಂಗೀತ ಆಯೋಜಿಸಿದ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್

ತುಮಕೂರು ತಾಲೂಕಿನ ಕೋಡಿಮುದ್ದನಹಳ್ಳಿ ಗ್ರಾಮದ ಬಳಿಯಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತವನ್ನು ಆಯೋಜಿಸಲಾಗಿತ್ತು. ಕೊರೊನಾ ಸೋಂಕಿತರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಶಾಸಕ ಗೌರಿಶಂಕರ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದರು.

ಕೊರೊನಾ ಸೋಂಕಿತರಿಗೆ ಸುಗಮ ಸಂಗೀತ ಆಯೋಜಿಸಿದ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್
ಸೋಂಕಿತರಿಗಾಗಿ ಸಂಗೀತ ಕಾರ್ಯಕ್ರಮ
Follow us
sandhya thejappa
|

Updated on: May 26, 2021 | 8:46 AM

ತುಮಕೂರು: ಮಹಾಮಾರಿ ಕೊರೊನಾ ದೇಶದಾದ್ಯಂತ ಲಗ್ಗೆ ಇಟ್ಟಿದೆ. ಕೊರೊನಾ ಎರಡನೇ ಅಲೆಯಿಂದ ಅದೆಷ್ಟೋ ಬಡಪಾಯಿಗಳ ಜೀವ ಹೋಗಿದೆ. ಪೋಷಕರು, ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗಿ ಮನೆ ಮಂದಿ ಕಂಗಾಲಾಗಿದ್ದಾರೆ. ಅಲ್ಲದೇ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದಾಗ ಸೋಂಕಿತರು ಭಯದಿಂದ ಆತ್ಮಹತ್ಯೆಯಂತಹ ಕೆಟ್ಟ ದಾರಿಯನ್ನು ಹಿಡಿಯುತ್ತಿದ್ದಾರೆ. ಮಾನಸಿಕವಾಗಿ ಕುಗ್ಗುವ ಜೀವಿಗಳಿಗೆ ಧೈರ್ಯ ಹೇಳಬೇಕು. ಅವರ ಮನಸ್ಸು ಉಲ್ಲಾಸವಾಗುವಂತೆ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕರಾದ ಗೌರಿಶಂಕರ್ ಕೊರೊನಾ ಸೋಂಕಿತರಿಗೆ ಸುಗಮ ಸಂಗೀತವನ್ನು ಆಯೋಜಿಸಿದರು.

ತುಮಕೂರು ತಾಲೂಕಿನ ಕೋಡಿಮುದ್ದನಹಳ್ಳಿ ಗ್ರಾಮದ ಬಳಿಯಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತವನ್ನು ಆಯೋಜಿಸಲಾಗಿತ್ತು. ಕೊರೊನಾ ಸೋಂಕಿತರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಶಾಸಕ ಗೌರಿಶಂಕರ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದರು. ಸಂಗೀತ ಕಾರ್ಯಕ್ರಮವನ್ನು ತಡರಾತ್ರಿ ಆಯೋಜನೆ ಮಾಡಿದ್ದರು. 150 ಬೆಡ್​ಗಳಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ನೂರಕ್ಕೂ ಹೆಚ್ಚು ಸೋಂಕಿತರು ಇದ್ದಾರೆ. ಸೋಂಕಿತರಿಗೆ ಪ್ರತಿದಿನ ಉಚಿತವಾಗಿ ವಸತಿ, ಊಟ, ಬಿಸಿ ನೀರು ಹಾಗೂ 32 ಆಕ್ಸಿಜನ್ ಬೆಡ್​ಗಳನ್ನು ಶಾಸಕರು ಒದಗಿಸಿದ್ದಾರೆ. ನರ್ಸ್ ಮಸ್ತ್ ಮಸ್ತ್ ಡ್ಯಾನ್ಸ್ ಕೊಪ್ಪಳ: ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಸಕ್ಕತ್ ಡ್ಯಾನ್ಸ್ ಮಾಡಿದ್ದಾರೆ. ಕೊರೊನಾ ಸೋಂಕಿತ ಅಜ್ಜಿಯ ಕೈ ಹಿಡಿದುಕೊಂಡು ಹೆಜ್ಜೆ ಹಾಕುವ ಮೂಲಕ ಸೋಂಕಿತ ಮಹಿಳೆಗೆ ನರ್ಸ್ ಧೈರ್ಯ ತುಂಬಿದ್ದಾರೆ. ಪಿಪಿಇ ಕಿಟ್ ಹಾಕಿಕೊಂಡು ಜಿಎಸ್ಆರ್ ಖಾಸಗಿ ಆಸ್ಪತ್ರೆಯ ನರ್ಸ್ ಕುಣಿದಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

ನರ್ಸ್ ಡ್ಯಾನ್ಸ್

ಸೋಂಕಿತರಿಗೆ ಯೋಗ ಕೊವಿಡ್ ಕೇರ್ ಸೆಂಟರ್​ನಲ್ಲಿ ಸೋಂಕಿತರಿಗೆ ಯೋಗಾಸನದ ಮೂಲಕ ಧೈರ್ಯ ತುಂಬುವ ಕೆಲಸ ನಡೆಯುತ್ತಿದೆ. ಗಂಗಾವತಿ ತಾಲೂಕಿನ ಶ್ರೀರಾಮನಗರದ ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಮಾರು 30 ಜನ ಸೋಂಕಿತರಿಗೆ ಯೋಗಾಸನ ಮಾಡಿಸುತ್ತಿದ್ದಾರೆ. ಶ್ರೀರಾಮನಗರಿಂದ ಮರಿಸ್ವಾಮಿ ಎಂಬುವರು ಯೋಗಾಸನ ಹೇಳಿಕೊಡುತ್ತಿದ್ದಾರೆ.

ಸೋಂಕಿತರಿಗೆ ಯೋಗಭ್ಯಾಸ

ಇದನ್ನೂ ಓದಿ

ಜೂನ್​ 7ರ ನಂತರವೂ ಲಾಕ್​ಡೌನ್ ಮುಂದುವರಿಕೆ ಬಹುತೇಕ ಖಚಿತ; ವಾಹನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ಸಾಧ್ಯತೆ

ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ

(MLA Gourishankar hosted a music program to entertain the corona Infected at tumkur)

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು