AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಡ್ ಮೀಸಲು ವಿಚಾರ; ಸಂಕಷ್ಟದ ಸಮಯದಲ್ಲಿ ಈ ಕ್ರಮ ಅಮಾನವೀಯ: ಕೃಷ್ಣ ಭೈರೇಗೌಡ

ಕೆಲವರಿಗೆ ಮಾತ್ರ ಈ ರೀತಿ ವೈದ್ಯಕೀಯ ಸೌಲಭ್ಯ ನೀಡೋದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ವೈದ್ಯಕೀಯ ಸೌಲಭ್ಯ ಎಲ್ಲರಿಗೂ ಸಿಗಬೇಕು. ಹಾಗೆಂದು ಆದೇಶಿಸಲು ಪತ್ರದಲ್ಲಿ ಮನವಿ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಡ್ ಮೀಸಲು ವಿಚಾರ; ಸಂಕಷ್ಟದ ಸಮಯದಲ್ಲಿ ಈ ಕ್ರಮ ಅಮಾನವೀಯ: ಕೃಷ್ಣ ಭೈರೇಗೌಡ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Aug 23, 2021 | 12:33 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಸೋಂಕಿತರಿಗೆ ಬೆಡ್ ಮೀಸಲು ವಿಚಾರಕ್ಕೆ ಸಂಬಂಧಿಸಿ ಶಾಸಕ ಕೃಷ್ಣ ಭೈರೇಗೌಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಂಕಷ್ಟದ ಸಮಯದಲ್ಲಿ ಬೆಡ್ ಮೀಸಲಿಟ್ಟಿದ್ದು ಅಮಾನವೀಯ. ಇದು ಕಾನೂನುಬಾಹಿರ ಆದೇಶ ಎಂದು ಯಡಿಯೂರಪ್ಪಗೆ ಪತ್ರದ ಮೂಲಕ ತಿಳಿಸಿದ್ಧಾರೆ.

ಕೆಲವರಿಗೆ ಮಾತ್ರ ಈ ರೀತಿ ವೈದ್ಯಕೀಯ ಸೌಲಭ್ಯ ನೀಡೋದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ವೈದ್ಯಕೀಯ ಸೌಲಭ್ಯ ಎಲ್ಲರಿಗೂ ಸಿಗಬೇಕು. ಹಾಗೆಂದು ಆದೇಶಿಸಲು ಪತ್ರದಲ್ಲಿ ಮನವಿ ಮಾಡಲಾಗಿದೆ. ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ. ದುರಂತದ ಸಮಯದಲ್ಲಿ ಒಂದೇ ಜಿಲ್ಲೆ ಹಾಸಿಗೆ ಮೀಸಲಿಡುವುದು ಅಮಾನವೀಯ ಮಾತ್ರವಲ್ಲ ಇದು ಕಾನೂನು ಬಾಹಿತ ಆದೇಶ ಎಂದು ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಸೋಂಕಿತರಿಗೆ ಬೆಂಗಳೂರಿನ 3 ಆಸ್ಪತ್ರೆಗಳಲ್ಲಿ ಶೇ 15ರಷ್ಟು ಬೆಡ್​ಗಳನ್ನು ಮೀಸಲಿರಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಬೆಂಗಳೂರಿನ ಇತರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ವಿಚಾರ ಬಿಬಿಎಂಪಿಯ ಹೊಣೆ. ಆದರೆ ಆರೋಗ್ಯ ಇಲಾಖೆ ಆದೇಶ ನೀಡಲು ಅವಕಾಶ ಕೊಟ್ಟಿದ್ದೇಕೆ? ಆರೋಗ್ಯ ಸಚಿವ ಸುಧಾಕರ್‌ ಜಿಲ್ಲೆಗೆ ಬೇರೆ ಕಾನೂನು, ಇತರರಿಗೆ ಒಂದು ಕಾನೂನೇ? ಎಂದು ಕೆಲವು ಸಚಿವರು ಪ್ರಶ್ನಿಸಿದ್ದರು.

ಬೆಂಗಳೂರಿನ ಬಳ್ಳಾರಿ ರಸ್ತೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆ, ಸಹಕಾರನಗರದ ಆಸ್ಟರ್, ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗಳಲ್ಲಿ ಚಿಕ್ಕಬಳ್ಳಾಪುರದ ಸರ್ಕಾರಿ ಕೋಟಾದಡಿಯಲ್ಲಿ ಶಿಫಾರಸಾಗುವ ಸೋಂಕಿತರಿಗೆ ಹಾಸಿಗೆ ಕಾಯ್ದಿರಿಸಲು ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಬೆಂಗಳೂರಿನ ಇತರ ಸಚಿವರು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಈ ಕುರಿತು ಪ್ರಶ್ನಿಸಿದ್ದರು. ಸಚಿವ ಡಾ.ಸುಧಾಕರ್ ಸೂಚನೆ ಮೇರೆಗೆ ಬೆಡ್​ಗಳು ಮೀಸಲು ಇರಿಸಲಾಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್

ಈ ಪ್ರದೇಶದಲ್ಲಿ ಇಷ್ಟು ದಿನಗಳಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ದಾಖಲು; ಅಧಿಕಾರಿಗಳಲ್ಲಿ ಆತಂಕ

Published On - 6:14 pm, Sat, 15 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ