ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ

ರಮೇಶ್ ಜಾರಕಿಹೊಳಿಯನ್ನು ಮೂಲೆಗುಂಪು ಮಾಡಿದರೆ ಮುಗೀತು ಎಂದು ಅಂದುಕೊಂಡಿದ್ದರು. ಆದರೆ ಹಾಗೆ ಅಂದುಕೊಂಡಿದ್ದರೆ ಅದರ ನಮ್ಮಲ್ಲಿ ಹತ್ತು ಪಟ್ಟು ಹುಲಿಗಳಿದ್ದೇವೆ, ನಾವು ರೆಡಿ ಇದ್ದೇವೆ: ಶಾಸಕ ರಮೇಶ್ ಜಾರಕಿಹೊಳಿ

ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ
ರಮೇಶ್​ ಜಾರಕಿಹೊಳಿ
Follow us
TV9 Web
| Updated By: guruganesh bhat

Updated on:Jun 25, 2021 | 7:56 PM

ಬೆಳಗಾವಿ: ನನಗಿಂತ 10 ಪಟ್ಟು ಹುಲಿಗಳು ನಮ್ಮ ಕುಟುಂಬದಲ್ಲಿದ್ದಾರೆ. ಶಾಸಕ ಸ್ಥಾನಕ್ಕೆ ನನ್ನ ಸಹೋದರರು ಇದ್ದಾರೆ. ಮಕ್ಕಳಿದ್ದಾರೆ. ಇನ್ನೂ ಬಹಳಷ್ಟು ಹುಲಿಗಳಿದ್ದಾರೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನಿಸಿಕೊಂಡಿದ್ದಾರೆ. ನಾನು ಮುಂಬೈಗೆ ಹೋಗಿದ್ದು, ರಾಜೀನಾಮೆ ಕೊಡುವುದು ನಿಜ. ಆದರೆ ಯಾವಾಗ ರಾಜೀನಾಮೆ ಕೊಡುತ್ತೇನೆಂದು ಹೇಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಮೇಶ್ ಜಾರಕಿಹೊಳಿಯನ್ನು ಮೂಲೆಗುಂಪು ಮಾಡಿದರೆ ಮುಗೀತು ಎಂದು ಅಂದುಕೊಂಡಿದ್ದರು. ಆದರೆ ಹಾಗೆ ಅಂದುಕೊಂಡಿದ್ದರೆ ಅದರ ನಮ್ಮಲ್ಲಿ ಹತ್ತು ಪಟ್ಟು ಹುಲಿಗಳಿದ್ದೇವೆ, ನಾವು ರೆಡಿ ಇದ್ದೇವೆ. ಅಸಮಾಧಾನ ಕೆಲವೊಂದು ಬಹಿರಂಗಪಡಿಸಲು ಬರುವುದಿಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆ, ಕಾನೂನು ತೊಡಕುಗಳಿವೆ. ಕೆಲವು ದಿವಸ ಟೈಮ್ ಕೊಡಿ ಮಾತಾಡುತ್ತೇನೆ ಎಂದು ವಿವರಿಸಿದರು. ದೇವರು ನನಗೆ ಸರ್ಕಾರ ತೆಗೆದು, ಸರ್ಕಾರ ರಚಿಸುವ ಶಕ್ತಿ ನೀಡಿದ್ದಾನೆ. ನಾನು ಸಚಿವ ಸ್ಥಾನಕ್ಕಾಗಿ ರಾಜಕೀಯ ಮಾಡುವಷ್ಟು ಸಣ್ಣವನಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇನ್ನು 8 ರಿಂದ 10 ದಿನ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಂದಾನುವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅನಿಸಿದಲ್ಲಿ ಈ ಬಗ್ಗೆ ಮುಂಬೈನಲ್ಲಿ ತೀರ್ಮಾನಿಸುತ್ತೇನೆ. ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ‌. ಆದರೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ದೇವರು ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನೇ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ಎಂದು ಪ್ರಶ್ನಿಸಿದ ಅವರು, ನನಗೆ ಇನ್ನೂ ಹೀಗೆ ಲಾಬಿ ಮಾಡುವ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಾಘವೇಂದ್ರ ಕೇಂದ್ರ ಸಚಿವ, ವಿಜಯೇಂದ್ರ ಹಾನಗಲ್ ಕ್ಷೇತ್ರದಿಂದ ಸ್ಪರ್ಧೆ? ಯಡಿಯೂರಪ್ಪ ಕುಟುಂಬದಲ್ಲಿ ಹೀಗೊಂದು ಲೆಕ್ಕಾಚಾರ

Rekha Kadiresh: ರೇಖಾ ಕದಿರೇಶ್ ಹಾಡಹಗಲು ಹತ್ಯೆಯಾಗಿದ್ದು ಹೇಗೆ? ಸಂಚಲನ ಮೂಡಿಸಿದೆ ವಿಡಿಯೋ

(MLA Ramesh Jarkiholi say his family has 10 times more powerful tigers than him)

Published On - 7:23 pm, Fri, 25 June 21

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ