Ramesh Jarkiholi: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಬಿಟ್ಟಿದ್ದೇನೆ; ಕಾಂಗ್ರೆಸ್​ಗೂ ವಾಪಸ್ಸಾಗಲ್ಲ: ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಒಂದುವೇಳೆ ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ‌. ಆದರೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

Ramesh Jarkiholi: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಬಿಟ್ಟಿದ್ದೇನೆ; ಕಾಂಗ್ರೆಸ್​ಗೂ ವಾಪಸ್ಸಾಗಲ್ಲ: ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ
ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟ ಸುತ್ತೂರು ಶಾಖಾ ಮಠ: ಬೆಳಗಾವಿಯಿಂದ ಮೈಸೂರಿಗೆ ರಮೇಶ್ ಜಾರಕಿಹೊಳಿ ಪ್ರಯಾಣ
Follow us
TV9 Web
| Updated By: guruganesh bhat

Updated on:Jun 25, 2021 | 2:44 PM

ಮೈಸೂರು: ರಾಜೀನಾಮೆ ನಿರ್ಧಾರದಿಂದ ಶಾಸಕ ರಮೇಶ್ ಜಾರಕಿಹೊಳಿ ಹಿಂದೆ ಸರಿದಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ಅವರು ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇನ್ನು 8 ರಿಂದ 10 ದಿನ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಂದಾನುವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅನಿಸಿದಲ್ಲಿ ಈ ಬಗ್ಗೆ ಮುಂಬೈನಲ್ಲಿ ತೀರ್ಮಾನಿಸುತ್ತೇನೆ. ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ‌. ಆದರೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ದೇವರು ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನೇ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ಎಂದು ಪ್ರಶ್ನಿಸಿದ ಅವರು, ನನಗೆ ಇನ್ನೂ ಹೀಗೆ ಲಾಬಿ ಮಾಡುವ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ನಮ್ಮ ನಾಯಕ; ಸಚಿವ ಸ್ಥಾನ ಸಿಗದಿದ್ರೆ ರಾಜಕೀಯ ನಿವೃತ್ತಿ ಕೈಗೊಳ್ತೀನಿ‌: ಆಪ್ತರ ಬಳಿ ರಮೇಶ್ ಜಾರಕಿಹೊಳಿ‌ ಅಳಲು

ರಾಜಕೀಯ ಶಕ್ತಿ ಕೇಂದ್ರವಾದ ಸುತ್ತೂರು ಮಠ: ಬೆಳಗಾವಿಯಿಂದ ಮೈಸೂರಿಗೆ ರಮೇಶ್ ಜಾರಕಿಹೊಳಿ ಪ್ರಯಾಣ

(MLA Ramesh Jarkiholi says he quite the decision to resign as a legislator and will not return to Congress)

Published On - 2:25 pm, Fri, 25 June 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು