ದಾವಣಗೆರೆ: ಕೊರೊನಾ ಸಮಯದಲ್ಲಿ ಜನ ಸೇವೆಯಲ್ಲಿ ಭಾಗಿಯಾಗಿ ಜನರ ಮನ ಗೆಲ್ಲುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೊವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ಯೋಗ ಮಾಡುವವರಿಗೆ ರೋಗವಿಲ್ಲ ಎಂಬ ಸಂದೇಶ ಸಾರಿದ್ದಾರೆ. ಹಾಗೂ ಪ್ರತಿಯೊಬ್ಬರೂ ಯೋಗಾಸನ ಮೈ ಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಇನ್ನು ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ತಯಾರಿಸಿದ್ದಾರೆ. ಅರಬಗಟ್ಟೆಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ಲಟಿಸಿ, ಚಪಾತಿ ಬೇಯಿಸಿದ್ದಾರೆ. ಹಾಗೂ ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟದ ಆಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ: ಸಿ ಪಿ ಯೋಗೇಶ್ವರ್ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ