AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮನ್ನು ಸಭೆಗೆ ಕರೆದಿರಲಿಲ್ಲ, ಆದರೂ ತಾವು ಬಂದಿದ್ದು ಸಂತೋಷ: ಸಾ.ರಾ. ಮಹೇಶ್​-DC ಸಿಂಧೂರಿ ಟಾಕ್​ ಫೈಟ್​!

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್​ ನಡುವಿನ ಮುಸುಕಿನ ಗುದ್ದಾಟ ಇಂದು ಮುಖಾಮುಖಿಯಾದ ಮೊದಲ ಸಭೆಯಲ್ಲೇ ಬಹಿರಂಗವಾಗಿದೆ. ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ನಿಮ್ಮನ್ನು ಸಭೆಗೆ ಕರೆದಿರಲಿಲ್ಲ, ಆದರೂ ತಾವು ಬಂದಿದ್ದು ಸಂತೋಷ: ಸಾ.ರಾ. ಮಹೇಶ್​-DC ಸಿಂಧೂರಿ ಟಾಕ್​ ಫೈಟ್​!
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (ಎಡ); ಶಾಸಕ ಸಾ.ರಾ.ಮಹೇಶ್ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on: Jan 12, 2021 | 4:46 PM

Share

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್​ ನಡುವಿನ ಮುಸುಕಿನ ಗುದ್ದಾಟ ಇಂದು ಮುಖಾಮುಖಿಯಾದ ಮೊದಲ ಸಭೆಯಲ್ಲೇ ಬಹಿರಂಗವಾಗಿದೆ. ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ವೇದಿಕೆಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲಾಗಿರಲಿಲ್ಲ. ಹಾಗಾಗಿ, ಸಿಂಧೂರಿ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಕೊಳ್ಳಬೇಕಾಯಿತು.

ಈ ವೇಳೆ, ಸಭೆಯಲ್ಲಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದ ಡಿಸಿ ಸಿಂಧೂರಿಗೆ ನಿಮ್ಮ ಮಾತು ಕೇಳುತ್ತಿಲ್ಲ, ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ಈ ನಡುವೆ, ನಾನು ಮಾಸ್ಕ್ ತೆಗೆಯಲ್ಲ, ಮಾಸ್ಕ್ ತೆಗೆದು ಮಾತಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಡಿಸಿ ರೋಹಿಣಿ ಸಿಂಧೂರಿ ಶಾಸಕರಿಗೆ ಪರೋಕ್ಷವಾಗಿ ಟಾಂಗ್​ ಕೊಟ್ಟರು.

ಜೊತೆಗೆ, ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹಾಗಾಗಿ ನೀವು ಸಮ್ಮತಿಸಿದರೆ ಸಭೆಯಿಂದ ತೆರಳುವೆ ಎಂದು ಸಹ ಹೇಳಿದರು.

ನಿಮ್ಮನ್ನು ಸಭೆಗೆ ಕರೆದಿರಲಿಲ್ಲ. ಆದರೂ, ತಾವು ಬಂದಿದ್ದು ಸಂತೋಷ. ಜಿಲ್ಲಾಧಿಕಾರಿಗೆ ಸಭೆಯ ಬಗ್ಗೆ ಮಾಹಿತಿ ಕೊಡುವುದು ಕರ್ತವ್ಯ. ಹಾಗಾಗಿ ನಾವು ಮಾಹಿತಿ ಕೊಟ್ಟಿದ್ದೇವೆ ಎಂದು ಸಾ.ರಾ. ಮಹೇಶ್ ಹೇಳಿದರು. ಮೈಸೂರಿಗೆ ಬಂದ ಕಾಗದ ಪತ್ರಗಳ ಸಮಿತಿಯನ್ನೂ ಸ್ವಾಗತಿಸಿಲ್ಲ. ಆದರೂ ಪರವಾಗಿಲ್ಲ ಸಮಯ ಇದ್ದರೆ ಇರಿ ಎಂದು ಸಹ ಶಾಸಕರು ಹೇಳಿದರು.

ಜೊತೆಗೆ, ನಿಮಗೆ ಬೇರೆ ಕೆಲಸ ಇದ್ದರೆ ಹೋಗಿ ಎಂದು ಹೇಳಿದರು. ಸಾ.ರಾ.ಮಹೇಶ್ ಹೀಗೆ ಹೇಳುತ್ತಿದ್ದಂತೆ ಸಭೆಯಿಂದ ತೆರಳಿದ ಡಿಸಿ ಸಿಂಧೂರಿ ಅವರು ತಮ್ಮ ಕಾರು ಹತ್ತಿ ಬೇಸರದಿಂದ ತೆರಳಿದರು.

ಅನ್ನದಾತನೊಂದಿಗೆ ನಾವು: ಉಳುಮೆಯ ನೆಲದಿಂದ ಕಟ್ಟುವ ನಾಡಿನವರೆಗೂ…

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು