ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ; ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’

Bengaluru Bed allotment Scam: ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ; ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’
ಶಾಸಕ ಸತೀಶ್ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ
Follow us
guruganesh bhat
|

Updated on:May 06, 2021 | 3:29 PM

ಬೆಂಗಳೂರು: ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ಹಗರಣದ ಆರೋಪ ತಮಗೇ ತಿರುಗುಬಾಣವಾಗುತ್ತಿರುವ ಕುರಿತು ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಏಜೆನ್ಸಿಗಳನ್ನು ನೇಮಿಸಿದ್ದ ಓರ್ವ ಐಎಎಸ್ ಅಧಿಕಾರಿ ನನ್ನ ಬಗ್ಗೆ ಸುದ್ದಿ ಹಬ್ಬಿಸುತ್ತಿದ್ದಾರೆ. ಈಗ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ತನ್ನ ಹೆಸರು ಬಯಲಾಗುತ್ತದೆ ಎಂದು ನನ್ನ ಹೆಸರನ್ನು ಈ ಪ್ರಕರಣದಲ್ಲಿ ತರುವ ಕುತಂತ್ರ ಮಾಡುತ್ತಿದ್ದಾರೆ. ತಾವು ಸಿಕ್ಕಿಬೀಳಬಾರದು ಎಂದು ನನ್ನ ಹೆಸರು ಹೇಳಿದ್ದಾರೆ. ಈ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಆಪಾದಿಸಿದರು.

ಬೆಡ್ ಬ್ಲಾಕಿಂಗ್ ಹಗರಣದ ಎಲ್ಲಾ ದಾಖಲೆಗಳನ್ನು ಕಮೀಷನರ್ ಹಾಗೂ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ನಾನು ಬೆಡ್ ಬ್ಲಾಕಿಂಗ್ ಮಾಡಿರುವುದಕ್ಕೆ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಿ ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಶಾಸಕ ಸತೀಶ್ ರೆಡ್ಡಿ, ಬೆಡ್ ಬ್ಲಾಕಿಂಗ್ ದಂದೆಯನ್ನು ಬೆಳಕಿಗೆ ತಂದಾಗ ಕೆಪಿಸಿಸಿ ಅಧ್ಯಕ್ಷರು ಸೇರಿ ಹಲವು ನಾಯಕರು ಅಭಿನಂದನೆ ಮಾಡಿದ್ದರು. ನಾವು ಆಗಲೂ ಯಾರ ಬಗ್ಗೆಯೂ ಸಹ ಮಾತನಾಡಿಲ್ಲ. ಈಗಲೂ ಅಷ್ಟೇ ಯಾರ ಬಗ್ಗೆಯೂ ನಾವು ಮಾತನಾಡುವುದಿಲ್ಲ. ವಿರೋಧ ಪಕ್ಷದ ಕೆಲಸ ನಾವೇ ಮಾಡ್ತಾ ಇದ್ದೀವಿ ಅಂತ ಅವರಿಗೆ ಅನಿಸಿದೆ. ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕಾಗಿ ಮೇ 8ರಿಂದ 16ರವರೆಗೆ ಕೇರಳದಲ್ಲಿ ಸಂಪೂರ್ಣ ಲಾಕ್​ಡೌನ್

Published On - 3:26 pm, Thu, 6 May 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ