ಸರ್ಕಾರ ನೀಡಿದ ಆಕ್ಸಿಜನ್​ ಸಿಲಿಂಡರ್​ನಿಂದ​ ಪುಕ್ಕಟೆ ಪ್ರಚಾರ ಪಡೆದ್ರಾ ಸುಮಲತಾ? ಜೆಡಿಎಸ್​ ಶಾಸಕರು ತೆರೆದಿಟ್ಟ ಹೊಸ ವಿಚಾರ

Sumalatha Ambareesh: ಎಂ.ಪಿ. ಫಂಡ್ ಇಲ್ಲದ ಕಾರಣ ಸ್ವಂತ ಹಣದಲ್ಲಿ ಆಕ್ಸಿಜನ್ ಕೊಡುವುದಾಗಿ ಸುಮಲತಾ ಅಂಬರೀಶ್​ ಹೇಳಿದ್ದರು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಹಾಗೂ ಸುರೇಶ್​ ಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ನೀಡಿದ ಆಕ್ಸಿಜನ್​ ಸಿಲಿಂಡರ್​ನಿಂದ​ ಪುಕ್ಕಟೆ ಪ್ರಚಾರ ಪಡೆದ್ರಾ ಸುಮಲತಾ? ಜೆಡಿಎಸ್​ ಶಾಸಕರು ತೆರೆದಿಟ್ಟ ಹೊಸ ವಿಚಾರ
ಸುಮಲತಾ ಅಂಬರೀಷ್
Edited By:

Updated on: May 08, 2021 | 9:01 AM

ಮಂಡ್ಯ: ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಸಂಸದೆ ಸುಮಲತಾ ಅಂಬರೀಷ್​ ಸ್ವಂತ ಹಣ ಖರ್ಚು ಮಾಡಿ 2 ಸಾವಿರ ಲೀಟರ್​ ಸಾಮರ್ಥ್ಯದ 20 ಜಂಬೋ ಸಿಲಿಂಡರ್​ಗಳನ್ನು ಕೊಡಿಸಿದ್ದಾರೆ ಎಂದು ಸುದ್ದಿಯಾದ ಬೆನ್ನಲ್ಲೇ ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಹಾಗೂ ಸುರೇಶ್​ ಗೌಡ ಹೊಸ ವಿಚಾರ ಬಯಲಿಗೆ ಎಳೆದಿದ್ದಾರೆ. ಸರ್ಕಾರದಿಂದ ಮಂಜೂರಾದ ಆಕ್ಸಿಜನ್​ ಸಿಲಿಂಡರ್​ಗಳನ್ನೇ ಖರೀದಿಸಿ, ಅದನ್ನು ತಾವೇ ಸ್ವಂತ ಹಣದಲ್ಲಿ ನೀಡಿರುವುದಾಗಿ ಸುಮಲತಾ ಪ್ರಚಾರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಜಿ.ಪಂ ಸಭೆಯಲ್ಲಿ ಮಂಡ್ಯ ಜಿಲ್ಲೆಯ ಎಸಿ ಶಿವಾನಂದಮೂರ್ತಿ ಅವರನ್ನು ಜೆಡಿಎಸ್​ ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಮಲತಾ ಅವರ ಕ್ರಮವನ್ನು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ನಾಗಮಂಗಲ ಶಾಸಕ ಸುರೇಶ್ ಗೌಡ ವಿರೋಧಿಸಿದ್ದಾರೆ. ಸರ್ಕಾರಿ ಕೋಟದಲ್ಲಿ ಮಂಜೂರಾಗಿದ್ದ ಸಿಲಿಂಡರ್ ಖರೀದಿಗೆ ಅವಕಾಶ ನೀಡಿದ್ದೀರಿ. ಅದಕ್ಕಾಗಿ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಲ್ಲವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಗಿದೆ.

ಸಭೆಯ ನಡುವೆ ಸಂಸದೆ ಸುಮಲತಾ ಹೊರ ನಡೆದಿದ್ದಾರೆ. ಸಭೆಯಿಂದ ಹೋಗಿದ್ದು ಜಿಲ್ಲೆಯ ಜನರಿಗೆ ಮೋಸ ಮಾಡಿದಂತೆ ಎಂದು ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. ಇವರು 50 ದಿನಗಳಿಂದ ಮಂಡ್ಯಗೆ ಬಂದಿದ್ದಾರಾ? ಸರ್ಕಾರ ಹಂಚಿಕೆ ಮಾಡಿದ್ದ ಸಿಲಿಂಡರ್ ಖರೀದಿಸಿ ಪ್ರಚಾರ ಪಡೆದರೆ ಮಂಡ್ಯ ಜಿಲ್ಲೆಯ ಜನರಿಗೆ ಮಾಡ್ತಿರೋ ದ್ರೋಹ ಅನ್ನಿಸಲ್ವಾ ಎಂದು ಸುಮಲತಾ ವಿರುದ್ಧ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ದಿನವೊಂದಕ್ಕೆ 3,000 ಲೀಟರ್ ಆಕ್ಸಿಜನ್ ಕೊರತೆ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ವರ್ಷ ಎಂ.ಪಿ. ಫಂಡ್ ಇಲ್ಲ. ಸರ್ಕಾರಿ ಅನುದಾನ ಮೂಲಗಳು ಬರುವವರೆಗೂ ಕಾಯುವಂತ ಸ್ಥಿತಿಯಲ್ಲಿ ನಾವಿಲ್ಲ. ಅಲ್ಲಿಯವರೆಗೂ ಪ್ರತಿದಿನ 2,000 ಲೀಟರ್ ಆಕ್ಸಿಜನ್ ಸ್ವಂತ ಖರ್ಚಿನಲ್ಲಿ ತಲುಪಿಸುವ ವ್ಯವಸ್ಥೆ ಮಾಡಿದ್ದೇನೆ. ಇದು ನನ್ನ ಕರ್ತವ್ಯ ಎಂದು ಸುಮಲತಾ ಹೇಳಿದ್ದರು.

ಇದನ್ನೂ ಓದಿ:

ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸ ಮಾಡಬಾರದು: ಕಾಂಗ್ರೆಸ್ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಮನವಿ

Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us