ಕೊರಗಜ್ಜಗೆ ಕೋಲಸೇವೆ ಸಲ್ಲಿಸಿದ ವಿನಯ್ ಕುಲಕರ್ಣಿ: 48 ದಿನದೊಳಗೆ ಧಾರವಾಡ ಕ್ಷೇತ್ರ ಪ್ರವೇಶ, ದೈವ ನುಡಿ

ಯೋಗೇಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಪ್ರಕರಣದಿಂದ ಹೊರಗೆ ಬರಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಇದೀಗ ತಮ್ಮ ಕುಟುಂಬದೊಂದಿಗೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ.

ಕೊರಗಜ್ಜಗೆ ಕೋಲಸೇವೆ ಸಲ್ಲಿಸಿದ ವಿನಯ್ ಕುಲಕರ್ಣಿ: 48 ದಿನದೊಳಗೆ ಧಾರವಾಡ ಕ್ಷೇತ್ರ ಪ್ರವೇಶ, ದೈವ ನುಡಿ
ಮಂಗಳೂರಿನ ಕೊರಗಜ್ಜಗೆ ಹರಕೆ ಕೋಲ ಸೇವೆ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jul 27, 2024 | 10:12 PM

ಮಂಗಳೂರು, ಜುಲೈ 27: ಬಿಜೆಪಿ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶ ಗೌಡ (yogesh gowda) ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Congress MLA Vinay Kulkarni) ಸದ್ಯ ಕೊರಗಜ್ಜ ದೈವದ ಮೊರೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ವಿನಯ್ ಕುಲಕರ್ಣಿಗೆ ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಂಕಷ್ಟ ಪರಿಹಾರಕ್ಕಾಗಿ ದೈವದ ಮೊರೆ ಹೋಗಿದ್ದಾರೆ.

ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಹರಕೆ ಕೋಲ ಸೇವೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಮತ್ತು ಕುಟುಂಬಸ್ಥರು ಭಾಗಿ ಆಗಿದ್ದಾರೆ. ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಗೌರವ ಇಲ್ಲದ ಕಡೆ ನಾವು ಏಕೆ ಇರಬೇಕು: ಪರೋಕ್ಷವಾಗಿ ರಾಜೀನಾಮೆ ಎಂದ್ರಾ ವಿನಯ್ ಕುಲಕರ್ಣಿ?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ವಿನಯ್ ಕುಲಕರ್ಣಿ ಗೆದ್ದಿದ್ದಾರೆ. ಯೋಗೇಶ ಗೌಡ ಹತ್ಯೆ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಕೋರ್ಟ್ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಇದೆ.

48 ದಿನದೊಳಗೆ ಧಾರವಾಡ ಕ್ಷೇತ್ರ ಪ್ರವೇಶ ನಿರ್ಬಂಧ ತೆರವು

ಕೋಲದಲ್ಲಿ 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಅಭಯ ನೀಡಿದೆ. 48 ದಿನಗಳ ಒಳಗೆ ಧಾರವಾಡ ಕ್ಷೇತ್ರ ಪ್ರವೇಶ ನಿರ್ಬಂಧ ತೆರವಿನ ಬಗ್ಗೆ ದೈವ ನುಡಿದಿದೆ. ಇನ್ನು ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿ ಇರುವಂತೆ ದೈವ ಸೂಚನೆ ನೀಡಿದೆ.

ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎದುರಾಗಿದ್ದು, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶಾಸಕ ವಿನಯ ಕುಲಕರ್ಣಿಗೆ ಅಭಯ ನೀಡಲಾಗಿದೆ.

ವಿನಯ್ ಕುಲಕರ್ಣಿ ಹೇಳಿದ್ದಿಷ್ಟು 

ಕೋಲಸೇವೆ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದು, ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಕಾಂಗ್ರೆಸ್ ನಾಯಕರು, ನನ್ನ ಸ್ನೇಹಿತರು ಹೇಳಿದ್ದರು. ಈಗ ಸಮಯ ಕೂಡಿ ಬಂದ ಹಿನ್ನೆಲೆ ಕುಟುಂಬ ಸಮೇತರಾಗಿ ಬಂದು ಕೋಲ ಸೇವೆಯಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಪ್ರಕರಣದಿಂದ ಹೊರಗೆ ಬರಲು ವಿನಯ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಆದರೂ ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ

ಇನ್ನು ತಮ್ಮ ಮೇಲಿನ ಪ್ರಕರಣವನ್ನು ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ತಮ್ಮ ಮೇಲಿನ ಕೇಸ್ ರದ್ದುಗೊಳಿಡುವಂತೆ ವಿಜಯ್ ಕುಲಕರ್ಣಿ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 08 ರಂದು ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:15 pm, Sat, 27 July 24

ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು