ಸಿಎಂ ಬೆನ್ನಿಗೆ ನಿಂತ ಶಾಸಕರು: ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯಗೆ ಬೆಂಬಲ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 22, 2024 | 7:23 PM

ಮುಡಾ ಕೇಸ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸಮರ ನಡೆಸ್ತಿದ್ದಾರೆ. ಈ ಮಧ್ಯೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ಮಾಡಲಾಗಿದೆ. ಸಭೆಯಲ್ಲಿ ಸರ್ವಾನುಮತದಿಂದ ಶಾಸಕರು ಮುಖ್ಯಮಂತ್ರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಡೆ ಸರ್ವಾನುಮತದಿಂದ ಖಂಡಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಸಿಎಂ ಬೆನ್ನಿಗೆ ನಿಂತ ಶಾಸಕರು: ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯಗೆ ಬೆಂಬಲ
ಸಿಎಂ ಬೆನ್ನಿಗೆ ನಿಂತ ಶಾಸಕರು: ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯಗೆ ಬೆಂಬಲ
Follow us on

ಬೆಂಗಳೂರು, ಆಗಸ್ಟ್​​ 22: ಮುಡಾ ಕೇಸ್​ನಲ್ಲಿ (muda case) ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಲರ್ಟ್ ಆಗಿದ್ದಾರೆ. ಕಾನೂನು ಸಮರದ ಜೊತೆಗೆ ಶಾಸಕರ ಜೊತೆಗೂ ನಿರಂತರ ಚರ್ಚೆ ಮಾಡುತ್ತಿದ್ದಾರೆ. ಸಿಎಂ, ಡಿಸಿಎಂ ಇಂದು ಶಾಸಕರ ಜೊತೆ ಸಭೆ ನಡೆಸಿದರು. ಶಾಸಕಾಂಗ ಸಭೆಯಲ್ಲಿ ರಾಜ್ಯಪಾಲರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಹೈಕಮಾಂಡ್ ಜೊತೆ ಚರ್ಚಿಸಿ ದೆಹಲಿಯಲ್ಲಿ ಹೋರಾಟ ನಡೆಸೋಣ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳಿ ಎಂದು ರಾಷ್ಟ್ರಪತಿಗಳನ್ನ ಭೇಟಿ ಮಾಡಿ ಒತ್ತಾಯಿಸೋಣ ಎಂದು ಶಾಸಕರು ಹೇಳಿದ್ದಾರೆ.

ರಾಜ್ಯಪಾಲರ ನಡೆ ಸರ್ವಾನುಮತದಿಂದ ಖಂಡಿಸಿದ್ದೇವೆ: ಡಿ.ಕೆ.ಶಿವಕುಮಾರ್

ಶಾಸಕಾಂಗ ಪಕ್ಷದ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಸಭೆಯಲ್ಲಿ ಸರ್ವಾನುಮತದಿಂದ ಶಾಸಕರು ಸಿಎಂಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶಾಸಕ ಆರ್.ವಿ.ದೇಶಪಾಂಡೆ ಸೂಚಿಸಿ ತನ್ವೀರ್ ಸೇಠ್​ ಅನುಮೋದಿಸಿದ್ದಾರೆ. ರಾಜ್ಯಪಾಲರು ಸರಿಯಾದ ತನಿಖೆ ನಡೆಸದೆ ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದಾರೆ. ರಾಜ್ಯಪಾಲರ ನಡೆ ಸರ್ವಾನುಮತದಿಂದ ಖಂಡಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹತ್ವದ ನಿರ್ಣಯ ಕೈಗೊಂಡ ಸಚಿವ ಸಂಪುಟ ಸಭೆ: ಬಿಜೆಪಿ, ಜೆಡಿಎಸ್​ ನಾಯಕರಿಗೆ ಸಂಕಷ್ಟ

ಸರ್ಕಾರವನ್ನು ಅಭದ್ರಗೊಳಿಸಲು ತೊಂದರೆ ಕೊಡುತ್ತಿದ್ದಾರೆ. ಆದರೆ ನಮ್ಮ ಸರ್ಕಾರಕ್ಕೆ ಯಾರು ಕೂಡ ಏನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲ ಗಟ್ಟಿಯಾಗಿ ಸಿಎಂ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದ್ದೇವೆ. ಹೈಕಮಾಂಡ್​ ನಾಯಕರ ಭೇಟಿಗೆ ಶುಕ್ರವಾರ ದೆಹಲಿಗೆ ತೆರಳುತ್ತಿದ್ದೇವೆ. ಹೈಕಮಾಂಡ್ ನಾಯಕರು ನಮ್ಮನ್ನು ಕರೆದಿಲ್ಲ, ನಾವೇ ಹೋಗುತ್ತಿದ್ದೇವೆ. ಎಲ್ಲಾ ವಿಚಾರಗಳನ್ನು ನಾವು ಹೈಕಮಾಂಡ್ ಮುಂದೆ ತಿಳಿಸುತ್ತೇವೆ. ರಾಜ್ಯ ಸರ್ಕಾರ ಮತ್ತು ಸಿಎಂ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾವು ಕಾನೂನಿನ ಚೌಕಟ್ಟಿನಲ್ಲೇ ಹೋರಾಟ ಮಾಡುತ್ತಿದ್ದೇವೆ. ಈಗಲೂ ರಾಜ್ಯಪಾಲರು ತಮ್ಮ ನಿರ್ಣಯವನ್ನು ವಾಪಸ್ ಪಡೆದರೆ ಸಂವಿಧಾನಕ್ಕೆ ಗೌರವ ಕೊಟ್ಟಂತೆ ಆಗುತ್ತೆ. ರಾಜ್ಯಪಾಲರಿಗೆ ಮುಜುಗರ ಬೇಡ ಅಂತಾ ಕಾನೂನಿನ ಚೌಕಟ್ಟಿನಲ್ಲೇ ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷ ಬಿಜೆಪಿಗೆ ಅಸ್ತ್ರವಾದ ಸರ್ಕಾರದ ಮತ್ತೊಂದು ಆದೇಶ; ಏನದು ಹೊಸ ಅಸ್ತ್ರ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ವಿನಯ್ ಕುಲಕರ್ಣಿ, ಆರ್.ವಿ.ದೇಶಪಾಂಡೆ, ಎನ್ಎ ಹ್ಯಾರಿಸ್, ಕೆಜೆ ಜಾರ್ಜ್, ಪ್ರದೀಪ ಈಶ್ವರ್, ಜಿಟಿ ಪಾಟೀಲ್, ಬಿ.ಆರ್.ಪಾಟೀಲ್​, ಪಿಎಂ ನರೇಂದ್ರ ಸ್ವಾಮಿ, ಜಮೀರ್ ಅಹಮದ್ ಖಾನ್ ಭಾಗಿ ಆಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.