AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ನ ನೈಋತ್ಯ ಶಿಕ್ಷಕರ ಚುನಾವಣೆ: ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭೋಜೇಗೌಡಗೆ ಜಯ

ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕಕರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡಗೆ ಜಯವಾಗಿದೆ. 5,267 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಜುನಾಥ್ ವಿರುದ್ಧ ಜಯಗಳಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು, ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿದ್ದಾರೆ. ಹಾಗಾಗಿ ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ ಎಂದಿದ್ದಾರೆ.

ಪರಿಷತ್​ನ ನೈಋತ್ಯ ಶಿಕ್ಷಕರ ಚುನಾವಣೆ: ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭೋಜೇಗೌಡಗೆ ಜಯ
ಪರಿಷತ್​ನ ನೈಋತ್ಯ ಶಿಕ್ಷಕರ ಚುನಾವಣೆ: ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಭೋಜೇಗೌಡಗೆ ಜಯ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 06, 2024 | 7:58 PM

Share

ಮೈಸೂರು, ಜೂನ್​ 06: ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಇದೀಗ ಹೊರಬಿದ್ದಿದ್ದು, ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜೆಡಿಎಸ್ (JDS) ಅಭ್ಯರ್ಥಿ ಎಸ್.ಎಲ್.ಭೋಜೇಗೌಡಗೆ (Bhoje Gowda) ಜಯವಾಗಿದೆ. ಭೋಜೇಗೌಡ ಪರ 9,829 ಮತ ಚಲಾವಣೆ ಮಾಡಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಜುನಾಥ್ ಪರ 4,562 ಮತ ಚಲಾಯಿಸಲಾಗಿದೆ. ಒಟ್ಟು 5,267 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 19,479 ಮತ ಚಲಾವಣೆಯಾಗಿದ್ದವು. ಆ ಪೈಕಿ 18,658 ಮತಗಳು ಸಿಂಧು, 821 ಮತಗಳು ಅಸಿಂಧುವಾಗಿತ್ತು.

ಜಯಗಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಎಸ್​ಎಲ್​ ಭೋಜೇಗೌಡ, ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿದ್ದಾರೆ. ಹಾಗಾಗಿ ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ. ನಮ್ಮ ಶಿಕ್ಷಕರು ಬಹಳ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ಬಹಳ ವಿಶ್ವಾಸವಿಟ್ಟು ಮೊದಲ ಪ್ರಾಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಹಾಗಾಗಿ ನನ್ನ ಗೆಲುವನ್ನು ಅವರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ, ಶಿಕ್ಷಕರ ಕ್ಷೇತ್ರದ ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ:- ಜಿಟಿ ದೇವೇಗೌಡ

ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿತ್ತು ಅದರಂತೆಯೇ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಒಂದಾಗಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ. ಹೊಂದಾಣಿಕೆ ಕೆಲಸ ಮಾಡಿದೆ. ಕಳೆದ ಬಾರಿಯೇ ನಾನು ಜೆಡಿಎಸ್​ನಿಂದ ಏಕಾಂಗಿಯಾಗಿ ನಿಂತು ಗೆದ್ದಿದ್ದೆ. ಈ ಬಾರಿ ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದ ಬಲ ಇನ್ನಷ್ಟು ಹೆಚ್ಚಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಫಲಪ್ರದವಾಗಿದೆ. ಬಿಜೆಪಿ ಜೆಡಿಎಸ್​​ನ ಎಲ್ಲಾ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ​ದಕ್ಷಿಣ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್​ ಧೂಳಿಪಟ, ಇತಿಹಾಸ ನಿರ್ಮಿಸಿದ ಮೈತ್ರಿ ಅಭ್ಯರ್ಥಿ

ಪರಿಷತ್​ನ ನೈಋತ್ಯ ಶಿಕ್ಷಕರ ಕ್ಷೇತ್ರದ 2ನೇ ಸುತ್ತಿನ ಮತ ಎಣಿಕೆಯಲ್ಲೂ ಎಸ್​ಎಲ್​​ ಭೋಜೇಗೌಡ ಮುನ್ನಡೆ ಕಾಯ್ದುಕೊಂಡಿದ್ದರು. 6,645 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಜುನಾಥ್​ಗೆ 3,576 ಮತಗಳು ಬಂದಿದ್ದವು. 14 ಸಾವಿರ ಮತಗಳ ಎಣಿಕೆ ಕಾರ್ಯ ಮುಕ್ತಾಯವಾಗಿತ್ತು. ಪರಿಷತ್​ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 560 ಮತಗಳು ಅಸಿಂಧು ಆಗದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.