ಪರಿಷತ್ ಚುನಾವಣೆ: ಬಂಡಾಯವಾಗಿ ಸ್ಪರ್ಧಿಸಿರುವ ಐವರು ಕಾಂಗ್ರೆಸ್​ನಿಂದ ಉಚ್ಚಾಟನೆ

ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಇದೇ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಕಾಂಗ್ರಸ್​ನ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿರುವ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದೆ, ಹಾಗಾದ್ರೆ, ಉಚ್ಛಾಟನೆಗೊಂಡ ಐವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಯಾರ್ಯಾರು? ಎನ್ನುವ ವಿವರ ಇಲ್ಲಿದೆ.

ಪರಿಷತ್ ಚುನಾವಣೆ: ಬಂಡಾಯವಾಗಿ ಸ್ಪರ್ಧಿಸಿರುವ ಐವರು ಕಾಂಗ್ರೆಸ್​ನಿಂದ ಉಚ್ಚಾಟನೆ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: May 23, 2024 | 6:36 PM

ಬೆಂಗಳೂರು, (ಮೇ 23): ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಈಗ ವಿಧಾನ ಪರಿಷತ್ ಚುನಾವಣೆ ಫೈಟ್ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ತಂತ್ರಗಾರಿಕೆ ನಡೆಯುತ್ತಿದೆ. ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ. ಇದಕ್ಕೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ, ಆದರೂ ಕೈ ಟಿಕೆಟ್ ತಪ್ಪಿರುವುದರಿಂದ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರಿಂದ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದೆ. ​ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

ಉಚ್ಚಾಟಿನೆಗೊಂಡವರು

  • ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಎಸ್.ಪಿ.ದಿನೇಶ್
  • ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ- ಫರ್ಡಿನಾಂಡ್ ಲಾರೆನ್ಸ್
  • ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಅಭ್ಯರ್ಥಿ -ಬಿ.ಆರ್‌.ನಂಜೇಶ್‌
  • ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ಶಿವರಾಜ್

ಇದನ್ನೂ ಓದಿ: Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

  • ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  • ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  • ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  • ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  • ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  • ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಇನ್ನು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 2 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ.

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
  • ನಾಮಪತ್ರ ಪರಿಶೀಲನೆ: ಮೇ 17, 2024
  • ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
  • ಮತದಾನ: ಜೂನ್‌ 03, 2024
  • ಫಲಿತಾಂಶ: ಜೂನ್‌ 06, 2024

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ