ಬೆಂಗಳೂರು, (ಮೇ 23): ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಈಗ ವಿಧಾನ ಪರಿಷತ್ ಚುನಾವಣೆ ಫೈಟ್ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ತಂತ್ರಗಾರಿಕೆ ನಡೆಯುತ್ತಿದೆ. ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ. ಇದಕ್ಕೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ, ಆದರೂ ಕೈ ಟಿಕೆಟ್ ತಪ್ಪಿರುವುದರಿಂದ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರಿಂದ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: Karnataka MLC Election 2024: ಕರ್ನಾಟಕ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ
ಇನ್ನು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ವಿಧಾನ ಪರಿಷತ್ನ 6 ಕ್ಷೇತ್ರಗಳ ಪೈಕಿ 2 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.