ಥೂ ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು, ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತೀಯಾ -ಹೆಚ್.ವಿಶ್ವನಾಥ್ ಕಿಡಿಕಿಡಿ
ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು. ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ. ನೀನು ಯಾವ್ ಸೀಮೆ ಕಮಿಷನರಯ್ಯ? ಎಂದು ಪೊಲೀಸ್ ಕಮಿಷನರ್ ವಿರುದ್ಧ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಕ್ರೋಶ ಹೊರ ಹಾಕಿದ್ದಾರೆ.
ಮೈಸೂರು: ಜಿಲ್ಲೆಯ ರಿಂಗ್ ರಸ್ತೆಯಲ್ಲಿ ನಡೆದ ಬೈಕ್ ಸವಾರನ ಸಾವಿನ ಪ್ರಕರಣ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದೆ. ಒಂದು ಕಡೆ ಘಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದವರನ್ನು ಅರೆಸ್ಟ್ ಮಾಡಲಾಗಿದೆ. ಮತ್ತೊಂದು ಕಡೆ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಆದ್ರೆ ಪೊಲೀಸ್ ಆಯುಕ್ತರ ನಡೆಗೆ ಹೆಚ್ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು. ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತೀಯಾ. ನೀನು ಯಾವ್ ಸೀಮೆ ಕಮಿಷನರಯ್ಯ? ಎಂದು ಪೊಲೀಸ್ ಕಮಿಷನರ್ ವಿರುದ್ಧ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ, ಸಿಟಿ ರೌಂಡ್ಸ್ ಹಾಕಲ್ಲ. ಎಷ್ಟು ವರ್ಷ ಆಯ್ತು ಬಂದು ? ಎಷ್ಟು ಜನ ಡಿಸಿಪಿ ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ ? ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ.
ಸದನದಲ್ಲಿ ಈ ಬಗ್ಗೆ ಚರ್ಚೆಯೂ ಆಗಿಲ್ಲ, ನಿನ್ನೆಯೆಲ್ಲ ಸಿಡಿ ಇಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ. ಮೈಸೂರಿನಲ್ಲಿ ನಡೆದ ಈ ಘಟನೆ ಖಂಡನೀಯ. ಇದು ಪೊಲೀಸರ ಅಚಾತುರ್ಯದಿಂದ ನಡೆದ ಘಟನೆ. ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಎಂಬ ಕಾನೂನು ಎಲ್ಲಿದೆ. ಫೋಟೋ, ಸಿಸಿ ಕ್ಯಾಮೆರಾ ಇಲ್ವ ಇವರಿಗೆ ಮಾನ ಮರ್ಯಾದೆ ಇಲ್ಲ? ಗೂಂಡಾಗಿರಿ ಮಾಡ್ತಿದ್ದಾರೆ. ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರಣಗಳನ್ನ ಕೊಟ್ಟಿದ್ದೀವಿ.
ಈ ವರ್ತನೆಯನ್ನ ಯಾರೂ ಕ್ಷಮಿಸಲ್ಲ. ಪೊಲೀಸರು ಸುದ್ದಿ ಕೊಟ್ಟರೆ ಅಲ್ವಾ ಗೃಹ ಸಚಿವರು ಮಾತನಾಡುವುದು. ತಪಾಸಣೆ ಮಾಡಿ ಆದರೆ ಕ್ಯಾಮೆರಾ ಇರೋದು ಯಾಕೆ. ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಮಂತ್ರಿ ಜೊತೆ ಮಾತನಾಡುತ್ತೇನೆ ಎಂದು ಮೈಸೂರು ಪೊಲೀಸರ ವಿರುದ್ಧ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.
ಇದನ್ನೂ ಓದಿ: ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು ಪ್ರಕರಣ; ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ಅರೆಸ್ಟ್
Published On - 2:13 pm, Thu, 25 March 21