AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ, ದೂರು ದಾಖಲಿಸಿದ ಗ್ರಾಮಸ್ಥರು

ದೇವನಹಳ್ಳಿ: ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ. ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಗ್ರಾಮಸ್ಥರ ಮೇಲೆ ದೌರ್ಜನ್ಯ ನಡೆದಿದ್ದು, ತೇಜಸ್ವಿನಿ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ಸರ್ಕಾರದಿಂದ ಅನುಮೋದನೆ ಸಿಗದಿದ್ರೂ ಶಾಲೆ […]

MLC ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ, ದೂರು ದಾಖಲಿಸಿದ ಗ್ರಾಮಸ್ಥರು
ಸಾಧು ಶ್ರೀನಾಥ್​
|

Updated on:Feb 07, 2020 | 11:55 AM

Share

ದೇವನಹಳ್ಳಿ: ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ.

ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಗ್ರಾಮಸ್ಥರ ಮೇಲೆ ದೌರ್ಜನ್ಯ ನಡೆದಿದ್ದು, ತೇಜಸ್ವಿನಿ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

ಸರ್ಕಾರದಿಂದ ಅನುಮೋದನೆ ಸಿಗದಿದ್ರೂ ಶಾಲೆ ಕಟ್ಟಡ ನಿರ್ಮಾಣಕ್ಕೆ ತೇಜಸ್ವಿನಿ ಗೌಡ ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಗೆ ದಾರಿ ಬಿಡದೆ ಕಾಮಗಾರಿ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಕೇಳಲು ಹೋದ ಗ್ರಾಮಸ್ಥರ ಮೇಲೆ ತೇಜಸ್ವಿನಿ ಗೌಡ ದರ್ಪ ತೋರಿಸಿದ್ದಾರೆ. ನಿಂದಿಸಿ ಹಲ್ಲೆ ನಡೆಸಿದ್ದಾರೆ. ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರು MLC ತೇಜಸ್ವಿನಿ ಗೌಡ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ವಿರುದ್ಧದ ಹಲ್ಲೆ ಆರೋಪ ಜೆಡಿಎಸ್ ಕುಮ್ಮಕ್ಕು: ಗ್ರಾಮಸ್ಥರು ಮಾಡಿರುವ ಆರೋಪಕ್ಕೆ ಎಂಎಲ್​ಸಿ ತೇಜಸ್ವಿನಿ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡರಾಯಪನಹಳ್ಳಿಯಲ್ಲಿ ಮಾತನಾಡಿದ ಅವರು ನಾವು ಗ್ರಾಮಕ್ಕೆ ಅನುಕೂಲವಾಗಲಿ ಅಂತಾ ಎಲ್ಲರ ಸಹಕಾರದಿಂದ ಶಾಲಾ ಕಟ್ಟಡ ಕಟ್ಟುತ್ತಿದ್ದೇವೆ. ಆದ್ರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಮನೆಗೆ ರಸ್ತೆಗೆ ಅನುಕೂಲವಾಗಲೆಂದು ಇದೀಗ ಜೆಡಿಎಸ್ ನವರು ರಾಜಕೀಯ ಮಾಡ್ತಿದ್ದಾರೆ ಎಂದು ತೇಜಸ್ವಿನಿ ಗೌಡ ಆರೋಪಿಸಿದ್ದಾರೆ.

ಸರ್ಕಾರಿ ಜಾಗದಲ್ಲಿ ಅತಿ ಕ್ರಮಣ ಮಾಡಿರೋ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಶಾಲೆ ಕಟ್ಟಡ ಕಟ್ಟಲು ಬಿಡದೇ ರಾಜಕೀಯ ಮಾಡ್ತಿದ್ದಾರೆ. ನಾನು ಯಾರ ಮೇಲೆಯೂ ದೌರ್ಜನ್ಯ ಮಾಡಿಲ್ಲ, ಕಾನೂನಾತ್ಮಕವಾಗಿ ಕೆಲಸವನ್ನು ಮಾಡುತ್ತಿದ್ದೇನೆ. ಶಾಲೆಗೆ ಹತ್ತು ರೂಂಗಳಾಗಬೇಕಿದ್ದು, ಆರು ರೂಂಗಳನ್ನು ಮಾತ್ರ ಇದೀಗ ಮಾಡಲಾಗುತ್ತಿದೆ. ಕಾಮಗಾರಿ ನಡೆಯುವ ವೇಳೆ ನನ್ನ ಮೇಲೆಯೆ ಹಲ್ಲೆಗೆ ಮುಂದಾಗಿದ್ದಾರೆ.

ಇದೆಲ್ಲಾ ಜೆಡಿಎಸ್ ಪಕ್ಷದ ಮುಖಂಡರ ಕಿತಾಪತಿ. ಹತ್ತಿರದಲ್ಲೇ ಗ್ರಾಮ ಪಂಚಾಯ್ತಿ ಚುನಾವಣೆಗಳು ಬರುತ್ತಿದ್ದು, ನಮ್ಮೂರಿನಲ್ಲಿ ಕೆಲಸ ಮಾಡುತ್ತಿದ್ರೆ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಗ್ರಾಮಸ್ಥರ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡುತ್ತಿದ್ದ ದೃಶ್ಯಗಳ ಬಗ್ಗೆ ತೇಜಸ್ವಿನಿ ಸ್ಪಷ್ಟನೆ ನೀಡಿದ್ದಾರೆ.

Published On - 7:53 am, Fri, 7 February 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ