AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಕನ್ನಡಿಗ ಉದ್ಯೋಗಿಗಳ ಸಂಖ್ಯೆ ನೋಟಿಸ್ ಬೋರ್ಡ್​​ನಲ್ಲಿ ಹಾಕಬೇಕು ಬೆಂಗಳೂರಿನ ಎಂಎನ್​ಸಿ ಕಂಪನಿಗಳು!

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ, ವಿಧಾನ ಪರಿಷತ್​​ನಲ್ಲಿ ಅನುಮೋದನೆ ಪಡೆದಿರುವ ಕರ್ನಾಟಕ ಸರ್ಕಾರ ಎಂಎನ್​ಸಿಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ದೊರೆಯುವುದನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿಯೂ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಾರ್ಯಾಚರಿಸುವ ಎಲ್ಲ ಎಂಎನ್​​ಸಿಗಳು ಕನ್ನಡಿಗ ಉದ್ಯೋಗಿಗಳ ಸಂಖ್ಯೆಯನ್ನು ನೋಟಿಸ್ ಬೋರ್ಡ್​​​ನಲ್ಲಿ ಪ್ರದರ್ಶಿಸುವಂತೆ ಸೂಚಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಇನ್ನು ಕನ್ನಡಿಗ ಉದ್ಯೋಗಿಗಳ ಸಂಖ್ಯೆ ನೋಟಿಸ್ ಬೋರ್ಡ್​​ನಲ್ಲಿ ಹಾಕಬೇಕು ಬೆಂಗಳೂರಿನ ಎಂಎನ್​ಸಿ ಕಂಪನಿಗಳು!
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ
Ganapathi Sharma
|

Updated on: Feb 21, 2024 | 7:19 AM

Share

ಬೆಂಗಳೂರು, ಫೆಬ್ರವರಿ 21: ರಾಜ್ಯದಾದ್ಯಂತ ಮತ್ತು ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು (MNCs) ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು ಕಚೇರಿಯ ಆವರಣದ ನೋಟಿಸ್ ಬೋರ್ಡ್​​ನಲ್ಲಿ ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಮಂಗಳವಾರ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕದ ಮೇಲೆ ನಡೆದ ಚರ್ಚೆಯ ಸಂದರ್ಭ ಅವರು ಮಾತನಾಡಿದರು. ಉದ್ಯಮಗಳ ನೋಟಿಸ್ ಬೋರ್ಡ್​ಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ಮಾಡಿರುವ ಮಸೂದೆ ಇದಾಗಿದೆ.

ಕನ್ನಡ ಭಾಷೆಯ ರಕ್ಷಣೆ ಮತ್ತು ಪ್ರಾಧಾನ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಸದನಕ್ಕೆ ಸಚಿವರು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಬಹುರಾಷ್ಟ್ರೀಯ ಕಂಪನಿಗಳು ಸಾಕಷ್ಟು ಸಂಖ್ಯೆಯ ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಖಚಿತಪಡಿಸಿಕೊಳ್ಳಲು, ವಿವರಗಳನ್ನು ಪ್ರದರ್ಶಿಸಲು ಸರ್ಕಾರವು ಸೂಚಿಸಲಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಂಗದಲ್ಲಿ ಕನ್ನಡವನ್ನು ಬಲಪಡಿಸಲು ಸರಕಾರ ಮುಂದಾಗಿದೆ. ನಾವು ಕನ್ನಡವನ್ನು ರಕ್ಷಿಸಲು, ಉತ್ತೇಜಿಸಲು ಮತ್ತು ಬಲಪಡಿಸಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನ್ಯಾಯಾಂಗದಲ್ಲಿಯೂ ಸಹ ಕನ್ನಡದಲ್ಲಿ ತೀರ್ಪುಗಳನ್ನು ನೀಡಲು ಮತ್ತು ಕನ್ನಡದಲ್ಲಿ ವಾದಿಸಲು ವಕೀಲರನ್ನು ಪ್ರೇರೇಪಿಸಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಕನ್ನಡ ವಿರೋಧಿ ಚಟುವಟಿಕೆ ಬಗ್ಗೆ ದೂರು ನೀಡಲು ಆ್ಯಪ್

ಇದೇ ವೇಳೆ, ಕನ್ನಡ ಭಾಷೆ ಸಂಬಂಧ ಸರ್ಕಾರ ಆ್ಯಪ್ ಅಭಿವೃದ್ಧಿಪಡಿಸಿದ್ದು, ಕನ್ನಡಕ್ಕೆ ಅವಮಾನವಾಗುವಂಥ ಘಟನೆಗಳು ಸಂಭವಿಸಿದರೆ ನಾಗರಿಕರು ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಮತ್ತು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಕನ್ನಡ ಅಭಿವೃದ್ಧಿಯ ರಾಜ್ಯ ಮಟ್ಟದ ಸಮಿತಿಗೆ ಸೇರಿಸಲು ಕೆಲವು ಸದಸ್ಯರು ನೀಡಿದ ಸಲಹೆಗಳನ್ನು ಪರಿಶೀಲಿಸಲಾಗುವುದು ಎಂದು ತಂಗಡಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಕಳೆದ ವಾರ ಅನುಮೋದನೆ ಪಡೆಯಲಾಗಿತ್ತು. ಈ ಸಂಬಂಧ ಸರ್ಕಾರ ಈ ಹಿಂದೆ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿ, ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸುವುದೂ ಸೇರಿದಂತೆ ಕನ್ನಡದ ರಕ್ಷಣೆಗೆ ಸಂಬಂಧಿಸಿದ ಅನೇಕ ಅಂಶಗಳು ವಿಧೇಯಕದಲ್ಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್