ಬೀದರ್​ನ ಬಡ ಕೂಲಿ ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಬೀದರ್ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MNREGA) ಅತ್ಯಂತ ಯಶಸ್ವಿಯಾಗಿದೆ. ಶೇಕಡಾ 54ರಷ್ಟು ಮಹಿಳೆಯರು ಈ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಸಮಾನ ವೇತನ ನೀತಿಯಿಂದಾಗಿ ಮಹಿಳಾ ಭಾಗವಹಿಸುವಿಕೆ ಹೆಚ್ಚಾಗಿದೆ. ಈ ಯೋಜನೆಯು ಗ್ರಾಮೀಣ ಬಡತನ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಮತ್ತು ಕುಟುಂಬಗಳಿಗೆ ಆರ್ಥಿಕ ಸ್ಥಿರತೆಯನ್ನು ಒದಗಿಸುತ್ತಿದೆ.

ಬೀದರ್​ನ ಬಡ ಕೂಲಿ ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ
ಬೀದರ್​ನ ಬಡ ಕೂಲಿ ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ
Follow us
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 29, 2024 | 9:28 PM

ಬೀದರ್, ನವೆಂಬರ್​ 29: ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ (MNREGA) ಗ್ರಾಮೀಣ ಜನರ ಹಸಿವು ನೀಗಿಸುವ ಮಹತ್ವಾಕಾಂಕ್ಷಿ ಯೋಜನೆ. ಈ ಯೋಜನೆಯಡಿ ಮೂಲಕ ಪ್ರತಿ ವರ್ಷ ಲಕ್ಷಾಂತರ ಜನರು ಉದ್ಯೋಗ ಪಡೆದುಕೊಂಡು ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಸ್ತ್ರೀ-ಪುರುಷ ಅನ್ನೋ ಭೇದ ಭಾವವಿಲ್ಲದೆ ಎಲ್ಲರಿಗೂ ಸಮಾನ ವೇತನ ನೀಡುತ್ತಿರುವುದರಿಂದ ಅತೀ ಹೆಚ್ಚ ಮಹಿಳೆಯರು ಉದ್ಯೋಗ ಖಾತ್ರಿ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.

ವಿಶ್ವದಲ್ಲೇ ಅತಿ ದೊಡ್ಡ ಉದ್ಯೋಗ ಯೋಜನೆ ಎಂಬ ಹೆಗ್ಗಳಿಕೆಗೆ ಭಾರತ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಪಾತ್ರವಾಗಿದೆ. ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ಬೀದರ್ ಜಿಲ್ಲೆಯಲ್ಲಿ ಮಹತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅತೀ ಹೆಚ್ಚು ಮಹೀಳೆಯರು ಉದ್ಯೋಗ ಮಾಡುತ್ತಿದ್ದಾರೆ. ಹೆಚ್ಚು ಹೆಚ್ಚು ಮಹಿಳೆಯರು ಉದ್ಯೋಗ ಖಾತ್ರ ಯೋಜನೆಯಡಿ ಕೆಲಸಕ್ಕೆ ಹಾಜರಾಗಲು ಪ್ರಮುಖವಾದ ಕಾರಣವೂ ಇದೆ.

ಇದನ್ನೂ ಓದಿ: ಬೀದರ್: ಮದಾರ ಸಾಹೆಬ್ ಉರೂಸ್​ಗೆ ಹಿಂದೂಗಳದ್ದೇ ಸಾರಥ್ಯ! ಕೋಮು ಸೌಹಾರ್ದತೆಗೆ ಸಾಕ್ಷಿ ಕೋಹಿನೂರು ಜಾತ್ರೆ

ಖಾಸಗಿ ಕಾಮಗಾರಿ ಸೇರಿದಂತೆ ಇತರೆಡೆ ಮಹಿಳೆಯರು ದುಡಿದರೆ ನೀಡುವ ವೇತನದಲ್ಲಿ ತಾರತಮ್ಯವಿದೆ. ಪುರುಷರಿಗೆ ಕೊಡುವಷ್ಟು ಕೂಲಿ ಹಣವನ್ನು ಮಹಿಳಾ ಕಾರ್ಮಿಕರಿಗೆ ನೀಡುವುದಿಲ್ಲ. ಆದರೆ, ನರೇಗಾದಡಿ ಸಮಾನ ಕೂಲಿ ನಿಯಮವಿದೆ. ಹೀಗಾಗಿ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಹೆಚ್ಚಾಗಿದೆ. ನರೇಗಾ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಗ್ರಾಮಾಭಿವೃದ್ಧಿ ಹಾಗೂ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದು ಯೋಜನೆ ಉದ್ದೇಶ. ಹೀಗಾಗಿ ಪುರುಷ, ಮಹಿಳೆ ಎಂಬ ತಾರತಮ್ಯ ಇಲ್ಲದೆ ಒಂದು ಕುಟುಂಬಕ್ಕೆ 100 ದಿನ ಉದ್ಯೋಗ ನೀಡುವ ಯೋಜನೆಯಡಿ ಒಂದು ದಿನದ ಕೂಲಿ ಹಣವಾಗಿ 349 ರೂಪಾಯಿ ಗಳನ್ನು ನೀಡಲಾಗುತ್ತಿದೆ.

ಇಂಥ ಸಮಾನ ವೇತನ ನೀತಿ ಇದ್ದುದ್ದರಿಂದ ಯೋಜನೆಯ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಬೇರೆ ಜಿಲ್ಲೆಯಲ್ಲಿ ಕಡಿಮೆ ಇದ್ದರು ಗಡೀ ಜಿಲ್ಲೆ ಬೀದರ್​ನಲ್ಲಿ ಮಾತ್ರ ಶೇಕಡಾ 54 ರಷ್ಟು ಮಹೀಳೆರು, 46 ರಷ್ಟು ಪುರುಷರು ಕೆಲಸ ಮಾಡುತ್ತಿದ್ದಾರೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಕೂಲಿಕಾರರಿಗೆ, ಕೆಲಸ ಒದಗಿಸುವುದರ ಜತೆಗೆ ಅರ್ಹ ಫಲಾನುಭವಿಗಳಿಗೆ ಜೀವನಾಧಾರಕ್ಕೆ ನೆರವಾಗುವ ವೈಯಕ್ತಿಕ ಆಸ್ತಿಗಳನ್ನು ಸೃಜನೆ ಮಾಡುವ ಮೂಲಕ ಅವರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮ ಪಡಿಸುತ್ತಿದೆ. ಇದರಿಂದಲೇ ಲಕ್ಷಾಂತರ ಬಡವರು ಈ ಯೋಜನೆ ಲಾಭ ಪಡೆದುಕೊಂಡು ಬದುಕಿನ ಬಂಡಿ ಸಾಗಿಸುತ್ತಿದ್ದೆವೆಂದು ಕೂಲಿ ಕಾರ್ಮಿಕರು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಣೆ

ದೇಶದ ಎಲ್ಲಾ ರಾಜ್ಯಗಳ ಎಲ್ಲ ವಯಸ್ಕ ಜನರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. ಗ್ರಾಮೀಣ ಭಾಗದ ಜನರ ಜೀವನಕ್ಕೆ ಭದ್ರತೆ ಹೆಚ್ಚಿಸಲು ವರ್ಷದಲ್ಲಿ 100 ದಿನಗಳ ಕೆಲಸ ಒದಗಿಸುವ ಗುರಿಯನ್ನು ನರೇಗಾ ಯೋಜನೆ ಹೊಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ನರೇಗಾ) ದಡಿ ಒಂದು ಕುಟುಂಬದ ವಯಸ್ಕ ಸದಸ್ಯರು ಸ್ವಯಂ ಪ್ರೇರಿತರಾಗಿ ನೋಂದಣಿಯಾದರೆ ಅಂತಹವರಿಗೆ ಆರ್ಥಿಕ ವರ್ಷವೊಂದಕ್ಕೆ ನೂರು ದಿನಗಳ ಉದ್ಯೋಗ ನೀಡಲಾಗುತ್ತದೆ. ಈ ಯೋಜನೆಯು ಬಡ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

ಈ ಯೋಜನೆಯನ್ನು 2005ರ ಸೆಪ್ಟೆಂಬರ್ 5ರಂದು ಜಾರಿಗೆ ತರಲಾಯಿತು. ಆರಂಭದಲ್ಲಿ ಈ ಯೋಜನೆಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (NREGA) ಎಂದು ಹೆಸರಿಸಲಾಯಿತು. ಆದರೆ 2009ರ ಅಕ್ಟೋಬರ್ 2ರಂದು ಈ ಯೋಜನೆಯ ಹೆಸರನ್ನು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MNREGA) ಎಂದು ಬದಲಾಯಿಸಲಾಯಿತು. ಇದು ಬೇರೆಲ್ಲ ಯೋಜನೆಗಳಿಗಿಂತ ಭಿನ್ನವಾಗಿದ್ದು, ಉದ್ಯೋಗ ಖಾತರಿ ಒದಗಿಸುವುದರಿಂದ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಕೂಲಿ ಕಾರ್ಮಿಕರು ಫುಲ್​ ಖುಷ್

ವರ್ಷದಲ್ಲಿ ಒಂದುಕುಟುಂಬಕ್ಕೆ ನೂರು ದಿನ ಕೂಲಿ ಕೊಡುವ ಉದ್ದೇಶದಿಂದ ಜೊತೆಗೆ ಗ್ರಾಮೀಣ ಭಾಗದ ಜನರು ಕೆಲಸವಿಲ್ಲದೆ ಹಾಗೇ ಇರಬಾರದು ಹಸಿವಿನಿಂದ ಬಳಲ ಬಾರದು ಅನ್ನೋ ಉದ್ದೇಶದಿಂದ ಕೇಂದ್ರ ಸರಕಾರ ಉದ್ಯೋಗ ಖಾತ್ರಿ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಯ ಸದುಪಯೋಗವನ್ನ ಗ್ರಾಮೀಣ ಜನರಿ ಕೂಡಾ ಹೆಚ್ಚಾಗಿ ಬಳಕೆ ಮಾಡಿಕೊಳ್ಳುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕೂಡ ಉದ್ಯೋಗ ಖಾತ್ರಿ ಯೋಜನೆ ಲಾಭವನ್ನ ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಲಾಕ್‌ಡೌನ್‌ ಸಂದರ್ಭದಲ್ಲಿ ಜನತೆಗೆ ಉದ್ಯೋಗ ನೀಡಿರುವುದು ಜಿಲ್ಲೆಯ ಜನತೆಗೆ ಅನುಕೂಲವಾಗಿದೆ. ಕೊರೊನಾಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಉದ್ಯೋಗ ನೀಡಲಾಗಿದೆ. ಹೀಗಾಗಿ ಉದ್ಯೋಗ ಖಾತ್ರಿ ಯೋಜನೆ ನಮ್ಮ ಹಸಿವು ನೀಗಿಸಿದೆ. ನಮ್ಮ ಊರಿನಲ್ಲಿಯೇ ನಮಗೆ ಕೂಲಿ ಕೆಲಸ ಸಿಕ್ಕಿದೆ ಎಂದು ಕೂಲಿ ಕಾರ್ಮಿಕರು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಬೀದರ್​: ನ.24ರಿಂದ ಎರಡು ದಿನಗಳ ಕಾಲ ಅನುಭವಮಂಟಪ ಉತ್ಸವ

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಮಯದಲ್ಲಿಯೂ ಕೂಡ ಕುಟುಂಬಗಳಿಗೆ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿತ್ತು, ಸಾವಿರಾರು ಕುಟುಂಬಗಳು ಬದುಕುವ ಆಸೆ ಹುಟ್ಟಿಸಿದೆ. ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಡವರಿಗೆ ಅಕ್ಷಯ ಪಾತ್ರೆಯಾಗಿರುಬವುದಂತೂ ಸುಳ್ಳಲ್ಲ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.