ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕೋಲಾರದಲ್ಲಿ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿದೆ. ಅಷ್ಟೇ ಅಲ್ಲದೆ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ಉಂಟಾಗಿದ್ದು, ನಾಲ್ವರು ವ್ಯಕ್ತಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದ ಕ್ಲಾಕ್ ಟವರ್ ಬಳಿ ನಡೆದಿದೆ. ಸದ್ಯ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 16, 2024 | 9:30 PM

ಕೋಲಾರ, ಸೆಪ್ಟೆಂಬರ್​​ 16: ಈದ್ ಮಿಲಾದ್ (Eid Milad) ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ಉಂಟಾಗಿದ್ದು, ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದ ಕ್ಲಾಕ್ ಟವರ್ ಬಳಿ ನಡೆದಿದೆ. ಸೈಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಷಿಪ್, ಖಲೀಲ್ ಅಹ್ಮದ್​ ಮೇಲೆ ಸೈಯದ್ ವಸೀಂ ಪಾಷಾ, ತಾಹೀರ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ನಂತರ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಕ್ಲಾಕ್ ಟವರ್​ ಬಳಿ ಎಸ್​ಪಿ ನಿಖಿಲ್ ಮೊಕ್ಕಾಂ ಹೂಡಿದ್ದಾರೆ.

ಚಿಕ್ಕಮಗಳೂರು, ಚಿತ್ರದುರ್ಗ ನಂತರ ಕೋಲಾರದಲ್ಲೂ ಪ್ಯಾಲೆಸ್ತೀನ್ ಪರ ಘೋಷಣೆ

ಗುಂಪು ಘರ್ಷಣೆ ಒಂದು ಕಡೆ ಆದರೆ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿದೆ. ಕೋಲಾರದ ಅಂಜುಮನ್ ಸಂಸ್ಥೆ ಬಳಿ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದು, ‘ಫ್ರೀ ಪ್ಯಾಲೆಸ್ತೀನ್’ ಬರಹವುಳ್ಳ ಬಾವುಟ ಪ್ರದರ್ಶಿಸಿ ಘೋಷಣೆ ಕೂಗಲಾಗಿದೆ. ಕೂಡಲೇ ಪೊಲೀಸರು ಆ ಬಾವುಟವನ್ನು ತೆಗೆಸಿದ್ದಾರೆ. ಈ ಮೂಲಕ ಕೋಲಾರದ ಯುವಕರ ಪ್ಯಾಲೆಸ್ತೀನ್​ ಪ್ರೇಮಕ್ಕೆ ಪೊಲೀಸರು ತಿಳಿಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ

ಕೋಲಾರದ ಎಂಜಿ ರಸ್ತೆಯಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿತು. ಬೃಹತ್ ಬಾವುಟಗಳನ್ನು ಹಿಡಿದು ರಸ್ತೆಯಲ್ಲಿ ಯುವಕರ ಗುಂಪು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.

ಇದನ್ನೂ ಓದಿ: ಪಾಂಡವಪುರದಲ್ಲಿ ಆರ್​​ಎಸ್​​ಎಸ್ ಕಚೇರಿಗೆ ಪೊಲೀಸ್ ದಾಳಿ: ಖಾಕಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಇನ್ನು ಈ ವೇಳೆ ಅಲ್ಲದೇ ಬೇರೆ ದೇಶದ ಬಾವುಟಗಳನ್ನು ಹಾರಿಸದಂತೆ ವಿವಾದ ಸೃಷ್ಟಿಸದಂತೆ ತಿಳಿಹೇಳಿದ್ದಾರೆ. ಕೋಲಾರ ನಗರ ಠಾಣೆ ಸಿಪಿಐ ಸದಾನಂದ ಅವರ ಸಮಯ ಪ್ರಜ್ಞೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಾವುಟ ಹಾರಾಟ ಮಾಡದಂತೆ ಪೊಲೀಸರು ಯುವಕರಿಗೆ ತಿಳಿ ಹೇಳಿದ್ದಾರೆ. ಬಳಿಕ ಫ್ರೀ ಪ್ಯಾಲೆಸ್ತೀನ್ ತೆಗೆದು ಕಪ್ಪು ಬಾವುಟ ಹಾರಾಟ ಮಾಡಿದ ಯುವಕರ ಗುಂಪಿಗೆ ಪೊಲೀಸರು ದೇಶ ಪ್ರೇಮದ ಪಾಠ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್